ಬ್ರೇಕಿಂಗ್ ನ್ಯೂಸ್
02-03-23 10:16 pm Mangalore Correspondent ಕ್ರೈಂ
ಮಂಗಳೂರು, ಮಾ.2: ಒಂದು ತಿಂಗಳ ಹಿಂದೆ ನಗರದ ಮಿಲಾಗ್ರಿಸ್ ಬಳಿ ಜುವೆಲ್ಲರಿ ಉದ್ಯೋಗಿಯನ್ನು ಕತ್ತು ಕೊಯ್ದು ಹತ್ಯೆಗೈದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲ್ಲಿಕೋಟೆಯ ಕೊಯಿಲಾಂಡಿ ನಿವಾಸಿ ಶಿಫಾಸ್ (33) ವಶಕ್ಕೆ ಪಡೆದ ಆರೋಪಿ. ಗುರುವಾರ ಮಧ್ಯಾಹ್ನ ಕ್ಯಾಲಿಕಟ್ ನಿಂದ ರೈಲಿನಲ್ಲಿ ಕಾಸರಗೋಡು ರೈಲು ನಿಲ್ದಾಣಕ್ಕೆ ಬಂದಿದ್ದ ಶಿಫಾಸ್, ಕಾಸರಗೋಡು ನಗರದ ಮಲ್ಲಿಕಾರ್ಜುನ ದೇವಸ್ಥಾನದ ಆವರಣಕ್ಕೆ ಬಂದಾಗಲೇ ಸಿವಿಲ್ ಡ್ರೆಸ್ ನಲ್ಲಿದ್ದ ಪೊಲೀಸರು ಬಲೆಗೆ ಹಾಕಿದ್ದಾರೆ. ಕಾಸರಗೋಡು ಡಿವೈಎಸ್ಪಿ ಸುಧಾಕರನ್ ಮತ್ತು ಡಿಸಿ ಆರ್ ಬಿ ಡಿವೈಎಸ್ಪಿ ಅಬ್ದುಲ್ ರಹೀಂ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.


ಫೆ.3ರಂದು ಮಂಗಳೂರಿನಲ್ಲಿ ಜುವೆಲ್ಲರಿ ನುಗ್ಗಿ ರಾಘವ ಆಚಾರ್ಯ ಎಂಬವರನ್ನು ಹತ್ಯೆಗೈದಿದ್ದ ಆಗಂತುಕ ವ್ಯಕ್ತಿ ಆನಂತರ ಯಾರ ಕೈಗೂ ಸಿಗದೆ ತಲೆಮರೆಸಿಕೊಂಡಿದ್ದ. ಈ ನಡುವೆ, ಆರೋಪಿ ಪತ್ತೆಗಾಗಿ ಸಿಸಿಟಿವಿಯಲ್ಲಿ ದೊರೆತ ಫೋಟೊಗಳನ್ನು ಮಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದರು. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ ಹಾಕಿ ಪರಾರಿಯಾಗಿದ್ದ ಆರೋಪಿಯ ಚಹರೆಯನ್ನು ಪೊಲೀಸರು ನೋಟೀಸ್ ಮೂಲಕ ವಿವಿಧ ಕಡೆಗಳಲ್ಲಿ ಅಂಟಿಸಿದ್ದರು. ಆರೋಪಿ ಮಾಹಿತಿ ಸಿಕ್ಕಲ್ಲಿ ಪೊಲೀಸರಿಗೆ ನೀಡುವಂತೆ ಕೇಳಿಕೊಂಡಿದ್ದರು.


ಒಂದು ತಿಂಗಳ ಕಾಲವೂ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಅಚಾನಕ್ಕಾಗಿ ಬಲೆಗೆ ಬಿದ್ದಿದ್ದಾನೆ. ಆದರೆ ಯಾಕಾಗಿ ಈ ಕೃತ್ಯ ಎಸಗಿದ್ದಾನೆ ಎನ್ನೋದು ಭಾರೀ ಕುತೂಹಲ ಸೃಷ್ಟಿಸಿದೆ. ಮಂಗಳೂರು ಪೊಲೀಸರು ಇನ್ನಷ್ಟೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಷ್ಟೆ.
Jewellery shop staffer murdered in Mangaluru, accused arrested in Kasaragod after months. The arrested has been identifed as Shifas (33) from kerala. Raghavendra Acharya alias Raghu (55), working in the shop since seven months, was murdered inside the shop at Hampankatta
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am