ಬ್ರೇಕಿಂಗ್ ನ್ಯೂಸ್
30-08-22 06:06 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 30: ಬೆಂಗಳೂರಿನಿಂದ ಕಾರವಾರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಇದ್ದ ವ್ಯಾನಿಟಿ ಬ್ಯಾಗನ್ನು ಕಳವುಗೈದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಸೋಮವಾರ ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದ ರೈಲು ಮಧ್ಯರಾತ್ರಿ 2.30ರ ಸುಮಾರಿಗೆ ಪುತ್ತೂರು ರೈಲು ನಿಲ್ದಾಣಕ್ಕೆ ತಲುಪಿತ್ತು. ರೈಲು ಇನ್ನೇನು ಹೊರಡಿ ಸ್ವಲ್ಪ ಮುಂದೆ ಸಾಗುವಷ್ಟರಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಕೈಯಲ್ಲಿದ್ದ ವ್ಯಾನಿಟಿ ಬ್ಯಾಗನ್ನು ಕಿತ್ತುಕೊಂಡು ಓಡಿದ್ದಾನೆ.
ಬೆಂಗಳೂರಿನಲ್ಲಿ ವಾಸವಿರುವ ಕಾರವಾರ ಮೂಲದ ಶಿಕ್ಷಕ ದಂಪತಿ ರಮೇಶ್ ಮತ್ತು ನಿರ್ಮಲಾ ಚಿನ್ನಾಭರಣ ಕಳಕೊಂಡವರು. ನಿರ್ಮಲಾ ಅವರು ತಾನು ಮಲಗಿದ್ದ ತಲೆದಿಂಬಿನ ಅಡಿಯಲ್ಲಿ ಬ್ಯಾಗನ್ನು ಇರಿಸಿಕೊಂಡಿದ್ದರು. ಇದನ್ನು ಮೊದಲೇ ಗಮನಿಸಿದ್ದ ವ್ಯಕ್ತಿಯೊಬ್ಬ ವ್ಯಾನಿಟಿ ಬ್ಯಾಗನ್ನು ಹಿಡಿದೆಳೆದಿದ್ದಾನೆ. ಇಷ್ಟರಲ್ಲಿ ರೈಲು ಪುತ್ತೂರು – ಹಾರಾಡಿ ಬ್ರಿಡ್ಜ್ ದಾಟಿ ಮುಂದೆ ಸಿಟಿ ಗುಡ್ಡೆ ತಲುಪಿತ್ತು. ಮಹಿಳೆ ಗಾಬರಿಗೊಂಡು ಆತನನ್ನು ಬೆನ್ನತ್ತಿದ್ದು ಆಗಂತುಕ ರೈಲಿನಿಂದ ಹೊರಕ್ಕೆ ಹಾರಲು ಯತ್ನಿಸಿದ್ದಾನೆ. ಇದೇ ವೇಳೆ, ಮಹಿಳೆ ಬೊಬ್ಬೆ ಹೊಡೆಯುತ್ತಾ ರೈಲಿನ ಚೈನ್ ಎಳೆದಿದ್ದಾರೆ.
ರೈಲು ನಿಧಾನವಾಗುತ್ತಲೇ ವ್ಯಕ್ತಿ ಹೊರಕ್ಕೆ ಹಾರಿದ್ದು, ಕತ್ತಲೆಯಲ್ಲಿ ಪರಾರಿಯಾಗಿದ್ದಾನೆ. ಇದೇ ಮಹಿಳೆಯೂ ಆತನ ಜೊತೆಗೆ ರೈಲಿನಿಂದ ಹಾರಿದ್ದು, ಹಳಿಯ ಮೇಲೆ ಬಿದ್ದು ಗಾಯಗೊಂಡಿದ್ದಾರೆ. ವ್ಯಕ್ತಿ ಕತ್ತಲಲ್ಲಿ ದೂರಕ್ಕೆ ಓಡಿ ಪರಾರಿಯಾಗಿದ್ದ. ಗಾಯಗೊಂಡ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿ ದೂರಿನಂತೆ, 40 ಸಾವಿರ ರೂ. ನಗದು ಮತ್ತು ಚಿನ್ನಾಭರಣ ಸೇರಿ ಒಟ್ಟು 8 ಲಕ್ಷ ಮೌಲ್ಯದ ಸೊತ್ತು ಕಳವುಗೈದ ಬಗ್ಗೆ ಮಂಗಳೂರು ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Robbery in mangalore bangalore train, Vanity bag and gold ornaments worth lakhs stolen near Puttur
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am