ಬ್ರೇಕಿಂಗ್ ನ್ಯೂಸ್
17-10-20 04:38 pm Dilip : Bengaluru Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 17: ತನ್ನ ಮಗಳು ದಲಿತ ಯುವಕನನ್ನು ಪ್ರೀತಿಸಿದ್ದಾಳೆಂಬ ಕೋಪದಲ್ಲಿ ಬಿಕಾಂ ಕಲಿಯುತ್ತಿದ್ದ 18 ವರ್ಷದ ಪುತ್ರಿಯನ್ನೇ ಕೊಲೆಗೈದು ಕಟ್ಟುಕತೆ ಕಟ್ಟಿದ ಅಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ಬಳಿ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ಕೃಷ್ಣಪ್ಪ (48) ಮತ್ತು ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ಅವರ ಇಬ್ಬರು ಪುತ್ರರನ್ನು ಬಂಧಿಸಲಾಗಿದೆ. ಅ.8ರಂದು ಪುತ್ರಿ ಹೇಮಲತಾ ನಾಪತ್ತೆಯಾಗಿರುವ ಬಗ್ಗೆ ತಂದೆ ಕುಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಮರುದಿನ ಆಕೆಯ ಶವ ಮಾವಿನ ತೋಟದಲ್ಲಿ ಪತ್ತೆಯಾಗಿದ್ದಾಗಿ ಪೊಲೀಸರಿಗೆ ತಂದೆಯೇ ತಿಳಿಸಿದ್ದರು. ಅಲ್ಲದೆ, ಘಟನೆಯ ಬಗ್ಗೆ ಶಂಕೆ ವ್ಯಕ್ತಪಡಿಸಿದ ತಂದೆ ಕೃಷ್ಣಪ್ಪ, ಕೃತ್ಯವನ್ನು ಪುತ್ರಿಯ ಪ್ರಿಯಕರನಾಗಿದ್ದ ಪುನೀತ್ ಮಾಡಿರಬೇಕೆಂದು ಸಂಶಯ ಪಟ್ಟಿದ್ದ. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅಂಥ ಸುಳಿವು ಸಿಗಲಿಲ್ಲ.

ಬಳಿಕ ಸಂಶಯದ ಮೇರೆಗೆ ಕೃಷ್ಣಪ್ಪನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನೈಜ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಅಲ್ಲದೆ, ತನ್ನ ಇಬ್ಬರು ಪುತ್ರರು ಕೂಡ ಕೃತ್ಯಕ್ಕೆ ಸಹಕರಿಸಿದ್ದಾರೆಂದು ತಿಳಿಸಿದ್ದಾನೆ. ಪೊಲೀಸರು ಮೂವರನ್ನೂ ಬಂಧಿಸಿದ್ದು, ಮರ್ಯಾದಾ ಹತ್ಯೆ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೂವರು ಸೇರಿ ಪುತ್ರಿಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದಲ್ಲದೆ, ಶವವನ್ನು ಮಾವಿನ ತೋಟದ ಬಳಿಯ ಚರಂಡಿಯಲ್ಲಿ ಎಸೆದಿದ್ದರು. ಸ್ಥಳೀಯರು ಶವ ಪತ್ತೆಯಾದ ಬಗ್ಗೆ ಮಾಹಿತಿ ನೀಡಿದ್ದರು.
In a stunning turn of events, a case of gang rape turned out be case of honour killing with the arrest of victim’s father and her elder brother along with her minor brother on Friday in Magadi, Ramnagara, Karnataka.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am