ಬ್ರೇಕಿಂಗ್ ನ್ಯೂಸ್
19-06-22 11:02 am Udupi Correspondent ಕ್ರೈಂ
ಉಡುಪಿ, ಜೂನ್ 19: ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಮತ್ತು ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ತಲೆ ತೆಗೆದರೆ 20 ಲಕ್ಷ ಬಹುಮಾನ ಕೊಡುವುದಾಗಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಪ್ರಕರಣದಲ್ಲಿ ಪೊಲೀಸರು ಮಂಗಳೂರಿನ ಬಜ್ಪೆ ನಿವಾಸಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಜ್ಪೆ ನಿವಾಸಿ ಮಹಮ್ಮದ್ ಶಫಿ (26) ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ವಿರುದ್ಧ ಮಾರಿಗುಡಿ 6 ಎಂಬ ಹೆಸರಿನ Instagram ಖಾತೆಯಲ್ಲಿ ಬೆದರಿಕೆ ಹಾಕಲಾಗಿತ್ತು. ಈ ಬಗ್ಗೆ ಯುವಮೋರ್ಚಾ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷ ಸಚಿನ್ ಸುವರ್ಣ ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ಬೆನ್ನಲ್ಲೇ ಕಾರ್ಕಳ ಉಪ ವಿಭಾಗದ ಎಎಸ್ಪಿ ಎಸ್.ವಿಜಯಪ್ರಸಾದ್, ಸೈಬರ್ ಪೊಲೀಸ್ ಠಾಣೆಯ ಸಿಬಂದಿ ಆಧುನಿಕ ತಂತ್ರಜ್ಞಾನವನ್ನು ಬಳಸಿ ತನಿಖೆ ನಡೆಸಿದಾಗ ಬೆದರಿಕೆ ಪೋಸ್ಟ್ ಹಾಕಿದ್ದು ಬಜ್ಪೆ ನಿವಾಸಿ ಮಹಮ್ಮದ್ ಶಾಫಿ ಎಂದು ಮಾಹಿತಿ ಸಂಗ್ರಹಿಸಿದ್ದರು.
ಆಬಳಿಕ ಉಡುಪಿ ಎಸ್ಪಿ ವಿಷ್ಣುವರ್ಧನ್ ಆರೋಪಿ ಪತ್ತೆಗೆ ಕಾಪು ಸಿಪಿಐ ಪ್ರಕಾಶ್, ಪಿಎಸ್ಐ ಶೈಲ ಡಿ.ಎಂ. ನೇತೃತ್ವದಲ್ಲಿ ತಂಡ ರಚಿಸಿದ್ದು ಆರೋಪಿಯನ್ನು ಬಜ್ಪೆ ತಾರಿಕಂಬಳ ಬಸ್ ನಿಲ್ದಾಣದ ಬಳಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖೆ ಸಂದರ್ಭದಲ್ಲಿ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು ಆರು ತಿಂಗಳ ಹಿಂದೆ ಸ್ನೇಹಿತ ಆಸಿಫ್ ಜೊತೆ ಸೇರಿಕೊಂಡು ಮಾರಿಗುಡಿ ಹೆಸರಲ್ಲಿ ಇನ್ ಸ್ಟಾ ಗ್ರಾಮ್ ಪೇಜ್ ತೆರೆದಿದ್ದಾಗಿ ತಿಳಿಸಿದ್ದಾನೆ. ಅಲ್ಲದೆ, ಯಶಪಾಲ್ ಸುವರ್ಣ ಹಾಗೂ ಪ್ರಮೋದ್ ಮುತಾಲಿಕ್ ತಲೆ ಕಡಿದರೆ 20 ಲಕ್ಷ ಎಂದು ಪೋಸ್ಟ್ ಹಾಕಿದ್ದಾಗಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
One person from Bajpe was arrested by Kaup police in relation to the death threat case to Yashpal Suvarna through an Instagram page by the name Maarigudi_06. The arrested is identified as Mohammed Shafi. He has been sent to 14 days judicial custody. Shafi had posted a death threat message against Yashpal Suvarna and Pramodh Muthalik.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm