ಬ್ರೇಕಿಂಗ್ ನ್ಯೂಸ್
02-11-23 09:43 pm HK News Desk ಕ್ರೈಂ
ಚಿತ್ರದುರ್ಗ, ನ 02: ಅಮೆರಿಕದ ಮಲ್ಟಿನ್ಯಾಷನಲ್ ಕಂಪನಿಯೊಂದರಲ್ಲಿ ಉನ್ನತ ಹುದ್ದೆ ಕೊಡಿಸುವುದಾಗಿ ಯುವತಿಯನ್ನು ನಂಬಿಸಿ, ಕೋಟಿಗಟ್ಟಲೆ ಹಣ ಪಡೆದು ವಂಚಿಸಿದ್ದಲ್ಲದೇ, ಸತತ 4 ವರ್ಷಗಳಿಂದ ಪ್ರೀತಿಸುವ ನಾಟಕವಾಡಿ, ಅತ್ಯಾಚಾರವೆಸಗಿದ್ದಾನೆಂದು ಆರೋಪಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.
ಉದ್ಯೋಗದ ಆಸೆಗೆ ಯುವಕನಿಂದ ಮೋಸ ಹೋಗಿ ನ್ಯಾಯಕ್ಕಾಗಿ ಚಿತ್ರದುರ್ಗದ ಯುವತಿ ಅಲೆದಾಡುತ್ತಿದ್ದಾರೆ. 2019 ರಲ್ಲಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಚಿತ್ರದುರ್ಗ ಮೂಲದ ಸೌರಭ್ ಎಂಬ ಯುವಕನ ಪರಿಚಯವಾಗಿದ್ದು, ಇಬ್ಬರ ಮಧ್ಯೆ ಪರಸ್ಪರ ಸ್ನೇಹ, ಆತ್ಮೀಯತೆ ಬೆಳೆದಿತ್ತು. ಆಗ ಅಮೆರಿಕ ಸೇರಿದಂತೆ ಮತ್ತಿತರ ವಿದೇಶದ ಮಲ್ಟಿನ್ಯಾಷನಲ್ ಕಂಪನಿಗಳಲ್ಲಿ ನಿನಗೆ ಕೆಲಸ ಕೊಡಿಸ್ತೀನಿ ಅಂತ ಯುವತಿಯನ್ನು ನಂಬಿಸಿದ್ದ ಸೌರಭ್ ಫೇಕ್ ಆಫರ್ ಲೆಟರ್ ಕೊಟ್ಟು, ಈಕೆಯಿಂದ ಉದ್ಯೋಗದ ನೆಪದಲ್ಲಿ ಕೋಟಿಗಟ್ಟಲೆ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರತಿದಿನ ಮೊಬೈಲ್ ಸಂಭಾಷಣೆಯಲ್ಲಿ ತೊಡಗಿದ್ದ ಅಸಾಮಿ ಸಾಕಷ್ಟು ಬಾರಿ ಆಕೆಯನ್ನು ಹೊರ ದೇಶಕ್ಕೆ ಹೋಗಬೇಕು, ರೆಡಿಯಾಗಿರು ಎಂದು ಹೇಳಿ, ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಉದ್ಯೋಗವಂತು ಕೊಡಿಸಲಿಲ್ಲ, ಮದುವೆಯಾಗಿ ಬದುಕಾದರೂ ಕೊಟ್ಟು ಕರುಣೆ ತೋರು ಎಂದು ಕೇಳಿದರೂ ಸೊಪ್ಪು ಹಾಕಿಲ್ಲ. ನಮ್ಮಿಂದ ಪಡೆದ ಎರಡೂವರೆ ಕೋಟಿ ರೂ. ಹಣವಾದರೂ ವಾಪಸ್ ಕೊಟ್ಟುಬಿಡು ಎಂದು ಯುವತಿ ಹಾಗೂ ಆಕೆಯ ಕುಟುಂಬ ಅಂಗಲಾಚಿದರೂ ಸಹ ಕಿಂಚಿತ್ ಅನುಕಂಪವಿಲ್ಲದೇ ಕೊಲೆ ಬೆದರಿಕೆ ಹಾಕಿದ್ದಾನೆಂದು ಆರೋಪಿಸಲಾಗಿದೆ.
ಈ ಸಂಬಂಧ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಲ್ಲದೇ 2 ತಿಂಗಳ ಹಿಂದೆ ನೊಂದ ಯುವತಿಯ ತಂದೆ ಕೂಡ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿತ್ರದುರ್ಗ ಎಸ್‌ಪಿ ಧರ್ಮೇಂದರ್ ಕುಮಾರ್, ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರದರ್ಶಕವಾದ ತನಿಖೆ ನಡೆಸಿ, ನೊಂದವರಿಗೆ ನ್ಯಾಯ ಕೊಡಿಸುವ ಭರವಸೆಯನ್ನು ನೀಡಿದ್ದಾರೆ.
Job fraud, Chitradurga man cheats girl of 2 crores of getting job in America, rapes her several times. The accused Sowrab has now been arrested.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm