ಬ್ರೇಕಿಂಗ್ ನ್ಯೂಸ್
18-10-23 11:52 am HK News Desk ಕ್ರೈಂ
ಬೆಳಗಾವಿ, ಅ.18: ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆ ಅಕ್ರಮವಾಗಿ ಮದ್ಯ ಸಾಗಣೆ ಸದ್ದಿಲ್ಲದೇ ನಡೆಯುತ್ತಿದೆ. ಈ ಬೆನ್ನಲ್ಲೇ ಗೋವಾದಿಂದ ತೆಲಂಗಾಣಕ್ಕೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಮದ್ಯವನ್ನು ಜಪ್ತಿ ಮಾಡುವಲ್ಲಿ ಬೆಳಗಾವಿಯ ಅಬಕಾರಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಕಳೆದ ತಿಂಗಳು ಲಾರಿಯಲ್ಲಿ ಪ್ಲೈವುಡ್ ನಡುವೆ ಮದ್ಯದ ಬಾಕ್ಸ್ಗಳನ್ನು ಇಟ್ಟುಕೊಂಡು ಸಾಗಿಸುತ್ತಿದ್ದಾಗ ಸಿನಿಮೀಯ ಶೈಲಿಯಲ್ಲಿ ದಾಳಿ ಮಾಡಿ, ಅಕ್ರಮ ಜಾಲ ಭೇದಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು, ಈ ಬಾರಿಯೂ ಅದೇ ಮಾದರಿಯಲ್ಲಿ ದಾಳಿ ನಡೆಸಿ ನಕಲಿ ಟ್ರಾನ್ಸ್ಫಾರ್ಮರ್ ಸಾಗಿಸುತ್ತಿದ್ದ ಲಾರಿಯಲ್ಲಿ ಬಚ್ಚಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಹಿರೇಬಾಗೇವಾಡಿ ಟೋಲ್ ನಾಕಾ ಬಳಿ ದಾಳಿ ಮಾಡಿದ ಅಧಿಕಾರಿಗಳು, ಲಾರಿ ತಡೆದು ಚಾಲಕನ ವಿಚಾರಣೆ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ. ಎರಡು ಎಲೆಕ್ಟ್ರಿಕ್ ಟ್ರಾನ್ಸ್ಫಾರ್ಮರ್ಗಳ ನಡುವೆ ಬಚ್ಚಿಟ್ಟಿದ್ದ 10 ಲಕ್ಷ ರೂ. ಮೌಲ್ಯದ 250 ರಟ್ಟಿನ ಪೆಟ್ಟಿಗೆಗಳಲ್ಲಿದ್ದ 5 ವಿವಿಧ ಕಂಪನಿಯ ಮದ್ಯವನ್ನು ಜಪ್ತಿ ಮಾಡಿರುವ ಅಬಕಾರಿ ಅಧಿಕಾರಿಗಳು, ಆರೋಪಿ ಲಾರಿ ಚಾಲಕ ಮಹಾರಾಷ್ಟ್ರದ ಮುಂಬೈ ನಿವಾಸಿ ಶ್ರೀರಾಮ್ ಸುಧಾಕರ್ ಪರಡೇ(31) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಅದೇ ರೀತಿ 20 ಲಕ್ಷ ರೂ. ಮೌಲ್ಯದ ಲಾರಿಯನ್ನೂ ಜಪ್ತಿ ಮಾಡಲಾಗಿದೆ.
ಲಾರಿಗೆ ಜಿಪಿಎಸ್ ಅಳವಡಿಕೆ :
ವಾಹನವನ್ನು ಅತ್ಯಾಧುನಿಕ ತಂತ್ರಜ್ಞಾನ ಜಿಪಿಎಸ್ ಉಪಕರಣ ಬಳಸಿ ನಿಯಂತ್ರಿಸಲಾಗುತ್ತಿತ್ತು. ಅಬಕಾರಿ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ವಾಹನ ಮುಂದೆ ಹೋಗದಂತೆ ಖದೀಮರು ಜಿಪಿಎಸ್ ಆಫ್ ಮಾಡಿದರು. ಎಲ್ಲೋ ಒಂದು ಕಡೆ ಇದ್ದ ತಂಡ, ಲಾರಿಯನ್ನು ಅಲ್ಲಿಂದಲೇ ನಿಯಂತ್ರಿಸುತ್ತಿತ್ತು. ಬಳಿಕ, ಜಿಪಿಎಸ್ ಡಿಸ್ಕನೆಕ್ಟ್ ಮಾಡಿ ವಾಹನ ಜಪ್ತಿ ಮಾಡಲಾಗಿದೆ.
ಚುನಾವಣೆ ಎಫೆಕ್ಟ್ :
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಪೈಕಿ ತೆಲಂಗಾಣ ರಾಜ್ಯದಲ್ಲೂ ಚುನಾವಣೆ ಇರುವುದರಿಂದ ಗೋವಾದಿಂದ ಮದ್ಯ ಸಾಗಿಸಲಾಗುತ್ತಿತ್ತು. ಟ್ರಾನ್ಸ್ಫರ್ಮರ್ಗಳ ಮಧ್ಯೆ ಮದ್ಯದ ಬಾಕ್ಸ್ಗಳನ್ನು ಇಟ್ಟರೆ ಯಾರಿಗೂ ಅನುಮಾನ ಬರುವುದಿಲ್ಲವೆಂದು ಆರೋಪಿಗಳು ಅಂದುಕೊಂಡಿದ್ದರು. ಆದರೆ, ಅಬಕಾರಿ ಅಧಿಕಾರಿಗಳ ಚಾಕಚಕ್ಯತೆಯಿಂದ ಅವರ ಪ್ಲಾನ್ ಉಲ್ಟಾ ಆಗಿದೆ. ಅಲ್ಲದೇ, ಯಾವ ಪಕ್ಷ?, ಯಾವ ಅಭ್ಯರ್ಥಿಗೆ ಈ ಮದ್ಯ ಸೇರಿದೆ ಎಂಬುದು ತನಿಖೆಯಿಂದ ತಿಳಿದು ಬರಲಿದೆ.
Illegal transportation of liquor is going on quietly in the run-up to the elections in five states. Following this, the excise officials in Belagavi have succeeded in seizing a huge quantity of liquor that was being illegally transported in a lorry from Goa to Telangana using state-of-the-art technology.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm