ಬ್ರೇಕಿಂಗ್ ನ್ಯೂಸ್
16-07-22 10:41 pm Mangalore Correspondent ಕ್ರೈಂ
ಮಂಗಳೂರು, ಜುಲೈ 16 : ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿ ಹಾಗೂ ಆತನ ಪತ್ನಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಮಂಗಳೂರು ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ರಾಜೇಂದ್ರ ಬಿ ನೇತೃತ್ವದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಾವೂರು ಶಂಕರ ನಗರ ಕೆ.ಸಿ ಆಳ್ವ ಲೇಔಟ್ ಒಳಗಿನ ಮನೆಯೊಂದಕ್ಕೆ ದಾಳಿ ನಡೆಸಿ ಆರೋಪಿ ವಿಖ್ಯಾತ್ @ ವಿಕ್ಕಿ ಬಪ್ಪಾಲ್(28) ಮತ್ತು ಆತನ ಪತ್ನಿ ಅಂಜನಾ(24) ಳನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ ಒಟ್ಟು 2,200 ಕೆಜಿ ತೂಕದ ರೂ. 22,000 ಮೌಲ್ಯದ ಗಾಂಜಾ, ನಗದು ರೂ. 1,500, ಮೊಬೈಲ್ ಫೋನ್-1 ಮತ್ತು ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಸೊತ್ತಿನ ಒಟ್ಟು ಮೌಲ್ಯ ರೂ. 92,000/- ಆಗಬಹುದು. ಗಾಂಜಾ ಮಾರಾಟ ಜಾಲದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ.
ವಿಕ್ಕಿ ಬಪ್ಪಾಲ್ ವಿರುದ್ದ ಈ ಹಿಂದೆ ಮಂಗಳೂರು ನಗರದ ದಕ್ಷಿಣ, ಉತ್ತರ, ಬರ್ಕೆ, ಉರ್ವಾ, ಗ್ರಾಮಾಂತರ, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆ ಯತ್ನ, ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಹಾಗೂ ಕಿಡ್ನಾಪ್ ಸಂಬಂಧಪಟ್ಟಂತೆ ಒಟ್ಟು 13 ಪ್ರಕರಣಗಳು ದಾಖಲಾಗಿರುತ್ತದೆ. ಅಂಜನಾ ವಿರುದ್ಧವೂ ಈ ಹಿಂದೆ ಕಂಕನಾಡಿ ನಗರ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಆರೋಪಿ ಹಾಗೂ ಆತನ ಪತ್ನಿ ಸೇರಿಕೊಂಡು ಮಂಗಳೂರು ನಗರದ ಎಂ ಜಿ ರಸ್ತೆಯಲ್ಲಿರುವ ವಿದ್ಯಾಸಂಸ್ಥೆಗಳ ಪರಿಸರದಲ್ಲಿ ಹಾಗೂ ಕೆಪಿಟಿ, ಕದ್ರಿ, ಜೆಪ್ಪು ಬಪ್ಪಾಲ್ ಪರಿಸರದಲ್ಲಿ ಗಾಂಜಾವನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
The CCB police arrested a couple for possessing ganja at Kavoor on Saturday, July 16.The CCB police, guided by inspector Mahesh Prasad and led by PSI Rajendra conducted a raid on a residence in Shankara Nagara, K C Alva Layout, Kavoor.The arrested have been been identified as Vikyath alias Vikky Bappal (28) and his wife Anjana (21), residents of Shankara Nagara.From the accused, Rs 22,000 worth of 2.200 kg ganja, Rs 1,500 cash, one mobile phone and digital weighing machine all totalling worth Rs 92,000, have been seized.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm