ಬ್ರೇಕಿಂಗ್ ನ್ಯೂಸ್
18-07-23 03:23 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 18: ಕುಡಿತದ ಮತ್ತಿನಲ್ಲಿ ಮಗನೇ ತನ್ನ ತಂದೆ, ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಬ್ಯಾಟರಾಯನಪುರದಲ್ಲಿ ಬೆಳಕಿಗೆ ಬಂದಿದೆ. ತಾಯಿ ಶಾಂತ (60) ಮತ್ತು ತಂದೆ ಭಾಸ್ಕರ್ (63) ಕೊಲೆಯಾದ ದುರ್ದೈವಿಗಳು. ಶರತ್ (26) ಎಂಬಾತ ಕೃತ್ಯ ಎಸಗಿದ್ದಾನೆ.
ಶರತ್ ಕುಡಿತದ ಚಟ ಅಂಟಿಸಿಕೊಂಡಿದ್ದು ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಸೋಮವಾರ ಸಂಜೆ ಶರತ್ ತಂದೆ, ತಾಯಿ ಮೇಲೆ ಎರಗಿ ಏಕಾಏಕಿ ರಾಡ್‌ನಿಂದ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಇಬ್ಬರು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಹಿಂದೆ ಕೂಡ ಮನೆಯಲ್ಲಿ ಶರತ್ ಗಲಾಟೆ ಮಾಡಿ ಅಪ್ಪ ಅಮ್ಮನಿಗೆ ಹೊಡೆಯುವುದು ಮಾಡುತ್ತಿದ್ದ ಎನ್ನಲಾಗಿದೆ.

ಶಾಂತ ಹಾಗೂ ಭಾಸ್ಕರ್ ದಂಪತಿ ಮಂಗಳೂರು ಮೂಲದವರಾಗಿದ್ದು, 12 ವರ್ಷಗಳ ಹಿಂದೆ ಬೆಂಗಳೂರಿನಲ್ಲಿಯೇ ನೆಲಸಿದ್ದರು. ಶಾಂತ ಕೇಂದ್ರ ಸರ್ಕಾರದ ಸಿಬ್ಬಂದಿ ಆಗಿದ್ದು ಇತ್ತೀಚೆಗಷ್ಟೇ ನಿವೃತ್ತಿ ಹೊಂದಿದ್ದರು. ತಂದೆ ಭಾಸ್ಕರ್ ಖಾಸಗಿ ಕ್ಯಾಂಟೀನ್ ಒಂದರಲ್ಲಿ ಕ್ಯಾಶಿಯರ್ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಆರೋಪಿ ಶರತ್ ಕಿರಿಯ ಮಗ. ಶರತ್ ಕೆಲವೊಮ್ಮೆ ಸೈಕೋ ರೀತಿ ವರ್ತಿಸುತ್ತಿದ್ದ. ನಿನ್ನೆ ಸೋಮವಾರ ಸಂಜೆ ಕುಡಿದು ಮನೆಯಲ್ಲಿ ಗಲಾಟೆ ಮಾಡಿದ್ದಾನೆ. ಇದನ್ನು ಪ್ರಶ್ನಿಸಿದ್ದಕ್ಕೆ ಅಪ್ಪ-ಅಮ್ಮನಿಗೆ ರಾಡ್‌ನಿಂದ ಹೊಡೆದು ಕೊಂದಿದ್ದಾನೆ. ಬಳಿಕ ಮನೆ ಡೋರ್ ಲಾಕ್ ಮಾಡಿ ಪರಾರಿ ಆಗಿದ್ದಾನೆ.

ದಂಪತಿಯ ದೊಡ್ಡ ಮಗ ಇಂದು ಬೆಳಗ್ಗೆ ತಂದೆ-ತಾಯಿಗೆ ಕರೆ ಮಾಡಿದ್ದು ಕರೆ ಸ್ವೀಕರಿಸದ್ದರಿಂದ ಅನುಮಾನಗೊಂಡು ಪಕ್ಕದ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾನೆ. ಈ ವೇಳೆ ದಂಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ತಿಳಿದು ಬಂದಿದೆ.
ಸ್ಥಳೀಯರು ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ದೌಡಾಯಿಸಿದ್ದು, ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನಾಪತ್ತೆ ಆಗಿರುವ ಶರತ್‌ಗಾಗಿ ಹುಡುಕಾಟ ನಡೆಸಿದ್ದಾರೆ.
Drunkard psycho son kills both father and mother native of Mangalore in Bangalore using the rod. The deceased has been identified as Bhaskar and Shantha. Murder son Sharath is said to be absconding.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm