ಬ್ರೇಕಿಂಗ್ ನ್ಯೂಸ್
23-08-22 12:43 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ದೇಶದ್ರೋಹದ ಕೇಸ್ ಜಡಿದಿರುವ ಸಂಪಿಗೆಹಳ್ಳಿ ಪೊಲೀಸರು ತನಿಖೆ ಚುರುಕು ಮಾಡಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಬಳ್ಳಾರಿ ಮೂಲದ ಸೌರಭ್ ಹಾಗೂ ಬೆಂಗಳೂರಿನ ಸಹಕಾರ ನಗರದ ರಾಹುಲ್ ಎಂಬ ಇಬ್ಬರನ್ನು ತನಿಖೆಗೆ ಒಳಪಡಿಸಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ನ Karle Infra Pvt. Ltd ಕಂಪನಿಯಲ್ಲಿ ಕೆಲ್ಸ ಮಾಡ್ತಿದ್ದ ಸೌರಭ್ ಮತ್ತು ಆತನ ಗೆಳೆಯರು ಕೃತ್ಯ ಎಸಗಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದು ತಮಾಷೆ ಮಾಡೋದಕ್ಕೆ ಹೋಗಿ ಈ ರೀತಿ ಆಯ್ತು ಅಂಥ ಹೇಳಿಕೆ ನೀಡಿದ್ದಾರೆ.

ನಿಮಗೆ ತಾಕತ್ ಇದ್ರೆ ಪಾಕ್ ಪರ ಘೋಷಣೆ ಕೂಗಿ ಎಂದು ಗೆಳೆಯರ ನಡುವೆ ಸವಾಲು ಆಗಿತ್ತು. ಕ್ಲಬ್ ಹೌಸ್ನಲ್ಲಿ ಈ ಬಗ್ಗೆ ವಾರ್ ನಡೆಯುತ್ತಿದ್ದಾಗಲೇ, ಕೆಲ ಯುವಕರು ಸೇರಿ ಹುಚ್ಚಾಟ ಮೆರೆದಿದ್ದರು. ನಮ್ಮ ತಾಕತ್ ಬಗ್ಗೆ ಪ್ರಶ್ನೆ ಮಾಡ್ತೀರಾ ಎಂದು ಹೇಳಿ, ನಾವು ಹೇಳಿದ್ದನ್ನೇ ಮಾಡಿ ತೋರಿಸುತ್ತೇವೆಂದು ಪಾಕ್ ಪರ ಘೋಷಣೆ ಕೂಗಿದ್ದರು. ತಮಾಷೆ ಮಾಡೋಕೆ ಹೋಗಿ ಪಾಕ್ ಪ್ರೇಮಿಗಳಿಗೆ ಸಪೋರ್ಟ್ ಮಾಡಿದ್ದಲ್ಲದೆ, ಈಗ ಕಂಬಿ ಎಣಿಸುವಂತಾಗಿದೆ.

ಪ್ರಕರಣ ಸಂಬಂಧ ಇನ್ನೂ ಮೂವರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ದೇಶದ್ರೋಹ ವಿಚಾರದಲ್ಲಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 153ಎ (ಧರ್ಮ, ಬಣ್ಣದ ವಿಚಾರದಲ್ಲಿ ಎತ್ತಿ ಕಟ್ಟುವುದು, ದ್ವೇಷಕ್ಕೆ ಪ್ರಚೋದನೆ) ಅಡಿ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ.
Pro Pakistan slogans on club house in Bangalore two techies arrested in Bangalore. Recently a video had gone viral in which Bangalore techies were found shouting pro pak slogans.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am