ಬ್ರೇಕಿಂಗ್ ನ್ಯೂಸ್
06-08-20 08:51 am Headline Karnataka News Network ಕ್ರೈಂ
ಮುಂಬೈ: ಬಾಲಿವುಡ್ ಕಿರುತೆರೆಯ ಪ್ರತಿಭಾನ್ವಿತ ನಟ ಸಮೀರ್ ಶರ್ಮಾ (44) ತಮ್ಮ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸಮೀರ್ ಶರ್ಮಾ ಮುಂಬೈನ ಪಶ್ಚಿಮ ಮಲಾಡ್‍ನ ರಸ್ತೆಯಲ್ಲಿರುವ ನೇಹಾ ಸಿಹೆಚ್‍ಎಸ್ ಬಿಲ್ಡಿಂಗ್‍ನ ಫ್ಲ್ಯಾಟ್ ನಲ್ಲಿ ವಾಸವಾಗಿದ್ದರು. ಆದರೆ ಬುಧವಾರ ರಾತ್ರಿ ಫ್ಲ್ಯಾಟ್‍ನ ಅಡುಗೆ ಮನೆಯಲ್ಲಿ ನೇಣು ಬಿಗಿದ ಸೀತಿಯಲ್ಲಿ ಪತ್ತೆಯಾಗಿದ್ದಾರೆ.
ಸಮೀರ್ ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆ ನಿವಾಸಿಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ಒಡೆದು ನೋಡಿದಾಗ ಸಮೀರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸಾವನ್ನಪ್ಪಿದ ಎರಡು ದಿನ ಮೇಲಾಗಿದ್ದರಿಂದ ಶವ ಕೊಳೆಯಲಾರಂಭಿಸಿತ್ತು.
ಕಳೆದ ಫೆಬ್ರವರಿಯಲ್ಲಿ ಅವರು ಈ ಅಪಾರ್ಟ್‍ಮೆಂಟ್‍ಅನ್ನು ಬಾಡಿಗೆಗೆ ಪಡೆದಿದ್ದರು. ಸಮೀರ್ ದೇಹದ ಸ್ಥಿತಿಯನ್ನು ನೋಡಿದರೆ ಅವರು ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದು, ಸಮೀರ್ ಮನೆಯಲ್ಲಿ ಯಾವುದೇ ಡೆತ್ ನೋಟ್ ಲಭ್ಯವಾಗಿಲ್ಲ. ನೆರೆಹೊರೆಯವರ ಪ್ರಕಾರ ಸಮೀರ್ ಕಳೆದ ಕೆಲ ದಿನಗಳಿಂದ ಒಂಟಿಯಾಗಿರುತ್ತಿದ್ದರು. ಹೊರಗಡೆ ಹೆಚ್ಚು ಕಾಣಿಸಿಕೊಳ್ಳುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಕೊಂಡು ತನಿಖೆ ಮುಂದುವರಿಸಿದ್ದಾರೆ. ಸಮೀರ್ ಸೂಪರ್ ಹಿಟ್ ಧಾರಾವಾಹಿಗಳಾದ ‘ದಿಲ್ ಕ್ಯಾ ಚಾಹ್ತಾ’, ‘ಕಹಾನಿ ಘರ್ ಘರ್ ಕೀ’, ‘ಸಾಸ್ ಕಭೀ ಬಹು ಥೀ’ ಗಳಲ್ಲಿ ನಟಿಸಿದ್ದರು. ‘ಯೇ ರಿಶ್ತೆ ಹೈ ಪ್ಯಾರ್ ಕೇ’ ಧಾರಾವಾಹಿಯ ಶೌರ್ಯ ಪಾತ್ರ ಸಮೀರ್ ಗೆ ಹೆಚ್ಚು ಜನಪ್ರಿಯತೆ ತಂದು ಕೊಟ್ಟಿತ್ತು.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm