ಬ್ರೇಕಿಂಗ್ ನ್ಯೂಸ್
10-12-22 03:02 pm Bangalore Correspondent ಕ್ರೈಂ
ಬೆಂಗಳೂರು, ಡಿ.10: ಸಿಗರೇಟ್ ಹಣ ಕೇಳಿದ್ದಕ್ಕೆ ಅಂಗಡಿ ಹುಡುಗರ ಮೇಲೆ ಹಲ್ಲೆಗೈದು 1.90 ಲಕ್ಷ ರೂಪಾಯಿ ಮೌಲ್ಯದ ಸೊತ್ತು ಎಗರಿಸಿ, ಪ್ರಾಣ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಎಚ್‌ಎಎಲ್ ಪೊಲೀಸರು ಬಂಧಿಸಿದ್ದಾರೆ. ಡೆಲಿವರಿ ಬಾಯ್ ಆಗಿದ್ದ ಕಾರ್ತಿಕ್(20), ಅಲ್ಯೂಮಿನಿಯಂ ವರ್ಕ್ ಮಾಡುತ್ತಿದ್ದ ಸಲ್ಮಾನ್(20) ಹಾಗೂ ಖಾಸಗಿ ಹೊಟೇಲ್ ಮ್ಯಾನೇಜರ್ ಕಾರ್ತಿಕ್(23) ಬಂಧಿತರು. ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ವೈಟ್‌ಫೀಲ್ಡ್ ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ಬೈಂದೂರು ಮೂಲದ ನವೀನ್ ಕುಮಾರ್, ಪ್ರಜ್ವಲ್ ಶೆಟ್ಟಿ, ನಿತಿನ್ ಶೆಟ್ಟಿ ಎಂಬವರ ಮೇಲೆ ಗುರುವಾರ ರಾತ್ರಿ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಘಟನೆ ಅಂಗಡಿಯಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಭಾರೀ ವೈರಲ್ ಆಗಿತ್ತು. ಡಿ.9ರ ರಾತ್ರಿ 11.30 ರ ಸಮಯದಲ್ಲಿ ಏಳೆಂಟು ಜನರ ರೌಡಿಗಳ ಗುಂಪು ಕುಂದಲಹಳ್ಳಿ ಗೇಟ್ ಬಳಿಯಿರುವ ಬ್ರಹ್ಮಲಿಂಗೇಶ್ವರ ಬೇಕರಿಗೆ ಟೀ ಕುಡಿಯಲು ಮತ್ತು ಸಿಗರೇಟ್ ಸೇದಲು ಬಂದಿದ್ದು ಬೇಕರಿ ಸಿಬಂದಿ ಸಿಗರೇಟ್ ಹಣ ಕೇಳಿದ್ದಕ್ಕೆ ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿ ಹಿಗ್ಗಾಮುಗ್ಗಾ ಥಳಿಸಿ ಹಣ ಕಿತ್ತುಕೊಂಡು ಪರಾರಿಯಾಗಿದ್ದರು. ಹಲ್ಲೆಗೊಳಗಾದವರು ಎಚ್‌ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.






ಇಬ್ಬರು ಯುವಕರು ಅಂಗಡಿ ಒಳಗೆ ಬಂದು ಮನಬಂದಂತೆ ಹೆಲ್ಮೆಟ್ ಹಾಗೂ ಕೈಯಿಂದ ಮನಸೋ ಇಚ್ಛೆ ಥಳಿಸಿದ್ದಾರೆ. ಪ್ರಜ್ವಲ್, ನಿತೀನ್ ಮೇಲೆಯೂ ಹಲ್ಲೆ ನಡೆಸಿ ಕಾಲಿನಿಂದ ತುಳಿದಿದ್ದಾರೆ. ಅಲ್ಲದೆ, ಇವರ ಕುತ್ತಿಗೆಯಲ್ಲಿದ್ದ 18 ಗ್ರಾಂ ತೂಕದ ಚಿನ್ನದ ಸರ ತೆಗೆದುಕೊಂಡು ಹೋಗಿದ್ದಾರೆ. ಕಾಂಡಿಮೆಂಟ್ಸ್ ವಸ್ತುಗಳನ್ನು ಹಾಗೂ ಗ್ಲಾಸ್‌ಗಳನ್ನು ಒಡೆದು ಚೆಲ್ಲಾಪಿಲ್ಲಿ ಮಾಡಿ, ಕ್ಯಾಷ್ ಬಾಕ್ಸ್‌ನಲ್ಲಿದ್ದ 1.90 ಲಕ್ಷ ರೂ. ಹಣವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.
Goons brutally thrash Bakery employees of #Udupi, #Byndoor for asking for cigarette money near #Kundalahalligate in #Bangalore #BreakingNews pic.twitter.com/oLBWIvH7Bx
— Headline Karnataka (@hknewsonline) December 9, 2022
Bangalore Kundanahalli Gate assault on bakery employees, three arrested after video goes viral. An argument that began over a trivial issue quickly turned into a savage assault on three men inside a shop in Bengaluru on Thursday. In shocking footage recorded on the shop's CCTV camera and released by the victims, a group of raucous men start hitting the two shopkeepers in Kundalahalli.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am