ಬ್ರೇಕಿಂಗ್ ನ್ಯೂಸ್
24-07-22 12:53 pm Bangalore Correspondent ಕ್ರೈಂ
bnಬೆಂಗಳೂರು, ಜುಲೈ 24 : ನಗರದ ಇನ್ಫೆಂಟ್ರಿ ರಸ್ತೆಯ ಪೊಲೀಸ್ ಕಮಿಷನರ್ ಕಚೇರಿ ಬಳಿ ಪಾರ್ಕ್ ಮಾಡಿದ್ದ ಕಾರಿನ ಗಾಜು ಒಡೆದು ದುಷ್ಕರ್ಮಿಗಳು ರೂ. 4.50 ಲಕ್ಷ ನಗದು ಇದ್ದ ಬ್ಯಾಗನ್ನು ಕದ್ದುಕೊಂಡು ಪರಾರಿಯಾಗಿದ್ದಾರೆ.
ಹಣ ಕಳೆದುಕೊಂಡ ಲಕ್ಷ್ಮೀಶ್ ಎಂಬವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಓಜಿಕುಪ್ಪಂ ತಂಡದವರು ಕೃತ್ಯ ಎಸಗಿರುವ ಅನುಮಾನವಿದೆ ಎಂದು ವಿಧಾನಸೌಧ ಠಾಣೆ ಪೊಲೀಸರು ತಿಳಿಸಿದ್ದಾರೆ.
ಮನೆ ಸಾಲದ ಕಂತು ಕಟ್ಟಲೆಂದು ಲಕ್ಷ್ಮೀಶ್ ಅವರು ಮಹದೇವಪುರದ ಕೆನರಾ ಬ್ಯಾಂಕ್ ಶಾಖೆಯಲ್ಲಿ ₹ 4.50 ಲಕ್ಷ ಹಣವನ್ನು ಡ್ರಾ ಮಾಡಿಕೊಂಡಿದ್ದರು. ಅದನ್ನು ಬೇರೆ ಬ್ಯಾಂಕ್‌ಗೆ ಪಾವತಿಸಲು ನಗರಕ್ಕೆ ಬಂದಿದ್ದರು. ಇದರ ನಡುವೆ, ಇನ್ಫೆಂಟ್ರಿ ರಸ್ತೆಯ ಕಾನೂನು ಮಾಪನ ಇಲಾಖೆ ಕಟ್ಟಡದ ಪಾರ್ಕಿಂಗ್ ಜಾಗದಲ್ಲಿ ಕಾರು ನಿಲ್ಲಿಸಿ, ಕೆಲಸದ ನಿಮಿತ್ತ ತನ್ನ ಕಚೇರಿಗೆ ಹೋಗಿದ್ದರು.
ಲಕ್ಷ್ಮೀಶ್ ಕಾರಿನಲ್ಲಿ ಹಣ ಇಟ್ಟಿರುವುದನ್ನು ತಿಳಿದಿದ್ದ ದುಷ್ಕರ್ಮಿಗಳು, ಮಹದೇವಪುರದಿಂದ ಪಲ್ಸರ್ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಲಕ್ಷ್ಮೀಶ್ ಕಾರು ಪಾರ್ಕಿಂಗ್ ಮಾಡಿದ್ದ ಜಾಗದಲ್ಲಿ ಗಾಜು ಒಡೆದು, ಒಳಗಿದ್ದ ಹಣದ ಬ್ಯಾಗನ್ನು ಲಪಟಾಯಿಸಿ ಪರಾರಿಯಾಗಿದ್ದಾರೆ. ಲಕ್ಷ್ಮೀಶ್ ತನ್ನ ಕೆಲಸ ಮುಗಿಸಿ ವಾಪಸು ಕಾರಿನ ಬಳಿ ಬಂದಾಗ ವಿಷಯ ಗೊತ್ತಾಗಿದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
Thieves break car parked near Bangalore Commissioner office and take 4.50 lakhs.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm