ಬ್ರೇಕಿಂಗ್ ನ್ಯೂಸ್
29-12-22 04:48 pm Bangalore Correspondent ಕ್ರೈಂ
ಬೆಂಗಳೂರು, ಡಿ. 29: ನಗರದ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲಸಕ್ಕಿದ್ದ ಮನೆಯಿಂದಲೇ ಚಿನ್ನಾಭರಣ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಹಾಗೂ ಆರೋಪಿಯಿಂದ ಚಿನ್ನಾಭರಣ ಖರೀದಿಸಿದ್ದ ಅಟ್ಟಿಕಾ ಗೋಲ್ಡ್ ಕಂಪನಿಯ ವ್ಯವಸ್ಥಾಪಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಗ್ರಾಮದ ನಿವಾಸಿ ಜೆ.ಮನೋಜ್ (26) ಹಾಗೂ ಆರೋಪಿಯಿಂದ ಚಿನ್ನಾಭರಣ ಖರೀದಿಸಿದ್ದ ತಿಲಕ್‌ನಗರ ಬಿಬಿಟಿ ಪ್ರದೇಶದ ನಿವಾಸಿ ಶಿವು (39) ಬಂಧಿತರು.
ಬಂಧಿತರಿಂದ 25 ಲಕ್ಷ ಮೌಲ್ಯದ 503 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಯು ಒಂದು ವರ್ಷದಿಂದ ಮನೆಗೆಲಸ ಮಾಡಿಕೊಂಡಿದ್ದ. ಆ ಸಂದರ್ಭದಲ್ಲಿ ಮಾಲೀಕರ ವಿಶ್ವಾಸ ಸಹ ಗಳಿಸಿದ್ದ. ಮಾಲೀಕರು ಕುಟುಂಬಸ್ಥರ ಜೊತೆಗೆ ಕೆಲಸದ ನಿಮಿತ್ತ ಹೊರಗಡೆ ತೆರಳಿದಾಗ ಆರೋಪಿಗೆ ಮನೆಯ ಜವಾಬ್ದಾರಿ ವಹಿಸಿದ್ದರು. ಆಗ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿ ಆಟ್ಟಿಕಾ ಗೋಲ್ಡ್ ಕಂಪನಿಯ ಶಿವು ಅವರ ನೆರವಿನಿಂದ ಮಾರಾಟ ಮಾಡಿದ್ದ. ಅದರಿಂದ ಬಂದ ಹಣದಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದ. ಮನೆಯವರಿಗೆ ಅನುಮಾನ ಬಂದು ವಿಚಾರಣೆ ನಡೆಸುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದ. ದೂರು ದಾಖಲಾದ ಮೇಲೆ ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು' ಎಂದು ದಕ್ಷಿಣ ವಿಭಾಗದ ಡಿಸಿಪಿ ಪಿ.ಕೃಷ್ಣಕಾಂತ್ ತಿಳಿಸಿದ್ದಾರೆ.
The police have arrested two persons including the manager of Attica Gold Company who had bought the gold jewelery from the accused who had stolen gold jewelery from the house where he was working and was absconding. J. Manoj (26), a resident of Bellur village in Nagamangala taluk of Mandya district, and Shiva (39), a resident of Tilaknagar BBT area, who bought gold jewelery from the accused, were arrested.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am