ಬ್ರೇಕಿಂಗ್ ನ್ಯೂಸ್
11-02-23 08:09 pm HK News Desk ಕ್ರೈಂ
ಹಾಸನ,ಫೆ.11 : ಹಾಸನ ಜಿಲ್ಲೆ ಅರಸೀಕೆರೆ ನಗರದ ಶ್ರೀನಗರ ಸಮೀಪದ ರೈಲ್ವೆ ಟ್ರ್ಯಾಕ್ ಸಮೀಪ 25 ವರ್ಷದ ಯುವಕನೊಬ್ಬನ್ನು ಕೊಂದು ಮೃತದೇಹವನ್ನು ಸುಟ್ಟು ಹಾಕಲಾಗಿದೆ.
ಜನವಸತಿ ಸಮೀಪವೇ, ರೈಲ್ವೆ ಟ್ರ್ಯಾಕ್ ಬಳಿ ಈ ಭೀಕರ ಘಟನೆ ನಡೆದಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಶನಿವಾರ ಬೆಳಗ್ಗೆ ಇಲ್ಲಿನ ರೈಲ್ವೇ ಟ್ರ್ಯಾಕ್ ಬಳಿ ಬೆಂಕಿ ಹೊತ್ತು ಉರಿಯುವುದನ್ನು ಗಮನಿಸಿದ ಸ್ಥಳೀಯರು ಹೋಗಿ ನೋಡಿದಾಗ ಅದೊಂದು ಶವ ಎನ್ನುವುದು ಗೊತ್ತಾಗಿದೆ. ರಾತ್ರಿ ಕೊಲೆ ಮಾಡಿ ಬೆಳಗ್ಗಿನ ಜಾವ ಇಲ್ಲಿಗೆ ತಂದು ಬೆಂಕಿ ಹಚ್ಚಿರುವ ಸಾಧ್ಯತೆ ಇದೆ. ಅಥವಾ ಕೆಲವು ದಿನಗಳ ಹಿಂದೆ ಕೊಂದು, ಶವವನ್ನು ಕಟ್ಟಿ ಇಟ್ಟುಕೊಂಡು ರಾತ್ರಿ ಇಲ್ಲಿಗೆ ತಂದು ಸುಟ್ಟಿರುವ ಸಾಧ್ಯತೆಯೂ ಇದೆ.
ಅಂದಾಜು 25 ವರ್ಷ ಪ್ರಾಯದ ಯುವಕನ ಶವ ಇದಾಗಿದ್ದು, ಯಾರು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.
ಅರಸೀಕೆರೆ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆಗೆ ಮುಂದಾದ ಪೊಲೀಸರು ಸಾರ್ವಜನಿಕರಿಂದ ಈ ಬಗ್ಗೆ ಮಾಹಿತಿ ಕೋರಿದ್ದಾರೆ. ಜತೆಗೆ ನಾಪತ್ತೆಯಾಗಿರುವ ವ್ಯಕ್ತಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹ ಕೇಳಿಬಂದಿದ್ದು, ಪೊಲೀಸರು ಕೂಡಾ ಅದೇ ಕಾರ್ಯದಲ್ಲಿ ಮಗ್ನರಾಗಿದ್ದಾರೆ.
Hassan a 25 year old murdered, body gutted in fire.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am