ಬ್ರೇಕಿಂಗ್ ನ್ಯೂಸ್
07-11-20 12:38 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 07: ಕಿರುಕುಳ ಪ್ರಕರಣದಲ್ಲಿ ದೂರು ಕೊಡಲು ಹೋಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆಯೇ ಬಜ್ಪೆ ಠಾಣೆಯ ಪೊಲೀಸರು ಬಾಸುಂಡೆ ಬರುವಂತೆ ಹೊಡೆದು ಹಲ್ಲೆಗೈದಿರುವ ಆರೋಪ ಕೇಳಿಬಂದಿದ್ದು, ಮೂವರು ಪೊಲೀಸ್ ಪೇದೆಗಳ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಂಗಳೂರು ಹೊರವಲಯದ ಗಂಜಿಮಠದ ಪರಿಸರದ ಪಿಯುಸಿ ವಿದ್ಯಾರ್ಥಿನಿ ಹಲ್ಲೆಗೊಳಗಾದ ಯುವತಿಯಾಗಿದ್ದು, ಕೈ, ಕಾಲಿಗೆ ತೀವ್ರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯಾರ್ಥಿನಿಗೆ ಎಡಪದವು ಬಳಿಯ ಇರುವೈಲು ನಿವಾಸಿ ಶ್ರೀಕಾಂತ್ ನಾಗೇಶ್ ಎಂಬ ಯುವಕನ ಜೊತೆಗೆ ಫೇಸ್ಬುಕ್ ನಲ್ಲಿ ಪರಿಚಯ ಆಗಿತ್ತು ಎನ್ನಲಾಗುತ್ತಿದೆ. ಈ ಬಗ್ಗೆ ಪರಿಚಯ ಪ್ರೇಮಕ್ಕೆ ತಿರುಗಿ, ಯುವಕ ನಾಗೇಶ್ ಯುವತಿಯ ಮನೆಗೆ ಬಂದು ಕಿರುಕುಳ ನೀಡಿದ್ದಾನೆ. ಮದುವೆ ಮಾಡಿಕೊಡುವಂತೆ ಒತ್ತಾಯ ಮಾಡಿದ್ದು, ಯುವತಿ ಅಪ್ರಾಪ್ತಳಾಗಿದ್ದರಿಂದ ಹೆತ್ತವರು ನಿರಾಕರಿಸಿದ್ದರು ಎನ್ನಲಾಗಿದೆ.
ಈ ನಡುವೆ, ಬೇರೆ ಯುವಕರನ್ನು ಕಟ್ಟಿಕೊಂಡು ಯುವತಿಯ ಮನೆಗೆ ಬಂದಿದ್ದ ಯುವಕ ನಾಗೇಶ್, ಮದುವೆ ಮಾಡಿಕೊಡದಿದ್ದರೆ ನಿಮ್ಮ ಮನೆಯನ್ನು ಧ್ವಂಸ ಮಾಡುತ್ತೇನೆಂದು ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದ್ದು ಯುವತಿಯ ತಂದೆ ಈ ಬಗ್ಗೆ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಆದರೆ, ನಾಗೇಶ್ ಮರುದಿನ ಬಜ್ಪೆ ಠಾಣೆಗೆ ವಕೀಲರ ಜೊತೆ ತೆರಳಿದ್ದಾನೆ. ಇದರಿಂದ ಯು ಟರ್ನ್ ಹೊಡೆದ ಬಜ್ಪೆ ಪೊಲೀಸರು ಯುವತಿಯನ್ನು ಕರೆಸಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎಂದು ದೂರಲಾಗಿದ್ದು, ಈ ಬಗ್ಗೆ ಯುವತಿಯ ತಂದೆ ಜೆರಾಲ್ಡ್ ಮ್ಯಾಕ್ಸಿಂ ಪಿಂಟೋ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.




ಅದರಂತೆ, ಮಹಿಳಾ ಠಾಣೆಯಲ್ಲಿ ಬಜ್ಪೆ ಠಾಣೆಯ ಇಬ್ಬರು ಮಹಿಳಾ ಪೇದೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೆ, ಮಂಗಳೂರು ಕೆಥೋಲಿಕ್ ಸಭಾ ಮೂಲಕ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದ್ದು, ತಪ್ಪಿತಸ್ಥ ಪೊಲೀಸರನ್ನು ಸಸ್ಪೆಂಡ್ ಮಾಡುವಂತೆ ಒತ್ತಾಯಿಸಲಾಗಿದೆ.
Video Report:
The Bajpe Police have beaten up a girl mercilessly inside the police station who had come to give a complaint of torture by an unknown Boy. An FIR has been registered against 3 police personals of Bajpe station, Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm