ಬ್ರೇಕಿಂಗ್ ನ್ಯೂಸ್
03-08-23 11:01 am Mangalore Correspondent ಕ್ರೈಂ
ಉಳ್ಳಾಲ, ಆಗಸ್ಟ್ 3: “ಡ್ರಗ್ಸ್ ಫ್ರಿ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತುವಾದ ಎಂಡಿಎಂಎ (ಸಿಂಥೆಟಿಕ್ ಡ್ರಗ್ಸ್)ನ್ನು ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್‌ಗಳನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ ಬಂಧಿಸಲಾಗಿದೆ.
ಬಂಧಿತ ಮೂವರು ಸಜೀಪ ಮುನ್ನೂರು ಗ್ರಾಮದವರಾಗಿದ್ದು, ನಂದಾವರ ಬಸ್ತಿಗುಡ್ಡೆ ಹೌಸ್ ನಿವಾಸಿ, ಪ್ರಸ್ತುತ ಉಳ್ಳಾಲ ಹಳೆಕೋಟೆಯಲ್ಲಿ ವಾಸವಾಗಿದ್ದ ಮೊಹಮ್ಮದ್ ಹಫೀಝ್ ಯಾನೆ ಅಪ್ಪಿ(35), ನಂದಾವರ ನಿವಾಸಿ ಅಮೀರ್ ಯಾನೆ ಅಮ್ಮಿ(34), ದಾಸರಗುಡ್ಡೆ ಪ್ರಸ್ತುತ ಹಳೆಯಂಗಡಿ ಸಂತೆ ಕಟ್ಟೆ ಮಸೀದಿ ಬಳಿ ನಿವಾಸಿ ಜಾಕೀರ್ ಹುಸೇನ್ ಯಾನೆ ತಾಚಿ(28) ಆರೋಪಿಗಳು.

ಆರೋಪಿಗಳಿಂದ ಒಟ್ಟು 200 ಗ್ರಾಂ ತೂಕದ 10,00,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಸ್ವಿಫ್ಟ್ ಕಾರು-1, 70,000 ರೂ. ಮೌಲ್ಯದ 3 ಮೊಬೈಲ್ ಫೋನ್‌ಗಳು, , ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 15,70,500 ರೂ. ಅಂದಾಜಿಸಲಾಗಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಾರಾಟ ಮಾಡಲು ಸಾಗಿಸುತ್ತಿರುವ ಖಚಿತ ಮಾಹಿತಿಯಂತೆ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶ್ಯಾಮ್‌ಸುಂದರ್ ಎಚ್.ಎಂ., ಪಿಎಸ್‌ಐಯವರಾದ ರಾಜೇಂದ್ರ ಬಿ., ಸುದೀಪ್ ಎಂ.ವಿ., ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬಂದಿಗಳ ತಂಡ ದಾಳಿ ನಡೆಸಿದೆ.
In an effort to make the city drug-free, the CCB police successfully arrested three drug peddlers in possession of MDMA (Methylenedioxymethamphetamine) drug.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm