ಬ್ರೇಕಿಂಗ್ ನ್ಯೂಸ್
09-08-22 01:38 pm HK News Desk ಕ್ರೈಂ
ಲಖನೌ, ಆಗಸ್ಟ್ 9: ಪ್ರಿಯಕರನ ಕತ್ತು ಸೀಳಿ ಕೊಲೆ ಮಾಡಿ, ಮೃತದೇಹವನ್ನು ಟ್ರಾಲಿ ಬ್ಯಾಗ್ನಲ್ಲು ತುಂಬಿ ಸಾಗಿಸುತ್ತಿದ್ದ ಆರೋಪಿ ಮಹಿಳೆಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.
ಕೊಲೆಯಾದ ಪ್ರಿಯಕರನ್ನು 22 ವರ್ಷದ ಫಿರೋಜ್ ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಕ್ಷೌರಿಕನಾಗಿದ್ದ. 36 ವರ್ಷದ ಪ್ರೇಯಸಿ ಪ್ರೀತಿ ಶರ್ಮಾ ಎಂಬಾಕೆಯಿಂದ ಬರ್ಬರವಾಗಿ ಹತ್ಯೆಯಾಗಿದ್ದಾನೆ. ಮದುವೆ ಆಗಲು ನಿಕಾರಿಸಿದ್ದಕ್ಕೆ ಪ್ರೀತಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಪ್ರೀತಿ ಮತ್ತು ಫಿರೋಜ್ ಕಳೆದ 4 ವರ್ಷಗಳಿಂದ ಒಟ್ಟಿಗೆ ಬಾಳುತ್ತಿದ್ದರು ಅಂದರೆ, ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದರು. ಪ್ರೀತಿಗೆ ಈಗಾಗಲೇ ಮದುವೆ ಆಗಿದ್ದು, ಮಕ್ಕಳ ಸಾವಿನ ಬಳಿಕ ಗಂಡನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಈ ವೇಳೆ ಆಕೆಗೆ ಫಿರೋಜ್ ಪರಿಚಯವಾಗಿದೆ. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿ ಒಟ್ಟಿಗೆ ವಾಸಿಸುತ್ತಿದ್ದರು. ಆದರೆ, ಪ್ರೀತಿ ಮದುವೆ ಆಗುವಂತೆ ದುಂಬಾಲು ಬಿದ್ದಾಗ, ಮದುವೆ ಆಗಲು ಫಿರೋಜ್ ನಿರಾಕರಿಸುತ್ತಿದ್ದ. ಕೋಮುಗಲಭೆಗೆ ಕಾರಣವಾಗಬಹುದು ಎಂಬ ಕಾರಣ ನೀಡಿ ಮದುವೆಗೆ ನಿರಾಕರಿಸುತ್ತಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಾಗ, ತಾಳ್ಮೆ ಕಳೆದುಕೊಂಡ ಪ್ರೀತಿ, ರೇಜರ್ ತೆಗೆದುಕೊಂಡು ಫಿರೋಜ್ ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ಬಳಿಕ ದೊಡ್ಡದಾಗ ಟ್ರಾಲಿ ಬ್ಯಾಗ್ ತೆಗೆದುಕೊಂಡು ಮೃಹದೇಹವನ್ನು ಬೀಸಾಡಿ ಬರಲು ಹೋದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.
ಸುಮಾರು ಒಂದು ದಿನಗಳ ಕಾಲ ಮೃತದೇಹವಿದ್ದ ಬ್ಯಾಗ್ ಅನ್ನು ಅಪಾರ್ಟ್ಮೆಂಟ್ ಒಳಗೆ ಇಟ್ಟಿದ್ದಳು. ಜನಜಂಗುಳಿ ಇರುವ ಪ್ರದೇಶದಲ್ಲಿ ಎಸೆದು ಬರಲು ಯತ್ನಿಸುತ್ತಿದ್ದಳು. ಆದರೆ, ಅದೇ ಏರಿಯಾದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಅನುಮಾನಗೊಂಡು ಆಕೆಯನ್ನು ತಡೆದು ಪ್ರಶ್ನಿಸಿದ್ದಾರೆ. ಅಲ್ಲದೆ, ಬ್ಯಾಗ್ ಓಪನ್ ಮಾಡುವಂತೆ ಕೇಳಿದ್ದಾರೆ. ಮೃತದೇಹ ಇದ್ದುದ್ದನ್ನು ನೋಡಿ ಆಕೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರಂಭದಲ್ಲಿ ಇದೊಂದು ಅಪಘಾತ ಎಂದು ಹೇಳಿದ್ದ ಪ್ರೀತಿ, ಕೊನೆಗೆ ತಪ್ಪು ಒಪ್ಪಿಕೊಂಡು ಜೈಲು ಪಾಲಾಗಿದ್ದಾಳೆ.
Ghaziabad Police has arrested a woman identified as Preeti Sharma for allegedly killing her live-in partner identified as a barber Firoz. Police said Sharma killed Firoz by slitting his throat with a razor. She was arrested by the Police while attempting to dispose of the body that she had stuffed in a trolley bag. She was planning to leave the dead body-stuffed suitcase on a train.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am