ಬ್ರೇಕಿಂಗ್ ನ್ಯೂಸ್
01-06-22 12:07 pm HK News Desk ಕ್ರೈಂ
ತಿರುಚ್ಚಿ, ಜೂ 1: ತಮಿಳುನಾಡಿನ ತಿರುಚ್ಚಿಯಲ್ಲಿ 16 ವರ್ಷದ ಬಾಲಕಿಯೊಬ್ಬಳು ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 22 ವರ್ಷದ ಯುವಕ ಆಕೆಯನ್ನು 14 ಬಾರಿ ಇರಿದು ಪರಾರಿಯಾಗಿದ್ದ.
ಆರೋಪಿ ವ್ಯಕ್ತಿಯನ್ನು ಕೇಶವನ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಹುಡುಕುತ್ತಿದ್ದಾಗ ಆತನೂ ಕೂಡ ಶವವಾಗಿ ಪತ್ತೆಯಾಗಿದ್ದಾನೆ.
ತಿರುಚ್ಚಿಯ ಅತಿಕುಲಂ ನಿವಾಸಿಯಾಗಿರುವ ಬಾಲಕಿ 11ನೇ ತರಗತಿಯಲ್ಲಿ ಓದುತ್ತಿದ್ದಳು. ಪರೀಕ್ಷೆ ಮುಗಿಸಿ ಸಂತ್ರಸ್ತೆ ತನ್ನ ಸಂಬಂಧಿಯನ್ನು ಭೇಟಿಯಾಗಲು ತೆರಳುತ್ತಿದ್ದಾಗ ಆರೋಪಿ ಕೇಶವನ್ ರೈಲ್ವೇ ಮೇಲ್ಸೇತುವೆ ಬಳಿ ಆಕೆಯನ್ನು ತಡೆಗಟ್ಟಿ ತನ್ನ ಪ್ರೀತಿ ಒಪ್ಪಿಕೊಳ್ಳುವುದಕ್ಕಾಗಿ ಪೀಡಿಸಿದ್ದಾನೆ.
ಜೂನ್ 2021ರಲ್ಲಿ ಇದೇ ಹುಡುಗಿಯನ್ನು ಅಪಹರಿಸಿದ್ದಕ್ಕಾಗಿ ಕೇಶವನ್ ಮೇಲೆ ಈಗಾಗಲೇ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿತ್ತು ಎಂದು ಸಂತ್ರಸ್ತೆಯ ಸಂಬಂಧಿಯೊಬ್ಬರು ತಿಳಿಸಿದ್ದಾರೆ.
ಬಾಲಕಿಗೆ 14 ಬಾರಿ ಇರಿದ ಕೇಶವನ್ ;
ಚೂರಿ ಇರಿತದ ದಿನ ತಾನು ಆಕೆಯನ್ನು ಪ್ರೀತಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದ ಕೇಶವನ್ ಬಾಲಕಿ ಆತನ ಪ್ರೀತಿ ನಿರಾಕರಿಸಿದಾಗ ಚಾಕುವಿನಿಂದ ಇರಿದಿದ್ದಾನೆ. ಜೊತೆಗೆ ಬಾಲಕಿ ಸಹಾಯಕ್ಕಾಗಿ ಕೂಗುವಾಗ ಕೇಶವನ್ ಆಕೆಗೆ 14 ಬಾರಿ ಇರಿದಿದ್ದಾನೆ. ಬಳಿಕ ಚಾಕುವನ್ನು ಸ್ಥಳದಲ್ಲೇ ಬಿಟ್ಟು ಓಡಿ ಹೋಗಿದ್ದಾನೆ. ಬಾಲಕಿ ಕೆಳಗೆ ಬಿದ್ದಿರುವುದನ್ನು ಕಂಡ ಸ್ಥಳೀಯರು ಆಕೆಯ ದೇಹದಿಂದ ರಕ್ತ ಹರಿಯುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಕೆ ಚಿಂತಾಜನಕ ಸ್ಥಿತಿಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಶವವಾಗಿ ಪತ್ತೆಯಾದ ಆರೋಪಿ;
ಆರೋಪಿಯನ್ನು ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಮೂರು ವಿಶೇಷ ತಂಡಗಳು ಶೋಧ ನಡೆಸುತ್ತಿದ್ದವು. ಮಂಗಳವಾರ ರಾತ್ರಿ ರೈಲ್ವೆ ಹಳಿ ಮೇಲೆ ಆರೋಪಿ ಶವವಾಗಿ ಪತ್ತೆಯಾಗಿದ್ದಾನೆ.
A 16-year-old girl in Tamil Nadu’s Trichy was stabbed 14 times by a 22-year-old man for refusing to accept his love. The man was identified as Kesavan and police are hunting him.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm