ಬ್ರೇಕಿಂಗ್ ನ್ಯೂಸ್
08-06-23 04:28 pm HK News Desk ಕ್ರೈಂ
ಮುಂಬಯಿ, ಜೂ, 8: ಕಳೆದ ವರ್ಷ ದೆಹಲಿಯಲ್ಲಿ ಶ್ರದ್ಧಾ ವಾಕರ್ ಕೃತ್ಯ ನಡೆದ ಬಳಿಕ ದೇಶದಲ್ಲಿ ಅಂಥದ್ದೇ ಭೀಕರ ಘಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಈಗ ಮತ್ತೊಂದು ಭೀಭತ್ಸ ಘಟನೆ ಮುಂಬಯಿಯಲ್ಲಿ ನಡೆದಿದೆ.
ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ.
ಮನೋಜ್ ಸಹಾನಿ (56) ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್‌ನಲ್ಲಿ ಸರಸ್ವತಿ ವೈದ್ಯ (32) ಎಂಬುವವರೊಂದಿಗೆ ವಾಸವಾಗಿದ್ದರು. ಮನೋಜ್ ಬೋರಿವಾಲಿಯಲ್ಲಿ ಸಣ್ಣ ಅಂಗಡಿ ನಡೆಸುತ್ತಿದ್ದಾರೆ.
)
ಬುಧವಾರ ಸಂಜೆ (ಜೂ.7 ರಂದು) ಫ್ಲಾಟ್ ನ ಇತರೆ ಸದಸ್ಯರು ಮನೋಜ್ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದರಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ 3-4 ದಿನಗಳ ಹಿಂದೆ ಕೊಲೆಯಾಗಿರುವ ಮಹಿಳೆಯೊಬ್ಬರ ದೇಹದ ಭಾಗಗಳು ಕುಕ್ಕರ್ ನಲ್ಲಿ ಬೇಯುತ್ತಿರುವುದನ್ನು ಪೊಲೀಸರು ನೋಡಿದ್ದಾರೆ.
ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಕೆಲವು ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಈ ಕೃತ್ಯ ನಡೆದಿರಬಹುದು. ಆಕೆಯ ದೇಹವನ್ನು ಮರ ಕಟ್ ಮಾಡುವ ಮಿಷನ್ ನಿಂದ ತುಂಡು ಮಾಡಲಾಗಿದೆ. ನಾವು ಮನೆಗೆ ತಲುಪಿ ಬಾಗಿಲು ತೆರೆದಾಗ, ಇದು ಕೊಲೆಯ ಪ್ರಕರಣ ಎಂದು ನಮಗೆ ಗೊತ್ತಾಗಿದೆ. ಶಂಕಿತ ಆರೋಪಿ ಸಾಕ್ಷ್ಯವನ್ನು ಮರೆಮಾಡಲು ಪ್ರಯತ್ನಿಸುವ ಸಲುವಾಗಿ ಈ ರೀತಿ ದೇಹದ ಭಾಗವನ್ನು ಕುಕ್ಕರ್ ನಲ್ಲಿ ಬೇಯಿಸಿರಬಹುದು” ಎಂದು ಪೊಲೀಸ್ ಉಪ ಆಯುಕ್ತ ಜಯಂತ್ ಬಜ್ಬಲೆ ಅವರು ಹೇಳಿದ್ದಾರೆ.
ಈ ಸಂಬಂಧ ಕೊಲೆಯ ಹಿಂದಿನ ಉದ್ದೇಶವನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮನೆಯೊಳಗೆ ಕತ್ತರಿಸಿದ ದೇಹದ ತುಣುಕುಗಳ ಪತ್ತೆಯಾಗಿವೆ. ಬಹುಶಃ ಕೊಲೆ ಮಾಡಿ ಮೂರ್ನಾಲ್ಕು ದಿನಗಳಾಗಿರಬಹು ಎಂದು ಅಂದಾಜಿಸಲಾಗಿದೆ.
A 56-year-old man has been arrested for killing his live-in partner and chopping her body into 20 pieces at his rented apartment near Mumbai's Mira Road. Police said that the accused boiled pieces of her body in a pressure cooker and later filled them into plastic bags to dispose of them. The accused, identified as Manoj Sane, had been staying with Saraswati Vaidya, 36, in flat 704 at Geeta Akash Deep building in Mira Road in Geeta Nagar Phase 7 over the past three years. Police were alerted by local residents who complained of a foul smell emanating from the flat. Manoj runs a small shop in Boriwali.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm