Arvind Kejriwal, Supreme court: ಸಿಎಂ ಕೇಜ್ರಿವಾಲ್ ಗೆ ಕೊನೆಗೂ ಸುಪ್ರೀಂ ಕೋರ್ಟ್ ರಿಲೀಫ್ ; ಜೈಲಿನಿಂದ ರಿಲೀಸ್

10-05-24 03:46 pm       HK News Desk   ದೇಶ - ವಿದೇಶ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊನೆಗೂ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ್ದು, ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ನವದೆಹಲಿ, ಮೇ.10: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊನೆಗೂ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ್ದು, ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊನೆಗೂ ಜಾಮೀನು ದೊರಕಿದ್ದು, ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಕುರಿತು ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶವನ್ನು ನೀಡಿದೆ.

ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದ್ದು, ಇದರಿಂದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಂತಾಗಿದೆ.

Supreme Court: Latest news, Updates, Photos, Videos and more.

ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಂತರ ಜಾಮೀನಿಂದ ಆಮ್ ಆದ್ಮಿ ಪಕ್ಷ ಹಾಗೂ ದಿಲ್ಲಿ ಸರ್ಕಾರಕ್ಕೆ ದೊಡ್ಡ ನಿರಾಳತೆ ಕೊಟ್ಟಿದೆ. ಆದರೆ ಅರವಿಂದ್ ಕೇಜ್ರಿವಾಲ್ ಅವರು ಆಡಳಿತಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ. ಮುಂದಿನ 20 ದಿನ ಅವರು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಬಹುದಾಗಿದೆ.

ಜೂನ್ 1ರಂದು ಲೋಕಸಭೆ ಚುನಾವಣೆಯ ಕೊನೆಯ ಹಾಗೂ ಏಳನೇ ಹಂತದ ಚುನಾವಣೆ ನಡೆಯಲಿದೆ. ಅಲ್ಲಿಯವರೆಗೂ ಕೇಜ್ರಿವಾಲ್ ಅವರು ಚುನಾವಣೆಗೆ ಸಂಬಂಧಿಸಿದ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಬಹುದು. ಜೂನ್ 2ರಂದು ಅವರು ಜೈಲಿನ ಅಧಿಕಾರಿಗಳ ಮುಂದೆ ಶರಣಾಗಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.

ಅಂತೆಯೇ ಮಾರ್ಚ್ 21ರಂದು ಬಂಧನಕ್ಕೆ ಒಳಗಾದ ಬಳಿಕ ಜಾರಿ ನಿರ್ದೇಶನಾಲಯದ ಲಾಕಪ್ ಹಾಗೂ ತಿಹಾರ್ ಜೈಲಿನಲ್ಲಿ ಸುಮಾರು 50 ದಿನಗಳನ್ನು ಕಳೆದಿದ್ದರು.

Delhi Chief Minister Arvind Kejriwal was today granted bail by the Supreme Court to campaign for the ongoing Lok Sabha elections. The court asked the leader to surrender on June 2 for questioning in an alleged money laundering case linked to the Delhi excise policy.