ಬ್ರೇಕಿಂಗ್ ನ್ಯೂಸ್
03-11-22 05:02 pm Mangalore Correspondent ಕ್ರೈಂ
ಮಂಗಳೂರು, ನ.3 : ಕೇರಳದಿಂದ ಮಾದಕ ವಸ್ತು ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಕೇರಳ ಗಡಿಭಾಗ ತಲಪಾಡಿ –ದೇವಿಪುರ ರಸ್ತೆಯ ತಚ್ಚಣಿ ಬಳಿ ಮೂವರನ್ನು ಬಂಧಿಸಿದ್ದಾರೆ.
ಉಳ್ಳಾಲದ ಅಬ್ದುಲ್ ರೆಹಮಾನ್ ಅರ್ಫಾನ್ (24), ಬೊಕ್ಕಪಟ್ಣದ ಅಬ್ದುಲ್ ಜಲೀಲ್ (42) ಹಾಗೂ ಬೋಳಿಯಾರ್ ಗ್ರಾಮದ ಮೊಹಮ್ಮದ್ ಮನ್ಸೂರ್ (29) ಬಂಧಿತರು. ಕೇರಳ ಭಾಗದಿಂದ ಕಾರಿನಲ್ಲಿ ಮಾದಕ ವಸ್ತು ತುಂಬಿಕೊಂಡು ಮಂಗಳೂರು ನಗರಕ್ಕೆ ಬರುತ್ತಿದ್ದಾಗ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸರು ದೇವಿಪುರ ರಸ್ತೆಯ ತಚ್ಚಾಣಿ ಬಳಿ ಕಾರನ್ನು ತಡೆದು ತಪಾಸಣೆ ಕೈಗೊಂಡಿದ್ದರು.

ಘಟನೆ ಸಂಬಂಧಿಸಿ ಆರೋಪಿಗಳಿಂದ ಒಟ್ಟು 32 ಗ್ರಾಂ ತೂಕದ ರೂ. 1,62,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು , 4 ಮೊಬೈಲ್ ಫೋನ್, ಡಿಜಿಟಲ್ ಮಾಪನ, ನಗದು ರೂ. 22,000/- ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಇಗ್ನೀಸ್ ಕಾರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆದ ವಸ್ತುಗಳ ಒಟ್ಟು ಮೌಲ್ಯ ರೂ. 7.17 ಲಕ್ಷ ಅಂದಾಜಿಸಲಾಗಿದೆ.
ಆರೋಪಿಗಳು ಮಾದಕ ವಸ್ತುಗಳನ್ನು ದೇರಳಕಟ್ಟೆ, ಮುಡಿಪು, ನೆತ್ತಿಲಪದವು, ತಲಪಾಡಿ, ಉಳ್ಳಾಲ ಹಾಗೂ ಮಂಗಳೂರು ನಗರ ಪರಿಸರದಲ್ಲಿ ಮಾರಾಟ ಮಾಡಲು ಕಾರಿನಲ್ಲಿ ತುಂಬಿಸಿ ತರುತ್ತಿದ್ದರೆನ್ನಲಾಗಿದೆ. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಂಧಿತ ಅಬ್ದುಲ್ ರೆಹಮಾನ್ ಅರ್ಫಾನ್ ವಿರುದ್ಧ ಮಂಗಳೂರು ನಗರದ ಉಳ್ಳಾಲ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿದೆ. ಅಬ್ದುಲ್ ಜಲೀಲ್ ವಿರುದ್ದ ಈ ಹಿಂದೆ 1999ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಆರೋಪಿ ಮೊಹಮ್ಮದ್ ಮನ್ಸೂರ್ ಎಂಬಾತನ ವಿರುದ್ಧ ಕೊಣಾಜೆ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
illegal purchase of drugs from Kerala, three arrested by Mangalore police at talapady border. The arrested three are residents of Mangalore. The CCB police who received details nabbed the peddlers at the Kerala border.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am