ಬ್ರೇಕಿಂಗ್ ನ್ಯೂಸ್
27-06-23 03:41 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 27: ತನ್ನ ಪತ್ನಿ ಮಾದಕ ವ್ಯಸನಿಯಾಗಿದ್ದು, ಡ್ರಗ್ಸ್ ಪೆಡ್ಲರ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಸಿನಿಮಾ ನಿರ್ಮಾಪಕರೊಬ್ಬರು ನಗರದ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನಟ ಹಾಗೂ ನಿರ್ಮಾಪಕ ಟಿ.ಚಂದ್ರಶೇಖರ್ ಎಂಬವರು ತಮ್ಮ ಪತ್ನಿ ನಮಿತಾ ಹಾಗೂ ಲಕ್ಷ್ಮೀಶ್ ಪ್ರಭು ಎಂಬವರ ವಿರುದ್ಧ ಕೇಸು ದಾಖಲಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಪತ್ನಿ ನಮಿತಾ ಕೂಡ ಪತಿ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.
ʼಹೀಗೊಂದು ದಿನʼ ಹಾಗೂ ʼಅಪ್ಪುಗೆʼ ಎಂಬ ಸಿನಿಮಾಗಳ ನಿರ್ಮಾಪಕರಾಗಿರುವ ಟಿ.ಚಂದ್ರಶೇಖರ್, ಎರಡು ವರ್ಷಗಳ ಹಿಂದೆ ನಮಿತಾರನ್ನು ವಿವಾಹವಾಗಿದ್ದರು, ಬನಶಂಕರಿ 3ನೇ ಹಂತದ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದರು. ಈ ಮಧ್ಯೆ ತನ್ನ ಪತ್ನಿ ಮಾದಕ ವ್ಯಸನಿಯಾಗಿದ್ದು, ಎಷ್ಟೇ ಬುದ್ಧಿ ಹೇಳಿದರೂ ಡ್ರಗ್ಸ್‌ನಿಂದ ದೂರವಾಗಲಿಲ್ಲ. ಅಲ್ಲದೆ, ಕಳೆದ ಜನವರಿಯಿಂದ ಆಕೆಗೆ ಲಕ್ಷ್ಮೀಶ್ ಪ್ರಭು ಎಂಬ ಡ್ರಗ್ಸ್ ಪೆಡ್ಲರ್ ಎಂಬಾತನ ಜತೆ ಅನೈತಿಕ ಸಂಬಂಧವಿದೆ. ಜೂ.16 ರಂದು ಮನೆಯಲ್ಲಿ ಪತ್ನಿ ಹಾಗೂ ಲಕ್ಷ್ಮೀಶ್ ದೈಹಿಕ ಸಂಪರ್ಕದಲ್ಲಿದ್ದ ವೇಳೆ ನೋಡಿ ಪ್ರಶ್ನಿಸಿದಾಗ ಇಬ್ಬರೂ ಸೇರಿ ತನ್ನ ಮೇಲೆ ಹಲ್ಲೆ ನಡೆಸಿ ಪ್ರಾಣಬೆದರಿಕೆ ಹಾಕಿದ್ದಾರೆ. ಕೂಡಲೇ ಪೊಲೀಸರಿಗೆ ದೂರು ನೀಡಿರುವುದಾಗಿ ಚಂದ್ರಶೇಖರ್ ತಿಳಿಸಿದ್ದಾರೆ.
ನಮಿತಾ ಕೂಡ ಪತಿ ಚಂದ್ರಶೇಖರ್ ವಿರುದ್ಧ ದೂರು ದಾಖಲಿಸಿದ್ದು, ಆತನಿಗೆ ಮೊದಲೇ ಮದುವೆಯಾಗಿದ್ದು, ಮೊದಲ ಹೆಂಡತಿ, ಮಕ್ಕಳಿದ್ದಾರೆ. ನನ್ನನ್ನು ಮದುವೆ ಮಾಡಿಕೊಳ್ಳುವ ವೇಳೆ ತನ್ನ ಪತ್ನಿಗೆ ವಿಚ್ಛೇದನ ನೀಡಿರುವುದಾಗಿ ಪತ್ರ ತೋರಿಸಿ, ನನ್ನ ವಿವಾಹವಾಗಿದ್ದರು. ಜೂ.16 ರ ಮಧ್ಯಾಹ್ನ 1 ಗಂಟೆಯಲ್ಲಿ ನಮ್ಮ ಮನೆಯ ಮುಂದೆ ಗಲಾಟೆ ನಡೆಯುತ್ತಿತ್ತು. ಸದ್ದು ಕೇಳಿ ಹೊರಬಂದು ನೋಡಿದ್ದಾಗ ನನ್ನ ಸ್ನೇಹಿತ ಲಕ್ಷ್ಮೀಶ್ ಪ್ರಭುಗೆ ವಿನಾಕಾರಣ ಚಂದ್ರಶೇಖರ್ ಮತ್ತು ಆತನ ಸ್ನೇಹಿತರಾದ ಅರುಣ್, ಹೇಮಂತ್ ಥಳಿಸಿದ್ದಾರೆ. ಆತನ ಬಟ್ಟೆ ಬಿಚ್ಚಿಸಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ನನ್ನ ಮೇಲೂ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಮನೆಯಲ್ಲಿ ಡ್ರಗ್ಸ್ ಇಟ್ಟು ಅರೆಸ್ಟ್ ಮಾಡಿಸಿ ಜೈಲಿಗೆ ಕಳುಹಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಮಿತಾ, ಪತಿಯ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ.
Kannada film producer and actor has lodged a complaint with the Bengaluru Police alleging that his wife “is a drug addict” and has an affair with a drug peddler, police said on Monday, adding that his wife also lodged a counter complaint.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm