ಬ್ರೇಕಿಂಗ್ ನ್ಯೂಸ್
09-11-20 04:11 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಬೆಂಗಳೂರು ಮೂಲದ ಪ್ರವಾಸಿಗರು ಮಲ್ಪೆ ಕಡಲತೀರದಲ್ಲಿ ನೀರಾಟದಲ್ಲಿ ತೊಡಗಿದ್ದಾಗ, ಆ ಪೈಕಿ ಮೂವರು ಅಲೆಗಳ ನಡುವೆ ಕೊಚ್ಚಿ ಹೋಗಿದ್ದು ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಬೆಳಗ್ಗೆ ಘಟನೆ ನಡೆದಿದೆ.
ಬೆಂಗಳೂರಿನ 10 ಜನ ಪ್ರವಾಸಿಗರು ಕಡಲತೀರಕ್ಕೆ ಆಗಮಿಸಿದ್ದರು. ಈ ಪೈಕಿ ಐದಾರು ಜನ ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಮೊದಲು ಯುವತಿಯೊಬ್ಬಳು ನೀರಿನಲ್ಲಿ ಮುಳುಗಿದ್ದಾಳೆ. ಆಕೆಯ ರಕ್ಷಣೆಗಾಗಿ ಜೊತೆಗಿದ್ದ ಇನ್ನಿಬ್ಬರು ನೀರಿಗೆ ಹಾರಿದ್ದು ಈ ವೇಳೆ ಮೂವರು ಕೂಡ ಅಪಾಯಕ್ಕೆ ಸಿಲುಕಿದ್ದಾರೆ. ದಡದಲ್ಲಿ ಇದ್ದವರು ರಕ್ಷಣೆಗಾಗಿ ಮೊರೆ ಇಟ್ಟಿದ್ದಾರೆ. ಇದನ್ನು ಕೇಳಿ ಸ್ವಲ್ಪ ದೂರದಲ್ಲಿ ಜೆಟ್ ಸ್ಕೀ ನಿರ್ವಹಿಸುತ್ತಿದ್ದವರು ಸ್ಥಳಕ್ಕೆ ಧಾವಿಸಿದ್ದಾರೆ.


ಜೆಟ್ ಸ್ಕೀ ಬೋಟ್ ಮೂಲಕ ಮೊದಲು ರಕ್ಷಣೆ ಮಾಡಿ, ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರತಿದಿನ 11 ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಕಡಲು ಪ್ರಕ್ಷುಬ್ಧ ಇರುತ್ತದೆ. ಈ ಸಂದರ್ಭ ಪ್ರವಾಸಿಗರು ಕಡಲಿಗೆ ಇಳಿಯಬಾರದು ಎಂದು ಸೂಚನಾ ಫಲಕ ಹಾಕಲಾಗಿದೆ. ಆದರೆ, ಸೂಚನೆಯನ್ನು ಉಲ್ಲಂಘಿಸಿ ಪ್ರವಾಸಿಗರು ನೀರಿಗಿಳಿದು ಅಪಾಯಕ್ಕೀಡಾಗುತ್ತಾರೆ.
ಸ್ವಿಮ್ಮಿಂಗ್ ಪೂಲ್, ನದಿಯಲ್ಲಿ ಈಜಲು ಕಲಿತವರು ಸಮುದ್ರಕ್ಕೆ ತಿಳಿದು ಈಜುತ್ತೇವೆ ಎಂದು ಅಂದುಕೊಂಡಿದ್ದರೆ ಅದು ಮೂರ್ಖತನ ಎಂದು ಸ್ಥಳೀಯ ಮೀನುಗಾರ ವಿಠಲ ಕಾಂಚನ್ ಹೇಳುತ್ತಾರೆ.
Three youngsters from Bangalore who were drowned in malpe beach were rescued by localities in malpe Beach, Udupi.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm