ಬ್ರೇಕಿಂಗ್ ನ್ಯೂಸ್
18-02-23 10:55 am HK News Desk ಕ್ರೈಂ
ರಾಮನಗರ, ಫೆ.18: ಕನಕಪುರ ನಗರದ ಬೈಪಾಸ್ ರಸ್ತೆ ಬಳಿ ಶುಕ್ರವಾರ ಪ್ರೀತಿಯನ್ನು ನಿರಾಕರಿಸಿದಳೆಂದು ಕೋಪಗೊಂಡ ಯುವಕನೊಬ್ಬ 17 ವರ್ಷದ ವಿದ್ಯಾರ್ಥಿನಿಯ ಮುಖದ ಮೇಲೆ ಆ್ಯಸಿಡ್ ಎರಚಿರುವ ಘಟನೆ ನಡೆದಿದೆ.
ಆ್ಯಸಿಡ್ ದಾಳಿಯಲ್ಲಿ ಅಪ್ರಾಪ್ತೆಯ ಕಣ್ಣಿಗೆ ಗಾಯಗಳಾಗಿದ್ದು, ಕೂಡಲೇ ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಕುರುಪೇಟೆಯಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ 22 ವರ್ಷ ವಯಸ್ಸಿನ ಆರೋಪಿ ಯುವಕ, ಮತ್ತು ವಿದ್ಯಾರ್ಥಿನಿ ನಡುವೆ ಕಳೆದ ಒಂದು ವರ್ಷದಿಂದಲೂ ಸಲುಗೆ ಇತ್ತು. ಸಾಮಾಜಿಕ ಮಾಧ್ಯಮದ ಮೂಲಕ ಇಬ್ಬರು ಪರಿಚಿತರಾಗಿದ್ದರು. ಈ ವೇಳೆ ಯುವಕ ತನ್ನನ್ನು ಪ್ರೀತಿಸುವಂತೆ ಕೇಳಿಕೊಂಡಿದ್ದಾನೆ. ಇದಕ್ಕೆ ನಿರಾಕರಿಸಿದ್ದ ಬಾಲಕಿ, ಇತ್ತೀಚೆಗಷ್ಟೇ ಮಾತನಾಡುವುದನ್ನು ನಿಲ್ಲಿಸಿದ್ದಳು.
ಈ ವಿಚಾರವಾಗಿ ಸಿಟ್ಟಿಗೆದ್ದಿದ್ದ ಯುವಕ, ಬಾಲಕಿಗೆ ಕರೆ ಮಾಡಿ ಮಾತನಾಡಲು ಬೈಪಾಸ್ ರಸ್ತೆಗೆ ಬರಬೇಕೆಂದು ಕೇಳಿದ್ದಾನೆ. ಅದರಂತೆ ಬಾಲಕಿ ತನ್ನ ತಮ್ಮನ ಜೊತೆ ತೆರಳಿ ಆತನನ್ನು ಭೇಟಿಯಾಗುತ್ತಾಳೆ. ಈ ವೇಳೆ ಯುವಕ ಆಕೆಯ ಮನವೊಲಿಸಲು ಯತ್ನಿಸಿದ್ದಾನೆ. ಆಗಲೂ ಆಕೆ ಒಪ್ಪದಿದ್ದಾಗ ಕಾರ್ ಎಂಜಿನ್ ಶುಚಿಗೊಳಿಸಲು ಬಳಸುತ್ತಿದ್ದ ಆ್ಯಸಿಡ್ ಅನ್ನು ಮುಖದ ಮೇಲೆ ಎರಚಿದ್ದಾನೆ.
ಕನಕಪುರ ನಗರ ನಿವಾಸಿಯಾಗಿರುವ ನಿವಾಸಿ ಸುಮಂತ್ ಅಲಿಯಾಸ್ ಅಪ್ಪು (22) ಕೃತ್ಯ ನಡೆಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, ಆ್ಯಸಿಡ್ ದಾಳಿಯಿಂದ ಅಪ್ರಾಪ್ತ ಯುವತಿಯ ಮುಖಕ್ಕೆ ಗಾಯ ಹಾಗೂ ಎಡ ಭಾಗದ ಕಣ್ಣಿಗೆ ಗಾಯವಾಗಿದೆ. ಸಂತ್ರಸ್ತೆಗೆ ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ಯುವತಿಯನ್ನು ದಾಖಲು ಮಾಡಲಾಗಿದೆ.
ಸದ್ಯ ರಾಜ್ಯ ಮಹಿಳಾ ಆಯೋಗವು ರಾಮನಗರ ಎಸ್‌ಪಿಗೆ ಕರೆ ಮಾಡಿದ್ದು, ಅಪ್ರಾಪ್ತ ಯುವತಿಯ ಮೇಲೆ ಆ್ಯಸಿಡ್ ದಾಳಿ ವಿಚಾರದ ಮಾಹಿತಿ ಪಡೆದಿದ್ದಾರೆ. ಜೊತೆಗೆ ದಾಳಿ ಮಾಡಿರೋ ಯುವಕನ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದಾರೆ. ಇಂದು ಯುವತಿಯನ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ ಮಾಡಲಿದ್ದಾರೆ. ಇನ್ನು ಕನಕಪುರ ನಗರ ಠಾಣೆಯಲ್ಲಿ ಪೊಕ್ಸೋ ಅಡಿ ಪ್ರಕರಣ ದಾಖಲಾಗಿದ್ದು, ಆ್ಯಸಿಡ್ ದಾಳಿಕೋರನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Acid attack on minor girl in ramnagara for refusing love. The girl is said to be hospitalised. Search for the accused is in full swing by the police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am