ಬ್ರೇಕಿಂಗ್ ನ್ಯೂಸ್
27-10-22 09:18 pm HK News Desk ಕ್ರೈಂ
ಹೈದರಾಬಾದ್, ಅ.27: ತೆಲಂಗಾಣದಲ್ಲಿ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿರುವ ಬಗ್ಗೆ ಆರೋಪ ಕೇಳಿಬಂದಿದ್ದು, ಟಿಆರ್‌ಎಸ್ ಪಕ್ಷದ ನಾಲ್ವರು ಶಾಸಕರಿಗೆ ನೂರು ಕೋಟಿ ಹಣ ಕೊಟ್ಟು ಸೆಳೆಯಲು ನಡೆಸಿದ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದು ಭಾರೀ ಸುದ್ದಿಯಾಗಿದೆ.
ಟಿಆರ್‌ಎಸ್‌ನ ನಾಲ್ವರು ಶಾಸಕರಿಗೆ ಪಕ್ಷ ಬಿಡುವಂತೆ ಬಿಜೆಪಿ 100 ಕೋಟಿ ರೂ. ಆಫರ್ ಕೊಟ್ಟಿತ್ತು ಎಂಬ ಆರೋಪ ಕೇಳಿಬಂದಿದ್ದು, ಶಾಸಕರಿಗೆ ಲಂಚ ನೀಡಲು ಪ್ರಯತ್ನಿಸಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ತೆಲಂಗಾಣ ಬಿಜೆಪಿ ಘಟಕ ಈ ಆರೋಪಗಳನ್ನು ನಿರಾಕರಿಸಿದೆ. ನಲಗೊಂಡ ಜಿಲ್ಲೆಯ ಮುನುಗೊಂಡ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ನಡುವೆಯೇ ಬಿಜೆಪಿ ವಿರುದ್ಧ ಆಡಳಿತಾರೂಢ ಟಿಆರ್‌ಎಸ್ ಆಪರೇಷನ್ ಕಮಲದ ಆರೋಪ ಮಾಡಿದೆ.


ತೆಲಂಗಾಣದ ಅಚಂಪೇಟೆ ಶಾಸಕ ಗುವ್ವಲ ಬಾಲರಾಜ್, ತಂಡೂರ್ ಶಾಸಕ ರೋಹಿತ್ ರೆಡ್ಡಿ, ಕೊಲ್ಲಾಪುರ ಶಾಸಕ ಹರ್ಷವರ್ಧನ್ ರೆಡ್ಡಿ ಹಾಗೂ ಪಿನಪಾಕ ಕ್ಷೇತ್ರದ ಶಾಸಕ ರೇಗಾ ಕಾಂತಾ ರಾವ್ ಅವರಿಗೆ ಪಕ್ಷಾಂತರ ಮಾಡಲು 100 ಕೋಟಿ ರೂ. ಆಫರ್ ನೀಡಲಾಗಿದೆ ಎಂಬುದು ಟಿಆರ್‌ಎಸ್ ಆರೋಪ. ಪ್ರಕರಣಕ್ಕೆ ಸಂಬಂಧಿಸಿ ಸೈಬರಾಬಾದ್ ಪೊಲೀಸರು ಮೂವರನ್ನು ಬಂಧಿಸಿದ್ದು, ಭಾರೀ ಪ್ರಮಾಣದಲ್ಲಿ ಹಣ ಸಾಗಣೆ ಮಾಡುತ್ತಿದ್ದ ಕಾರನ್ನು ವಶಪಡಿಸಿದ್ದಾಗಿ ಮಾಹಿತಿ ನೀಡಿದ್ದಾರೆ. ಆದರೆ ಈ ಹಣ ಟಿಆರ್‌ಎಸ್ ಶಾಸಕರಿಗೆ ನೀಡಲು ಒಯ್ಯಲಾಗುತ್ತಿತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸೈದರಬಾದ್ ಎಸ್ಪಿ ಸ್ಟೀಫನ್ ರವೀಂದ್ರ, ಶಾಸಕರಿಗೆ ಹಣದ ಆಮಿಷ ನೀಡಿರುವ ಬಗ್ಗೆ ದೂರು ನೀಡಿದ್ದರು. ಬಾಲರಾಜ್ ಅವರ ರೆಸಾರ್ಟ್ ನಲ್ಲಿ ದಾಳಿ ನಡೆಸಿದ ಸಂದರ್ಭದಲ್ಲಿ ಮೂವರು ಪತ್ತೆಯಾಗಿದ್ದಾರೆ. ಇನ್ನಷ್ಟು ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
The political war between the ruling Telangana Rashtra Samithi (TRS) and Bharatiya Janata Party has intensified ahead of the Munugode by-polls after TRS leaders alleged that BJP lured its four MLAs by offering 100 crores each. According to the reports, the police registered a case against three persons after receiving a complaint from TRS MLA Pilot Rohit Reddy.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm