ಬ್ರೇಕಿಂಗ್ ನ್ಯೂಸ್
05-02-23 09:05 pm Udupi Correspondent ಕ್ರೈಂ
ಉಡುಪಿ, ಫೆ.5 : ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕಾಪು ಬಳಿಯ ಪಾಂಗಾಳ ಸೇತುವೆಯ ಬಳಿ ಭಾನುವಾರ ಸಂಜೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಎಂದು ಗುರುತಿಸಲಾಗಿದೆ.
ಪಾಂಗಾಳ ಶ್ರೀ ಜನಾರ್ದನ ದೇವಸ್ಥಾನದ ಬಳಿ ಈ ಕೃತ್ಯ ನಡೆದಿದ್ದು, ಚೂರಿ ಇರಿತದಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶರತ್ ಶೆಟ್ಟಿ ಅವರನ್ನು ಸ್ಥಳೀಯರು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅವರು ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದರು. ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ.

ಪಾಂಗಾಳದಲ್ಲಿ ನಡೆಯುತ್ತಿದ್ದ ಉತ್ಸವದಲ್ಲಿ ಪಾಲ್ಗೊಂಡಿದ್ದ ಶರತ್ ಶೆಟ್ಟಿಯನ್ನು ಸ್ನೇಹಿತರು ಕರೆ ಮಾಡಿ ಪಾಂಗಾಳ ಸೇತುವೆ ಬಳಿ ಬರಲು ಹೇಳಿದ್ದರು. ಅಲ್ಲಿ ಬಂದಿದ್ದ ಶರತ್ ಜೊತೆಗೆ ಮಾತಿ ಮಾತು ಬೆಳೆದಿದ್ದು ಇಬ್ಬರು ಸೇರಿ ಡ್ರಾಗರ್‌ನಿಂದ ಹಲ್ಲೆಗೈದು ಪರಾರಿಯಾಗಿದ್ದಾರೆ, ತೀವ್ರ ರಕ್ತ ಸ್ರಾವಕ್ಕೊಳಗಾಗಿ ನೆಲಕ್ಕೆ ಕುಸಿದು ಬಿದ್ದಿದ್ದ ಶರತ್ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಶರತ್ ಶೆಟ್ಟಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದು ಅದೇ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
A 36-year-old man was stabbed to death in an open place on NH 66 near Pangala under the Kaup Police station limits on Sunday, February 5. The deceased has been identified as Sharath Shetty (41) a resident of Pangala. According to the primary reports, two miscreants stabbed Sharath Shetty in a shop on NH 66 near Pangala Janardhan Temple. Locals rushed Sharath to the hospital where he breathed his last without responding to the treatment.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am