ಬ್ರೇಕಿಂಗ್ ನ್ಯೂಸ್
07-07-23 11:00 pm HK News Desk ಕ್ರೈಂ
ಭೋಪಾಲ್, ಜು. 07: ಇಬ್ಬರು ದಲಿತ ಯುವಕರಿಗೆ ಬಲವಂತವಾಗಿ ಮಲ ತಿನ್ನಿಸಿ ಹೀನ ಕೃತ್ಯ ಎಸಗಿದ್ದ ಆರೋಪದ ಮೇಲೆ ಮಧ್ಯಪ್ರದೇಶದ ಶಿವಪುರಿ ಆಡಳಿತವು ಒಂದೇ ಕುಟುಂಬದ ಏಳು ಸದಸ್ಯರನ್ನು ಬಂಧಿಸಿದೆ. ಇದಲ್ಲದೆ ಆರೋಪಿಗಳ ಮನೆಗಳನ್ನು ಕೆಡವಿದೆ.
ದಲಿತ ಯುವಕರು ಆರೋಪಿಗಳ ಮನೆಯ ಯುವತಿಯೊಂದಿಗೆ ಮಾತನಾಡ ಕಾರಣ ಅಮಾನವೀಯ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಜೂನ್ 30 ರಂದು ಶಿವಪುರಿ ಜಿಲ್ಲೆಯ ವರ್ಖಾಡಿ ಗ್ರಾಮದಲ್ಲಿ ದಲಿತ ವ್ಯಕ್ತಿಯ ಮೇಲೆ ದೌರ್ಜನ್ಯ ನಡೆದಿತ್ತು, ಆದರೆ ವಿಡಿಯೋ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಶಿವಪುರಿ ಪೊಲೀಸ್ ಅಧೀಕ್ಷಕ (ಎಸ್‌ಪಿ) ರಘುವಂಶ್ ಸಿಂಗ್ ಭಡೋರಿಯಾ ಪ್ರಕಾರ, ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ನಿರ್ದೇಶನದ ಮೇರೆಗೆ ಕುಟುಂಬದ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಯನ್ನು ಹಾಕಲು ಆದೇಶಿಸಿದ್ದಾರೆ.
"23 ಮತ್ತು 24 ವರ್ಷದ ಇಬ್ಬರು ಯುವಕರು ಆರೋಪಿಯ ಕುಟುಂಬದ 26 ವರ್ಷದ ಯುವತಿಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಈ ವಿಷಯ ತಿಳಿದ ಮನೆಯವರು ಯುವತಿಯನ್ನು ವರ್ಖಾಡಿ ಗ್ರಾಮದಲ್ಲಿರುವ ಇಬ್ಬರನ್ನು ತಮ್ಮ ಮನೆಗೆ ಕರೆ ತರುವಂತೆ ತಿಳಿಸಿದ್ದಾರೆ. ಜೂನ್ 30 ರಂದು ಇಬ್ಬರು ಬಂದಾಗ ಮನೆಯವರು ಅಮಾನುಷವಾಗಿ ಥಳಿಸಿದ್ದಾರೆ. ಆರೋಪಿಗಳು ದಲಿತರ ಮುಖಕ್ಕೆ ಕಪ್ಪು ಬಣ್ಣ ಬಳಿದು, ಮಲವನ್ನು ತಿನ್ನುವಂತೆ ಒತ್ತಾಯಿಸಿದ್ದಾರೆ. ಅವರಿಗೆ ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ" ಎಂದು ಎಸ್‌ಪಿ ರಘುವಂಶ್ ಸಿಂಗ್ ಭಡೋರಿಯಾ ಹೇಳಿದ್ದಾರೆ.
ಆದರೆ ಮಹಿಳೆಗೆ ಕಿರುಕುಳ ನೀಡಿದ್ದಕ್ಕಾಗಿ ಮತ್ತು ಅನುಚಿತವಾಗಿ ಸ್ಪರ್ಶಿಸಿದ್ದಕ್ಕಾಗಿ ಇಬ್ಬರು ಯುವಕರನ್ನು ಥಳಿಸಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ. ತನಿಖೆಯ ಸಂದರ್ಭದಲ್ಲಿ ಕುಟುಂಬದವರ ಹೇಳಿಕೆಗಳು ಸುಳ್ಳು ಎಂದು ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಆರೋಪಿಗಳು ತಮ್ಮನ್ನು ಲೈಂಗಿಕ ಕಿರುಕುಳದ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.
ಆರೋಪಿಗಳಾದ ಅಜ್ಮತ್ ಖಾನ್, ವಕೀಲ್ ಖಾನ್, ಆರಿಫ್ ಖಾನ್, ಶಾಹಿದ್ ಖಾನ್, ಇಸ್ಲಾಂ ಖಾನ್, ರಹೀಶಾ ಬಾನೋ ಮತ್ತು ಸೈನಾ ಬಾನೊ ಅವರನ್ನು ಬುಧವಾರ ಬಂಧಿಸಿ ಗುರುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಜೈಲಿಗೆ ಕಳುಹಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
Two men belonging to the Dalit community were caught and thrashed by villagers in Madhya Pradesh’s Shivpuri district after a few Muslim women accused them of harassment, police said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm