ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ಹಣ ಪಡೆದು ವಂಚನೆ ; ಕೇರಳ ಮೂಲದ ವ್ಯಕ್ತಿ ಬಂಧನ 

20-03-23 06:06 pm       Mangalore Correspondent   ಕ್ರೈಂ

ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿಸಿ ಡಬಲ್ ಲಾಭ ಪಡೆಯಬಹುದು ಎಂದು ಆಮಿಷ ತೋರಿಸಿ ಮಂಗಳೂರಿನಲ್ಲಿ ಹಲವಾರು ಮಂದಿಯಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು, ಮಾ.20 : ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿಸಿ ಡಬಲ್ ಲಾಭ ಪಡೆಯಬಹುದು ಎಂದು ಆಮಿಷ ತೋರಿಸಿ ಮಂಗಳೂರಿನಲ್ಲಿ ಹಲವಾರು ಮಂದಿಯಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕೇರಳದ ಮಲಪ್ಪುರಂ ಜಿಲ್ಲೆಯ ಚಕ್ಕರತೋಡಿ ನಿವಾಸಿ ಹಂಝಾ ಸಿ.ಟಿ. ಬಂಧಿತ ವ್ಯಕ್ತಿ. ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ ಕೋಟ್ಯಂತರ ಲಾಭ ಗಳಿಸಬಹುದು ಎಂದು ಆರೋಪಿ ಹಲವಾರು ಮಂದಿಯಿಂದ ಹಣವನ್ನು ಹೂಡಿಕೆ ಮಾಡಿಸಿದ್ದಾನೆ. ತಿಂಗಳಿಗೆ 25 % ಲಾಭಾಂಶವನ್ನು ನೀಡುವುದಾಗಿ ಹೇಳಿದ್ದು ಮಂಗಳೂರಿನ ಕಣ್ಣೂರು ಪರಿಸರದ ನಿವಾಸಿಯಿಂದ ಹಾಗೂ ಇತರ ಸಾರ್ವಜನಿಕರಿಂದ ಹಣವನ್ನು ಬ್ಯಾಂಕ್ ಖಾತೆಗಳಿಗೆ ಹೂಡಿಕೆ ಮಾಡಿಸಿದ್ದ. ಆದರೆ‌ ಲಾಭಾಂಶವನ್ನು ನೀಡದೆ ವಂಚನೆ ಮಾಡಿದ್ದಾನೆ. ಈ ಬಗ್ಗೆ ನೀಡಿದ ದೂರಿನಂತೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. 

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗ್ಡೆ, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್‌ಐ ರಾಜೇಂದ್ರ ಹಾಗೂ ಸಿಸಿಬಿ ಸಿಬಂದಿಗಳು ಪಾಲ್ಗೊಂಡಿದ್ದರು.

Crores cheated in the name of crypto currency, kerala native arrested by CCB Police in Mangalore. The arrested has been identified as Hamza.