ಬ್ರೇಕಿಂಗ್ ನ್ಯೂಸ್
06-11-20 07:48 pm Mangaluru Correspondent ಕ್ರೈಂ
ಬಂಟ್ವಾಳ, ನವೆಂಬರ್ 6: ಮೆಲ್ಕಾರ್ ಬಳಿ ಇತ್ತೀಚೆಗೆ ನಡೆದಿದ್ದ ಫಾರೂಕ್ ಯಾನೆ ಚೆನ್ನ ಫಾರೂಕ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಉಳ್ಳಾಲದ ತೊಕ್ಕೊಟ್ಟು ಬಳಿ ಬಂಧಿಸಿದ್ದಾರೆ.
ಬಂಧಿತರನ್ನು ನಂದಾವರ ನಿವಾಸಿ ಸದ್ಯ ತೊಕ್ಕೊಟ್ಟಿನಲ್ಲಿ ವಾಸವಾಗಿರುವ ಹಫೀಜ್ ಆಲಿಯಾಸ್ ಅಪ್ಪಿ ಹಾಗೂ ಅಕ್ಕರಂಗಡಿ ನಿವಾಸಿ ಇರ್ಶಾದ್ ಎಂದು ಪೊಲೀಸರು ತಿಳಿಸಿದ್ದಾರೆ.
ಅ.22ರಂದು ಮೆಲ್ಕಾರ್ ಸಮೀಪದ ಗುಡ್ಡೆಅಂಗಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ಫಾರೂಕ್ ಆಲಿಯಾಸ್ ಚೆನ್ನ ಫಾರೂಕ್ ಎಂಬಾತ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಟ್ಟಾಡಿಸಿ ಕೊಚ್ಚಿ ಕೊಲೆ ನಡೆಸಿದ್ದರು. ಫಾರೂಕ್ ಜೊತೆಗೆ ದ್ವೇಷ ಹೊಂದಿದ್ದ ಖಲೀಲ್, ಹಫೀಜ್ ಆಲಿಯಾಸ್ ಅಪ್ಪಿ ಹಾಗೂ ಇರ್ಶಾದ್ ಎಂಬವರು ಕೊಲೆ ನಡೆಸಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ, ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಲೀಲ್ ಮತ್ತು ಫಾರೂಕ್ ಮಧ್ಯೆ ದ್ವೇಷ ಇತ್ತು. ಇದೇ ದ್ವೇಷದಲ್ಲಿ ಕೊಲೆ ನಡೆದಿತ್ತು ಎನ್ನಲಾಗಿದೆ. ಕೊಲೆಯ ಮರುದಿನ ಪರಾರಿಯಾಗುತ್ತಿದ್ದ ಖಲೀಲ್ ಅನ್ನು ಪೊಲೀಸರು ಬೆನ್ನಟ್ಟಿ ಉಪ್ಪಿನಂಗಡಿ ಬಳಿಯ ಗುಂಡ್ಯದಲ್ಲಿ ಸೆರೆ ಹಿಡಿದಿದ್ದರು. ಈ ವೇಳೆ, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರಿಂದ ಖಲೀಲ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು.
In connection to the Murder of Rowdy-sheeter Umar Farooq two persons have been arrested at Thokottu, Mangalore. Farooq was hacked to death by gang in Bogodi, Melkar with machetes.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm