Prajwal Revanna, arrest, videos: ಚಿಕ್ಕಮಗಳೂರು ; ವಿಡಿಯೋ ಅಪ್ಲೋಡ್ ಮಾಡಿದ್ದ ಪ್ರಜ್ವಲ್ ರೇವಣ್ಣ ಟ್ರೋಲ್ ಪೇಜ್ ಅಡ್ಮಿನ್ ಬಂಧನ 

10-05-24 06:48 pm       HK News Desk   ಕರ್ನಾಟಕ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ಟ್ರೋಲ್ ಪೇಜ್ ಅಡ್ಮಿನ್ ಒಬ್ಬನನ್ನು ಬಂಧಿಸಿದ್ದಾರೆ.

ಚಿಕ್ಕಮಗಳೂರು, ಮೇ.10: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ಟ್ರೋಲ್ ಪೇಜ್ ಅಡ್ಮಿನ್ ಒಬ್ಬನನ್ನು ಬಂಧಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಮಧ್ಯೆ ಪ್ರಜ್ವಲ್ ರೇವಣ್ಣರ ವಿಡಿಯೋ ಮತ್ತು ಫೋಟೋಗಳನ್ನು ಅಪ್ಲೋಡ್ ಮಾಡಿದ್ದ ಟ್ರೋಲ್ ಪೇಜ್ ಅಡ್ಮಿನ್ ಪ್ರಜ್ವಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 

ಕುದುರೆಮುಖ ಠಾಣೆ ಪೊಲೀಸರು ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ನಿವಾಸಿ ಪ್ರಜ್ವಲ್ ನನ್ನು ಬಂಧಿಸಿದ್ದಾರೆ. ಆರೋಪಿ ಪ್ರಜ್ವಲ್, ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡಿದ್ದ. ಈ ಬಗ್ಗೆ ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 67, 67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Chikamangaluru social Facebook admin arrested for uploading sex videos of Prajwal Revanna.