ಬ್ರೇಕಿಂಗ್ ನ್ಯೂಸ್
19-07-23 03:26 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 19: ಸಿಸಿಬಿ ಪೊಲೀಸರು ಭಾರೀ ಭಯೋತ್ಪಾದನಾ ದಾಳಿಯ ಸಂಚನ್ನು ವಿಫಲಗೊಳಿಸಿದ್ದು, ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕೇಂದ್ರೀಯ ಅಪರಾಧ ವಿಭಾಗ ಹಾಗೂ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಐವರನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಗಳು ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂಬುದನ್ನು ಪತ್ತೆ ಮಾಡಿದ್ದಾರೆ.
ಬಂಧಿತರು ಬೆಂಗಳೂರಿನ ನಿವಾಸಿಗಳಾಗಿದ್ದು, ಸೈಯದ್ ಸುಹೇಲ್, ಉಮರ್, ಜುನೈದ್, ಮುದಾಸಿರ್ ಮತ್ತು ಜಾಹಿದ್ ಎಂದು ಗುರುತಿಸಲಾಗಿದೆ. ಬಂಧಿತರನ್ನು ವಿಚಾರಣೆ ನಡೆಸಲಾಗುತ್ತಿದೆ. ಐವರು ಶಂಕಿತ ಉಗ್ರರ ಮೊಬೈಲ್ ಫೋನ್‌ಗಳು ಮತ್ತು ಭಾರೀ ಪ್ರಮಾಣದಲ್ಲಿ ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಮಡಿವಾಳದ ಟೆಕ್ನಿಕಲ್ ಸೆಲ್‌ನಲ್ಲಿ ಶಂಕಿತ ಉಗ್ರರ ತೀವ್ರ ವಿಚಾರಣೆ ನಡೆಯುತ್ತಿದೆ.
ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದ ದಾಳಿ ನಡೆಸಲು ಶಂಕಿತ ಉಗ್ರರು ಯೋಜನೆ ರೂಪಿಸಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಬಂಧಿತರು ಐಸಿಸ್ ಮಾಡ್ಯೂಲ್‌ನ ಭಾಗವಾಗಿದ್ದು, ಜುನೈದ್ ಅಹ್ಮದ್ ಇವರಿಗೆ ಮುಖ್ಯಸ್ಥನಾಗಿದ್ದ ಎಂದು ತಿಳಿದುಬಂದಿದೆ. ಗುಜರಾತ್ ಗಡಿ ಅಥವಾ ಪಂಜಾಬ್ ಗಡಿಯ ಮೂಲಕ ಸ್ಫೋಟಕಗಳನ್ನು ಸಂಗ್ರಹಿಸಲು ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್‌ಐ ಜೊತೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಜುಬೈದ್ 2017ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ಆನಂತರ ಹೊರಬಂದು ತಲೆಮರೆಸಿಕೊಂಡಿದ್ದ.
ಬಂಧಿತರು ಜುನೈದ್ ಅಹ್ಮದ್ ತಂಡದವರಾಗಿದ್ದು, ಜುನೈದ್ ನಾಪತ್ತೆಯಾಗಿದ್ದಾನೆ. 2017ರಲ್ಲಿ ಮೂರು ಅಪಹರಣ, ಓರ್ವನ ಹತ್ಯೆ ಪ್ರಕರಣದಲ್ಲಿ ಜುನೈದ್ ಪರಪ್ಪನ ಅಗ್ರಹಾರ ಸೇರಿದ್ದ. ಈ ವೇಳೆ 24 ಆರೋಪಿಗಳನ್ನು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಪೊಲೀಸರು ಬಂಧಿಸಿದ್ದರು. ಜೈಲಿನಲ್ಲಿಯೇ ಉಗ್ರರ ಜೊತೆ ಸಂಪರ್ಕ ಸಾಧಿಸಿದ್ದ ಜುನೈದ್ ತನ್ನದೇ ತಂಡ ಕಟ್ಟಿಕೊಂಡು ಕೆಲಸ ಮಾಡುವುದಾಗಿ ಉಗ್ರ ಸಂಘಟನೆಯ ಬೆಂಬಲ ಪಡೆದಿದ್ದ. ಇವರೆಲ್ಲ ಸುಲ್ತಾನ್ ಪಾಳ್ಯದ ಮಸೀದಿಯೊಂದರ ಪಕ್ಕದಲ್ಲಿ ವಾಸವಿದ್ದು ವಿಧ್ವಂಸಕ ಕೃತ್ಯಕ್ಕೆ ನಡೆಸಬೇಕಾದ ಬಗ್ಗೆ ಪ್ಲಾನಿಂಗ್ ನಡೆಸುತ್ತಿದ್ದರು.
ಉಗ್ರರ ಟಾರ್ಗೆಟ್ ಬೆಂಗಳೂರು ಆಗಿತ್ತು !
ಶಂಕಿತ ಉಗ್ರರು ಬೆಂಗಳೂರು ನಗರವನ್ನೇ ಗುರಿಯಾಗಿಸಿಕೊಂಡು ವಿಧ್ವಂಸಕ ಕೃತ್ಯವೆಸಗಲು ಹೊಂಚು ಹಾಕುತ್ತಿದ್ದರು. ಪೊಲೀಸರ ಮಾಹಿತಿ ಪ್ರಕಾರ ಅರೆಸ್ಟ್ ಆದ ಎಲ್ಲಾ ಶಂಕಿತರು ಬೆಂಗಳೂರು ಸ್ಥಳೀಯ ನಿವಾಸಿಗಳೇ ಆಗಿದ್ದಾರೆ. ಉಗ್ರರ ಜೊತೆ ಸಂಪರ್ಕ ಹೊಂದಿ ವಿಧ್ವಂಸಕ ಕೃತ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದರು. ಬೆಂಗಳೂರಿನಲ್ಲಿ ಎಲ್ಲೆಲ್ಲಿ ಬ್ಲಾಸ್ಟ್ ಮಾಡಬೇಕು ಅನ್ನೋದರ ಬಗ್ಗೆಯೂ ಮಾಹಿತಿ ಸಂಗ್ರಹಿಸಿದ್ದರು. ಶಂಕಿತರ ಟೀಂ ಎಲ್ಲಾ ಕಡೆಯೂ ಆಕ್ಟೀವ್ ಆಗಿತ್ತು. ಬೆಂಗಳೂರಿನ ಸುಮಾರು ಹತ್ತು ಕಡೆ ಬ್ಲಾಸ್ಟಿಂಗ್ ಗೆ ಪ್ಲಾನ್ ಮಾಡಿದ್ದರು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ. ಆರೋಪಿಗಳಿಂದ 7 ಪಿಸ್ತೂಲ್, 12 ಫೋನ್‌ಗಳು, 45 ಜೀವಂತ ಗುಂಡು, ವಾಕಿಟಾಕಿ ಸೇರಿ ಹಲವು ವಸ್ತುಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Five suspected terrorists were arrested in Bengaluru today by the Central Crime Branch (CCB) for allegedly planning a terror attack in the Karnataka capital. The police are on the lookout for another suspect, Junaid, from Bengaluru's RT Nagar area, whose current whereabouts are unknown, however, according to the police, the man is believed to be settled abroad and is the mastermind behind providing arms and explosives to the five arrested.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am