ಬ್ರೇಕಿಂಗ್ ನ್ಯೂಸ್
15-11-22 10:15 pm Bangalore Correspondent ಕ್ರೈಂ
ಬೆಂಗಳೂರು, ನ.15 : ಖಾತೆಯಲ್ಲಿ ತಪ್ಪಾಗಿ ಬಂದಿರುವ ಹೆಸರನ್ನು ಸರಿ ಮಾಡಿಕೊಡಲು 10 ಲಕ್ಷ ರೂ.ಗೆ ಬೇಡಿಕೆ ಒಡ್ಡಿದ್ದ ವಿಶೇಷ ತಹಸೀಲ್ದಾರ್ ಆಗಿದ್ದ ಮಹಿಳಾ ಅಧಿಕಾರಿ ಮತ್ತು ಆಕೆಯ ಏಜೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ನಗರ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ವರ್ಷಾ ಒಡೆಯರ್ ಮತ್ತು ಏಜೆಂಟ್ ರಮೇಶ್ ಲೋಕಾಯಕ್ತ ಬಲೆಗೆ ಸಿಲುಕಿದವರು.
ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕೆಂಗನಹಳ್ಳಿಯ ಕಾಂತರಾಜು, ತನಗೆ ಸೇರಿದ ಜಮೀನಿನ ಖಾತೆಯಲ್ಲಿ ಹೆಸರು ಬದಲಾಗಿದೆ. ಅದನ್ನು ಸರಿ ಮಾಡುವಂತೆ ವಿಶೇಷ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕೈಗೆತ್ತಿಕೊಂಡ ವರ್ಷಾ ಒಡೆಯರ್, ಹೆಸರು ಸರಿ ಮಾಡಲು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ನೊಂದ ಅರ್ಜಿದಾರ ಕಾಂತರಾಜು, ಈ ಕುರಿತು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಮಂಗಳವಾರ ಸಂಜೆ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿ ಮುಂಗಡ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದಾರೆ.
ಇದೇ ವೇಳೆ ಹಣ ಸ್ವೀಕರಿಸುತ್ತಿದ್ದ ಮಧ್ಯವರ್ತಿ ರಮೇಶ್‌ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2014ನೇ ಕೆಪಿಎಸ್‌ಸಿ ನಡೆಸಿದ ಕರ್ನಾಟಕ ಆಡಳಿತ ಸೇವೆಯಲ್ಲಿ ಆಯ್ಕೆಯಾಗಿದ್ದ ವರ್ಷಾ ಒಡೆಯರ್, ಚಾಮರಾಜನಗರ ಮತ್ತು ಕನಕಪುರದಲ್ಲಿ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಇದಾದ ಮೇಲೆ ಬೆಂಗಳೂರು ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಹುದ್ದೆಗೆ ವರ್ಗಾವಣೆಗೊಂಡಿದ್ದರು. ಇದೀಗ ಲಂಚಕ್ಕೆ ಕೈಚಾಚಿ ಜೈಲು ಸೇರಿದ್ದಾರೆ.
Woman tahsildar caught red handed while taking bribe of 10 lakhs in Bangalore.
29-08-25 10:51 pm
HK News Desk
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 10:54 pm
Mangalore Correspondent
Talapady Accident, Ksrtc, Death, Mangalore: ತ...
29-08-25 09:08 pm
Mangalore, Eric Ozario, Konkani, Death: ಮಾಂಡ್...
29-08-25 08:13 pm
Mahesh Shetty Thimarodi, SIT, Mangalore: ಬೆಳ್...
29-08-25 03:48 pm
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm