ಬ್ರೇಕಿಂಗ್ ನ್ಯೂಸ್
07-10-20 02:22 pm Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 07: ಹತ್ರಾಸ್ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಕರಣದ ಪ್ರಮುಖ ಆರೋಪಿ ಜೊತೆ 19 ವರ್ಷದ ಸಂತ್ರಸ್ತ ಯುವತಿ ನಿರಂತರ ಸಂಪರ್ಕದಲ್ಲಿದ್ದಳು ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.
ಸೆಪ್ಟೆಂಬರ್ 14 ರಂದು ನಡೆದಿದ್ದ ಯುವತಿಯ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಅದೇ ಗ್ರಾಮದ ಸಂದೀಪ್ ಸಿಂಗ್ ಪ್ರಮುಖ ಆರೋಪಿ. ಈತನ ಜೊತೆ ಸಂತ್ರಸ್ತೆ ಯುವತಿ ನಿರಂತರ ಸಂಪರ್ಕದಲ್ಲಿದ್ದ ವಿಚಾರ ಕಾಲ್ ಡಿಟೈಲ್ಸ್ ನಲ್ಲಿ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಸಂತ್ರಸ್ತೆಯ ಕುಟುಂಬ ಮತ್ತು ಆರೋಪಿ ಸಂದೀಪ್ ಫೋನ್ ಟ್ರ್ಯಾಕ್ ಮಾಡಿರುವ ಪೊಲೀಸರು, ಆರೋಪಿಯು ಯುವತಿ ಜೊತೆಗೆ ನಿರಂತರ ದೂರವಾಣಿ ಸಂಪರ್ಕದಲ್ಲಿದ್ದ. ಸಂತ್ರಸ್ತೆಯ ಸಹೋದರನ ಫೋನ್ ನಿಂದ ಆರೋಪಿ ಸಂದೀಪ್ ಗೆ ನಿಯಮಿತವಾಗಿ ಕರೆಗಳು ಬರುತ್ತಿದ್ದವು. ಈ ದೂರವಾಣಿ ಸಂಭಾಷಣೆಗಳು 2019 ಅಕ್ಟೋಬರ್ 13ರಿಂದ ಪ್ರಾರಂಭವಾಗಿದ್ದವು. ಸಂತ್ರಸ್ತೆ ನೆಲೆಸಿದ್ದ ಹಳ್ಳಿ ಬೂಲ್ ಗಾಹಿಯಿಂದ ಕೇವಲ 2 ಕಿ.ಮೀ ವ್ಯಾಪ್ತಿಯಲ್ಲಿ ಹೆಚ್ಚಿನ ಕರೆಗಳನ್ನು ಮಾಡಲಾಗಿದೆ. ಎರಡು ಫೋನ್ ನಂಬರ್ ಗಳ ನಡುವೆ, ಒಟ್ಟು 104 ಬಾರಿ ಸಂಪರ್ಕ ಆಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಹಾಗೂ ಆರೋಪಿ ನಡುವೆ ನಿರಂತರ ಸಂಪರ್ಕ ಇತ್ತು ಎಂಬುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಸೆಪ್ಟೆಂಬರ್ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದರು. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಹಲ್ಲೆ ಮಾಡಿದ್ದರು. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ವಾರಗಳ ನಂತರ ಸೆ.29ರಂದು ಮೃತಪಟ್ಟಿದ್ದಳು.

ಪ್ರಕರಣದ ಕುರಿತು ದೇಶಾದ್ಯಂತ ಆಕ್ರೋಶ ಕೇಳಿಬರುತ್ತಿರುವ ಬೆನ್ನಲ್ಲೇ, ಯುವತಿ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಆಲಿಘಢ ಐಜಿ ಪಿಯೂಷ್ ಮೊರ್ಡಿಯಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ನಾಲ್ವರು ವ್ಯಕ್ತಿಗಳು ಕ್ರೂರವಾಗಿ ನಡೆದುಕೊಂಡಿದ್ದಾರೆ. ಸಾಮೂಹಿಕ ಅತ್ಯಾಚಾರವಾಗಿದೆ ಎಂಬುದರ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಉಲ್ಲೇಖವಾಗಿಲ್ಲ ಎಂದು ತಿಳಿಸಿದ್ದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm