ಬ್ರೇಕಿಂಗ್ ನ್ಯೂಸ್
13-07-23 06:45 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 13: ಮೂರು ಪಿಕಪ್ ವಾಹನಗಳಲ್ಲಿ ರಾತ್ರಿ ವೇಳೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಯುವಕರನ್ನು ಬಂಧಿಸಿದ್ದಾರೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಉಜಿರೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಮೂರು ಪಿಕಪ್ ವಾಹನಗಳನ್ನು ಕನ್ಯಾಡಿಯಲ್ಲಿ ಪೊಲೀಸರು ಅಡ್ಡಹಾಕಿದ್ದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಆರು ದನಗಳು, ಎರಡು ಕಂದು ಬಣ್ಣದ ಗಂಡು ಕರುಗಳು ಪತ್ತೆಯಾಗಿದ್ದು, ತಪಾಸಣೆ ನಡೆಸಿದಾಗ ಗೋವುಗಳನ್ನು ಹಾಸನಕ್ಕೆ ಮಾರಾಟಕ್ಕಾಗಿ ಒಯ್ಯುತ್ತಿರುವುದಾಗಿ ಆರೋಪಿಗಳು ಮಾಹಿತಿ ನೀಡಿದ್ದಾರೆ.

ಗೋವುಗಳನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಮತ್ತು ನಾವೂರು ಪರಿಸರದಿಂದ ಖರೀದಿಸಿದ್ದು, ಮಾರಾಟ ಮಾಡುವ ಉದ್ದೇಶದಿಂದ ಹಾಸನಕ್ಕೆ ಒಯ್ಯುತ್ತಿರುವುದಾಗಿ ಆರೋಪಿಗಳ ಪೈಕಿ ಚೆನ್ನಕೇಶವ ತಿಳಿಸಿದ್ದಾನೆ. ಆದರೆ, ಸಾಗಾಟ ಪರವಾನಗಿ ಇಲ್ಲದೇ ಇದ್ದುದರಿಂದ ವಾಹನಗಳ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪಿಕಪ್ ವಾಹನಗಳು ನಾವೂರು ಗ್ರಾಮದ ರಮಾನಂದ ಸಾಲ್ಯಾನ್, ಪ್ರಮೋದ್ ಸಾಲ್ಯಾನ್, ಕೃಷ್ಣ ಎಂಬವರಿಗೆ ಸೇರಿದ್ದು ಎಂಬ ಮಾಹಿತಿ ಸಿಕ್ಕಿದೆ. ಹಾಸನ ಜಿಲ್ಲೆಯ ಅರಕಲಗೂಡು ನಿವಾಸಿ ಚೆನ್ನಕೇಶವ(33), ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದ ಪುಷ್ಪರಾಜ್(20), ನಾವೂರು ಗ್ರಾಮದ ಪ್ರಮೋದ್ ಸಾಲ್ಯಾನ್(49), ಹೊಳೆನರಸೀಪುರ ತಾಲೂಕಿನ ಹಳೆಕೋಟೆ ನಿವಾಸಿ ಸಂದೀಪ್ (27) ಬಂಧಿತರು.
ಜಾನುವಾರುಗಳ ಒಟ್ಟು ಮೌಲ್ಯ 65 ಸಾವಿರ ಹಾಗೂ ವಾಹನಗಳ ಮೌಲ್ಯ 7 ಲಕ್ಷ ಆಗಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಬಂಧಿತರು ಬಿಜೆಪಿ ಕಾರ್ಯಕರ್ತರು ಎನ್ನಲಾಗುತ್ತಿದ್ದು, ಪಕ್ಷದ ಮುಖಂಡರಿಗೆ ಗೊತ್ತಿದ್ದೇ ಗೋವುಗಳನ್ನು ಅಕ್ರಮ ಸಾಗಿಸುವ ಕೆಲಸ ಮಾಡುತ್ತಿದ್ದಾರೆಯೇ ಎಂಬ ಸಂಶಯ ಉಂಟಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Mangalore Transporting cattle illegally Beltangady Four BJP workers arrested. Dharmasthala police arrested four people, in connection with transporting cattle in an inhumane manner in three vehicles.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm