ಬ್ರೇಕಿಂಗ್ ನ್ಯೂಸ್
22-08-23 01:19 pm HK News Desk ಕ್ರೈಂ
ಮಡಿಕೇರಿ, ಆಗಸ್ಟ್ 22: ಇಲ್ಲಿನ ಮೆಡಿಕಲ್ ಕಾಲೇಜು ಆವರಣದಲ್ಲಿಪುಂಡಾಟದ ವರ್ತನೆ ತೋರಿದ್ದಲ್ಲದೆ, ಅಶ್ಲೀಲ ಪ್ರದರ್ಶನ ಮಾಡಿದ್ದ ಆರೋಪಿಗಳಲ್ಲಿ ಒಬ್ಬನನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.
ಮಧ್ಯರಾತ್ರಿಯ ಹೊತ್ತು ಇಲ್ಲಿನ ಲೇಡಿಸ್ ಹಾಸ್ಟೆಲ್ ಆವರಣಕ್ಕೆಕೆಲವು ಪುಂಡ ಯುವಕರು ಆಗಮಿಸಿ ಪುಂಡಾಟಿಕೆ ನಡೆಸುವುದಲ್ಲದೆ, ಅಲ್ಲೇ ಮುಕ್ತವಾಗಿ ಹಸ್ತಮೈಥುನ ನಡೆಸುತ್ತಿರುವ ಬಗ್ಗೆ ಈಗಾಗಲೇ ಹಲವು ಬಾರಿ ದೂರು ನೀಡಲಾಗಿತ್ತು. ಆದರೆ, ಯಾರೂ ಇದನ್ನು ಗಂಭೀರವಾಗಿ ತೆಗೆದುಕೊಳ್ಳದೆ ಇದ್ದಾಗ ಸೋಮವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ದುಷ್ಟ ಕೂಟದ ಅಸಭ್ಯ ವರ್ತನೆಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದರೂ ಕ್ರಮ ಕೈಗೊಳ್ಳದ ವಿರುದ್ಧ ಸಿಟ್ಟಿಗೆದ್ದಿದ್ದರು. ಇದರ ಬೆನ್ನಿಗೇ ಒಬ್ಬ ಆರೋಪಿಯ ಅರೆಸ್ಟ್ ಆಗಿದೆ.
ಸೋಮವಾರ ನಡೆದ ಪ್ರತಿಭಟನೆ ವೇಳೆ ಮಡಿಕೇರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಆಡಳಿತ ಮಂಡಳಿ, ವಿದ್ಯಾರ್ಥಿನಿಯರಿಗೆ ಎದುರಾಗಿರುವ ಅಸುರಕ್ಷಿತ ಭಾವವನ್ನು ದೂರ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು. ತಕ್ಷಣದಿಂದಲೇ ಕಾರ್ಯಪ್ರವೃತ್ತರಾದ ಮಡಿಕೇರಿ ಪೊಲೀಸರು ಕತ್ತಲೆಕಾಡು ನಿವಾಸಿ ಸಿಜಿಲ್(22) ಎಂಬಾತನನ್ನು ಬಂಧಿಸಿದ್ದಾರೆ.

ಕಾಲೇಜು ಮತ್ತು ಹಾಸ್ಟೆಲ್ ಆವರಣದ ಸಿಸಿ ಟಿವಿ ಕ್ಯಾಮೆರಾಗಳಲ್ಲಿ ಪುಂಡರ ವರ್ತನೆಯ ದೃಶ್ಯಾವಳಿಗಳು ಸೆರೆಯಾಗಿರುವುದನ್ನು ವಿದ್ಯಾರ್ಥಿಗಳು ಉಲ್ಲೇಖಿಸಿದ್ದರು. ಪೊಲೀಸರು ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಸಿಜಿಲ್ ಬೈಕ್‌ನಲ್ಲಿ ಬಂದು ಹುಡುಗಿಯರಿಗೆ ತೊಂದರೆ ಮಾಡುತ್ತಿದ್ದುದಲ್ಲದೆ, ಮಧ್ಯರಾತ್ರಿಯ ಹೊತ್ತು ಹಾಸ್ಟೆಲ್ ಎದುರು ಬಂದು ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.
ಪ್ರಸಕ್ತ ಸಿಜಿಲ್‌ನನ್ನು ಬಂಧಿಸಲಾಗಿದೆ. ಆದರೆ, ಈ ದುಷ್ಕೃತ್ಯದಲ್ಲಿ ಇನ್ನೂ ಹಲವು ಯುವಕರು ಭಾಗಿಯಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅವರ ಮೇಲೂ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Kodagu Institute of Medical Science students stage protest over indecent behaviour by boys of Masturbation. One arrested by Police after protest. The students said that miscreants have been behaving indecently in front of them. The act has been recorded on CCTV. Fear has gripped the students, they alleged.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm