ಬ್ರೇಕಿಂಗ್ ನ್ಯೂಸ್
12-10-20 05:01 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 12: ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಜ್ಯೋತಿಷಿ ನಿರಂಜನ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿಯ ಸಂಬಂಧ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ.
ಜ್ಯೋತಿಷಿ ನಿರಂಜನ್ ಭಟ್ ಅವರು ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿಯೊಂದಿಗೆ ಸೇರಿ ಭಾಸ್ಕರ್ ಶೆಟ್ಟಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು. ಅಲ್ಲದೇ, ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿದೆ. 2016 ಜುಲೈ 28 ರಂದು ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ನಡೆದಿದ್ದು, ಅವರ ತಲೆಗೆ ಬಲವಾಗಿ ರಾಡ್ ನಿಂದ ಹೊಡೆದು, ಶವವನ್ನು ಹೋಮಕುಂಡದಲ್ಲಿ ಸುಡಲಾಗಿತ್ತು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಎಸ್ ಬೋಪಣ್ಣ ಮತ್ತು ವಿ.ರಾಮಸುಬ್ರಮಣ್ಯಂ ಅವರನ್ನೊಳಗೊಂಡ ಪೀಠವು ಅರ್ಜಿಯ ಕುರಿತು ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೋರಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಅರ್ಜಿದಾರರಾದ ನಿರಂಜನ್ ಭಟ್ ಜುಲೈ 27 ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. 2019, ಮೇ 10 ರಂದು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಕೆಲವು ಸಾಕ್ಷ್ಯಾಧಾರಗಳು ಇನ್ನೂ ವಿಚಾರಣೆಗೆ ಒಳಪಡಿಸಲಾಗಿಲ್ಲ. ಇದರ ವಿಚಾರಣೆಗೆ ಆರು ತಿಂಗಳು ಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿತ್ತು.
ಕೆಲವು ಸಾಕ್ಷಿದಾರರನ್ನು ಆರೋಪಿಗಳ ಎದುರಲ್ಲೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಬೇಕು ಎಂದು ಹೈಕೋರ್ಟ್ ಹೇಳಿದೆ. ಭಾಸ್ಕರ್ ಶೆಟ್ಟಿ ಪತ್ನಿಗೆ ಜಾಮೀನು ನೀಡಲಾಗಿದೆ.
ಅರ್ಜಿದಾರರಾದ ನಿರಂಜನ್ ಭಟ್ ಜುಲೈ 27 ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. 2019, ಮೇ 10 ರಂದು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಕೆಲವು ಸಾಕ್ಷ್ಯಾಧಾರಗಳು ಇನ್ನೂ ವಿಚಾರಣೆಗೆ ಒಳಪಡಿಸಲಾಗಿಲ್ಲ. ಇದರ ವಿಚಾರಣೆಗೆ ಆರು ತಿಂಗಳು ಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿತ್ತು.
The Karnataka government has been issued a notice by the Supreme Court on a plea for bail moved by the astrologer accused in the murder of businessman Bhaskar Shetty in 2016.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm