ಬ್ರೇಕಿಂಗ್ ನ್ಯೂಸ್
06-10-23 08:52 pm Mangalore Correspondent ಕ್ರೈಂ
ಉಳ್ಳಾಲ, ಅ.6: ಗಣಿತ ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ ಪಡೆದಿದ್ದ ಆರನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಸಹಪಾಠಿಯೊಂದಿಗೆ ಸೇರಿ ಪೇಪರ್ ತಿದ್ದಿದ ಶಿಕ್ಷಕಿಯ ನೀರಿನ ಬಾಟಲಿಗೆ ಅವಧಿ ಮುಗಿದಿದ್ದ ಮಾತ್ರೆಗಳನ್ನ ಹಾಕಿ ಸೇಡು ತೀರಿಸಿದ್ದರ ಪರಿಣಾಮ ನೀರನ್ನ ಕುಡಿದಿದ್ದ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡ ಘಟನೆ ಉಳ್ಳಾಲ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದ್ದು ಘಟನೆಗೆ ಕಾರಣರಾದ ವಿದ್ಯಾರ್ಥಿನಿಯರಿಬ್ಬರಿಗೆ ಟಿಸಿ ನೀಡಲು ಶಾಲಾಡಳಿತ ಮಂಡಳಿ ನಿರ್ಧರಿಸಿರುವುದಾಗಿ ತಿಳಿದುಬಂದಿದೆ.
ಶಾಲೆಯಲ್ಲಿ ಯುನಿಟ್ ಟೆಸ್ಟ್ ನ ಗಣಿತ ವಿಷಯದಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಕಡಿಮೆ ಅಂಕ ಬಂದಿತ್ತು. ಪೇಪರ್ ತಿದ್ದಿದ ಗಣಿತ ಶಿಕ್ಷಕಿ ಸರಿಯಿದ್ದ ಉತ್ತರಕ್ಕೆ ತಪ್ಪು ಹಾಕಿದ್ದಾರೆ ಅನ್ನುವ ಬಾವನೆ ವಿದ್ಯಾರ್ಥಿನಿಯಲ್ಲಿ ಹುಟ್ಟಿತ್ತು. ಶಿಕ್ಷಕಿಯ ವಿರುದ್ಧ ಸೇಡು ತೀರಿಸಲು ತನ್ನ ಸಹಪಾಠಿಯ ಸಹಾಯ ಪಡೆದುಕೊಂಡ ವಿದ್ಯಾರ್ಥಿನಿ ಸ್ಟಾಫ್ ರೂಮ್ ನಲ್ಲಿ ಯಾರೂ ಇಲ್ಲದ ಸಂದರ್ಭ ಬಳಸಿಕೊಂಡು ತಾನು ತಂದಿದ್ದ ಅವಧಿ ಮೀರಿದ್ದ ಮಾತ್ರೆಗಳನ್ನ ಗಣಿತ ಶಿಕ್ಷಕಿ ಬಳಸುತ್ತಿದ್ದ ನೀರಿನ ಬಾಟಲಿಗೆ ಹಾಕಿದ್ದಾಳೆ.
ಗಣಿತ ಶಿಕ್ಷಕಿಯು ಬಾಟಲಿ ನೀರನ್ನು ಕುಡಿದು ಅಸ್ವಸ್ಥಗೊಂಡಿದ್ದು, ಅದೇ ನೀರನ್ನ ಸೇವಿಸಿದ್ದ ಮತ್ತೋರ್ವ ಶಿಕ್ಷಕಿಯ ಮುಖ ಊದಿಕೊಂಡಿದೆ. ಅನುಮಾನಗೊಂಡ ಶಿಕ್ಷಕರು ನೀರಿನ ಬಾಟಲಿಯನ್ನ ಪರಿಶೀಲಿಸಿದಾಗ ನೀರಿನಲ್ಲಿ ಮಾತ್ರೆಗಳು ಕರಗಿರುವುದನ್ನ ಗಮನಿಸಿದ್ದಾರೆ. ಸಿಸಿಟಿವಿ ಪರಿಶೀಲಿಸಿದಾಗ ವಿದ್ಯಾರ್ಥಿನಿಯರ ಕುಕೃತ್ಯ ಬೆಳಕಿಗೆ ಬಂದಿತ್ತು.
ಪ್ರಾಥಮಿಕ ಶಿಕ್ಷಣದಲ್ಲೇ ಕ್ರೌರ್ಯ ತೋರಿದ ವಿದ್ಯಾರ್ಥಿನಿಯರ ನಡೆಗೆ ಶಾಲಾ ರಕ್ಷಕ-ಶಿಕ್ಷಕರು ನಿಬ್ಬೆರಗಾಗಿದ್ದಾರೆ. ಖಾಸಗಿ ವಿದ್ಯಾಸಂಸ್ಥೆಗಳು ಶಿಕ್ಷಣವನ್ನು ವ್ಯಾವಹಾರಿಕ ಮತ್ತು ಸ್ಪರ್ಧಾತ್ಮಕ ರೀತಿ ನಡೆಸುತ್ತಿರುವುದು, ಪೋಷಕರು ಮಕ್ಕಳನ್ನ ರ್ಯಾಂಕ್ ಮೆಷಿನ್ ಗಳಂತೆ ಬಿಂಬಿಸುತ್ತಿರುವುದರ ಪರಿಣಾಮ ಇಂತಹ ಕೃತ್ಯಗಳನ್ನ ವಿದ್ಯಾರ್ಥಿಗಳು ನಡೆಸುತ್ತಿದ್ದಾರೆ ಎಂಬ ಕಳವಳ ಉಂಟಾಗಿದೆ. ಕೃತ್ಯವೆಸಗಿದ ವಿದ್ಯಾರ್ಥಿನಿಯರನ್ನು ಶಾಲಾಡಳಿತವು ತರಾತುರಿಯಲ್ಲಿ ಟಿ.ಸಿ ಕೊಟ್ಟು ಡಿಬಾರ್ ಮಾಡಲು ಮುಂದಾಗಿದ್ದು ಆ ಮೂಲಕ ಶಾಲೆಯ ಮಾನ ಕಾಪಾಡಲು ಹೊರಟಿದೆ.
ಪ್ರಕರಣ ಕಾನೂನು ವ್ಯಾಪ್ತಿಗೆ ಬಂದರೆ ಮಾತ್ರ ಕಾನೂನಿನೊಂದಿಗೆ ಸಂಘರ್ಷ ಮೆರೆದ ಅಪ್ರಾಪ್ತ ವಿದ್ಯಾರ್ಥಿನಿಯರನ್ನ ಸಲಹಾ ಕೇಂದ್ರದಲ್ಲಿ ಸಮಾಲೋಚನೆ ನಡೆಸಲು ಸಾಧ್ಯ. ಸದ್ಯ ಪೊಲೀಸ್ ದೂರು ದಾಖಲಾಗಿಲ್ಲ. ಶಿಕ್ಷಣ ಇಲಾಖೆಯೂ ಪ್ರಕರಣವನ್ನು ಗಂಭೀರ ಪರಿಗಣಿಸಿ ವಿಚಾರಣೆ ನಡೆಸಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.
Mangalore minor student of private School Mix expired tablets into the water bottle of tow teachers for giving less marks in maths exam at Ullal. The teacher is said to be ill. The administration has planned to suspend the student
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm