ಬ್ರೇಕಿಂಗ್ ನ್ಯೂಸ್
26-07-23 05:16 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 26: ದಾವಣಗೆರೆ ಸಂಸದ ಡಾ.ಜಿ.ಎಂ ಸಿದ್ದೇಶ್ವರ್ ಅವರನ್ನು ಹನಿಟ್ರಾಪ್ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಅಪರಿಚಿತ ಯುವತಿಯೊಬ್ಬಳು ವಾಟ್ಸಪ್ ಮೂಲಕ ವಿಡಿಯೋ ಕಾಲ್ ಮಾಡಿದ್ದು ಅಶ್ಲೀಲವಾಗಿ ವರ್ತಿಸಿ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಕೆಯೊಡ್ಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಸಂಸದರು ಬೆಂಗಳೂರಿನ ನಿವಾಸದಲ್ಲಿದ್ದ ವೇಳೆ ಜುಲೈ 20ರಂದು ರಾತ್ರಿ 10:16ರ ವೇಳೆ 'ಹೌ ಆರ್ ಯು' ಅಂತ ಮೆಸೇಜ್ ಬಂದಿತ್ತು. 10:20ಕ್ಕೆ ಕರೆ ಮಾಡಿದ್ದು ಬಳಿಕ ವಿಡಿಯೋ ಕಾಲ್ ಮಾಡಿ, ಯುವತಿ ಅಶ್ಲೀಲವಾಗಿ ವರ್ತಿಸಿದ್ದಾಳೆ.

ಕರೆ ಬಂದಾಗ ಮನೆಯ ಒಳಗಿದ್ದರೆ ಸರಿಯಾಗಿ ಧ್ವನಿ ಕೇಳದೆಂಬ ಕಾರಣಕ್ಕೆ, ಸಂಸದ ಸಿದ್ದೇಶ್ವರ್ ಯಾರೋ ಕರೆ ಮಾಡಿದ್ದಾರೆಂದು ಪತ್ನಿ ಗಾಯತ್ರಿ ಸಿದ್ದೇಶ್ವರ್ ಜೊತೆಗೆ ಮನೆಯ ಹಾಲ್‌ಗೆ ಬಂದಿದ್ದಾರೆ. ಆಗ ಅಪರಿಚಿತ ಯುವತಿ ವಾಟ್ಸಪ್ ವಿಡಿಯೋ ಕಾಲ್ ಮಾಡಿದ್ದು ಅಸಭ್ಯವಾಗಿ ವರ್ತಿಸಿದ್ದಾಳೆ. ಯುವತಿಯ ಇಂತಹ ವರ್ತನೆಯಿಂದ ಸಿಟ್ಟಿಗೆದ್ದ ಸಂಸದ ಸಿದ್ದೇಶ್ವರ್ ಮತ್ತು ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್, ಯುವತಿಯನ್ನು ಗದರುವ ಪ್ರಯತ್ನ ಮಾಡಿದ್ದಾರೆ.
ಆದರೆ ಮತ್ತೆ ಕರೆ ಮಾಡಿದ ಅಪರಿಚಿತ ಯುವತಿ, ಸಂಸದರಿಗೆ ಬ್ಲ್ಯಾಕ್ ಮಾಡಲು ಯತ್ನಿಸಿದ್ದಾಳೆ. ವಿಡಿಯೋವನ್ನು ರೆಕಾರ್ಡ್ ಮಾಡಿದ್ದು ಸೋಷಿಯಲ್ ಮೀಡಿಯಾಗೆ ಹಾಕುವುದಾಗಿ ಬೆದರಿಕೆ ಹಾಕಿದ್ದಾಳೆ. ರಾಜಸ್ಥಾನದಿಂದ ಕರೆ ಮಾಡುತ್ತಿರುವುದಾಗಿ ಹೇಳಿದ್ದಾಗಿ ಈ ಬಗ್ಗೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಸಂಸದ ಸಿದ್ದೇಶ್ವರ ತಿಳಿಸಿದ್ದಾರೆ.
Davanagere BJP MP Siddeshwara gets naked WhatsApp calls, blackmail for money over video clip. Davanagere BJP MP and former Union minister GM Siddeshwara, 71, received a WhatsApp video call when he was in his flat at Kingfisher Towers, near UB City, on July 20. A woman allegedly began showing him her private parts and spoke to him inappropriately.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm