ಬ್ರೇಕಿಂಗ್ ನ್ಯೂಸ್
16-10-20 10:07 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 16: ಬೆಂಗಳೂರಿನಲ್ಲಿ ಪಬ್ ನಡೆಸುತ್ತಿದ್ದ ಕೊಪ್ಪ ಮೂಲದ ಮನೀಶ್ ಶೆಟ್ಟಿ ಎಂಬಾತನನ್ನು ವಿರೋಧಿ ಗ್ಯಾಂಗ್ ಶೂಟೌಟ್ ಮಾಡಿ ಕೊಂದು ಮುಗಿಸಿದೆ.
ಮನೀಶ್ ಶೆಟ್ಟಿ ಅಂಡರ್ ವರ್ಲ್ಡ್ ಡಾನ್ ಬನ್ನಂಜೆ ರಾಜಾ ಸಹಚರನಾಗಿದ್ದ. ಪೊಲೀಸ್ ಬಲೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿರುವ ರಶೀದ್ ಮಲಬಾರಿ ಗ್ಯಾಂಗ್ ಈ ಶೂಟೌಟ್ ನಡೆಸಿದೆ ಎನ್ನುವ ಗುಮಾನಿಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ತಲವಾರು ಬದಲಿಗೆ ಸಿಂಗಲ್ ಬ್ಯಾರೆಲ್ ಗನ್ ಮೂಲಕ ಈ ಕೃತ್ಯ ನಡೆಸಿರುವ ಹಿನ್ನೆಲೆಯಲ್ಲಿ ಕರಾವಳಿ ಮೂಲದ ಹಂತಕರು ಕೃತ್ಯದ ಹಿಂದಿದ್ದಾರೆ ಎನ್ನಲಾಗುತ್ತಿದೆ.
ಮನೀಶ್ ಶೆಟ್ಟಿ ಕೂಡ ರೌಡಿ ಶೀಟರ್ ಆಗಿದ್ದು ಕೊಲೆ, ದರೋಡೆ ಸೇರಿ ಹಲವು ಕೃತ್ಯಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಬೆಂಗಳೂರಿನ ಬ್ರಿಗೇಡ್ ರೋಡ್ ನಲ್ಲಿರುವ ಡ್ಯೂಯೆಟ್ ಪಬ್ ಓನರ್ ಆಗಿದ್ದ ಮನೀಶ್ ಶೆಟ್ಟಿ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಿವಾಸಿ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಮನೀಶ್ ಶೆಟ್ಟಿ ತನ್ನ ಪಬ್ ಎದುರು ನಿಂತಿದ್ದಾಗ ಬೈಕಿನಲ್ಲಿ ಬಂದಿದ್ದ ಇಬ್ಬರು ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಮನೀಶ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಕೊನೆಯುಸಿರೆಳೆದಿದ್ದಾನೆ.
ದಕ್ಷಿಣ ಕನ್ನಡ, ಮುಂಬೈನಲ್ಲಿ ಕೊಲೆಯತ್ನ, ಕೊಲೆ, ದರೋಡೆ ಪ್ರಕರಣಗಳನ್ನು ಎದುರಿಸುತ್ತಿದ್ದ ಮನೀಶ್ ವಿರುದ್ಧ ಮಂಗಳೂರಿನಲ್ಲಿ ರೌಡಿ ಶೀಟ್ ತೆರೆಯಲಾಗಿತ್ತು. ಬನ್ನಂಜೆ ರಾಜಾನ ಆಪ್ತನಾಗಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದರು. ಬನ್ನಂಜೆ ರಾಜಾ ಕಳೆದ ಫೆಬ್ರವರಿಯಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಮೊರಕ್ಕೋದಲ್ಲಿ ಬಂಧಿಸಿದ್ದರು. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ಕಮಿಷನರ್ ಕಮಲ್ ಪಂತ್, ಕೃತ್ಯದ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ಖಚಿತ ಸುಳಿವು ಲಭಿಸಿದೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವುದಾಗಿ ತಿಳಿಸಿದ್ದಾರೆ.
A bar owner was shot dead by anonymous bike-borne attackers in full public view in front of his bar in Bangalore on Thursday. The motive for the murder is yet to be ascertained.The deceased has been identified as Manish Shetty (45) alias Sarvotham Shetty, who hailed from Koppa.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 04:25 pm
HK News Desk
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm