ಬ್ರೇಕಿಂಗ್ ನ್ಯೂಸ್
10-08-22 12:16 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 10: ದನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಬಜ್ಪೆ ಪೊಲೀಸರು ಅದ್ಯಪಾಡಿ ನಿವಾಸಿಯನ್ನು ಬಂಧಿಸಿದ್ದಾರೆ. ಅದ್ಯಪಾಡಿ ಮೋಂತಿಬೈಲು ನಿವಾಸಿ ಮೊಹಮ್ಮದ್ ಅಜರುದ್ದೀನ್ (31) ಬಂಧಿತ.
ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಮನೆಗೆ ತೆರಳಿದ್ದಾಗ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ತಪ್ಪಿಸಿಕೊಂಡಿದ್ದ. ಘಟನೆ ಸಂಬಂಧಿಸಿ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚನೆಯಂತೆ ಆರೋಪಿಯನ್ನು ಬಂಧಿಸಿದ್ದಾರೆ.
ಇತ್ತೀಚೆಗೆ ಮೂಡುಬಿದ್ರೆಯ ಕಲ್ಲಬೆಟ್ಟು ಮತ್ತು ಕಾರ್ಕಳದ ಬಂಗ್ಲೆಗುಡ್ಡೆಯಲ್ಲಿ ದನ ಕಳ್ಳತನಗೈದ ಪ್ರಕರಣದಲ್ಲಿ ಭಾಗಿಯಾಗಿದ್ದ ಅಜರುದ್ದೀನನ್ನು ಪೊಲೀಸರು ವಶಕ್ಕೆ ಪಡೆಯಲು ಹೋಗಿದ್ದಾಗ ಘಟನೆ ನಡೆದಿತ್ತು. ಮನೆ ಕಳ್ಳತನ ಮತ್ತು ದನ ಕಳವು ವಿಚಾರದಲ್ಲಿ ಕಾರ್ಕಳ, ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹೊಯ್ಸಳ ಪೊಲೀಸರ ಮೇಲೆ ಹಲ್ಲೆ ಯತ್ನ
ಮತ್ತೊಂದು ಇದೇ ರೀತಿಯ ಪ್ರಕರಣದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಬಂದರು ಪೊಲೀಸರು ಆಟೋ ಚಾಲಕ ವಿನೋದ್ ಪೂಜಾರಿ ಎಂಬಾತನನ್ನು ಬಂಧಿಸಿದ್ದಾರೆ. ನಗರದ ಸ್ಟೇಟ್ ಬ್ಯಾಂಕ್ ಬಳಿ ರಾವ್ ಅಂಡ್ ಸರ್ಕಲ್ ಪ್ರದೇಶದಲ್ಲಿ ಹೊಯ್ಸಳ ಪೊಲೀಸರು ಟ್ರಾಫಿಕ್ ಜಾಮ್ ಸರಿಪಡಿಸುತ್ತಿದ್ದಾಗ ಆಟೋ ಚಾಲಕ ಕುಡಿದ ಮತ್ತಿನಲ್ಲಿ ಹಲ್ಲೆಗೆ ಯತ್ನಿಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಬಗ್ಗೆ ಬಂದರು ಠಾಣೆಯಲ್ಲಿ ಕೇಸು ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Bajpe police have arrested accused Mohammed Azharuddin (31) alias Azhar, a resident of Adyapadi Montibail for abusing, assaulting and obstructing the police from carrying out their duties. On police interrogation, it came to light that Azhar was involved in cases of cattle thefts recently in Kallabettuva in Moodbidri and Bangelgudde in Karkala. Azhar was said to be absconding and avoiding arrest.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm