ಬ್ರೇಕಿಂಗ್ ನ್ಯೂಸ್
11-07-22 06:06 pm Mangalore Correspondent ಕ್ರೈಂ
ಮಂಗಳೂರು, ಜುಲೈ 11: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ, ಪ್ರೀತಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಗುತ್ತಿಗೆ ವೈದ್ಯನಾಗಿರುವ ಡಾ.ಅನುಷ್ ನಾಯ್ಕ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
2021ರ ಮಾರ್ಚ್ ತಿಂಗಳಿನಲ್ಲಿ ಬಂಟ್ವಾಳ ತಾಲೂಕಿನ ಮಾಣಿಯಲ್ಲಿರುವ ಸರಕಾರಿ ಆಸ್ಪತ್ರೆಯ ಬಳಿ ಸಿಕ್ಕಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಪ್ರೀತಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಇತ್ತೀಚೆಗೆ ವೈದ್ಯನಿಗೆ ಬೇರೆ ಮದುವೆಯಾಗಿದ್ದು, ಈ ಬಗ್ಗೆ ಫೋನ್ ಮಾಡಿದ್ದ ಹುಡುಗಿಯನ್ನು ಗದರಿಸಿದ್ದಾನೆ. ಅಲ್ಲದೆ, ಫೋನ್ ಕಟ್ ಮಾಡದಿದ್ದರೆ ನೀನು ಮತ್ತು ನಿನ್ನ ತಂದೆ, ತಾಯಿಯನ್ನು ಕೊಂದು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿಯ ತಾಯಿ ಜುಲೈ 10ರಂದು ವಿಟ್ಲ ಠಾಣೆಗೆ ದೂರು ನೀಡಿದ್ದರು.
ಅದರಂತೆ, ವಿಟ್ಲ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇಂದು ವಿಟ್ಲ ಪೊಲೀಸರು ಮಾಣಿ ಬಳಿಯಿಂದ ಆರೋಪಿ ವೈದ್ಯನನ್ನು ಬಂಧಿಸಿದ್ದಾರೆ. ಅನುಷ್ ನಾಯ್ಕ ಮಾಣಿ ಗ್ರಾಮದ ನಿವಾಸಿಯಾಗಿದ್ದು, ಮಂಗಳೂರಿನ ವೆನ್ಲಾಕ್ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಈ ಹಿಂದೆ ಒಂದು ಮದುವೆಯಾಗಿ ಆಕೆಯನ್ನು ತ್ಯಜಿಸಿದ್ದ ಅನುಷ್ ನಾಯ್ಕ ಇತ್ತೀಚೆಗೆ ಎರಡನೇ ಮದುವೆಯಾಗಿದ್ದ. ಬಾಲಕಿಯು ಒಂದು ವರ್ಷದ ಹಿಂದಿನ ವಿಚಾರಕ್ಕೆ ಈಗ ಪೊಲೀಸ್ ದೂರು ನೀಡಿದ್ದು, ಆರೋಪಿ ವೈದ್ಯ ಜೈಲು ಪಾಲಾಗುವಂತೆ ಮಾಡಿದ್ದಾಳೆ.
Mangalore Wenlock doctor arrested by Vitla police for sexual harassment. The arrested has been identified as Dr Anush.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm