ಬ್ರೇಕಿಂಗ್ ನ್ಯೂಸ್
04-11-23 12:39 pm Mangalore Correspondent ಕ್ರೈಂ
ಬೆಳ್ತಂಗಡಿ, ನ.4: ಗಂಡ ಹೆಂಡತಿ ಜಗಳದಲ್ಲಿ ಪತಿಯೇ ಪತ್ನಿಯನ್ನು ಕುತ್ತಿಗೆ ಹಿಸುಕಿ ಕೊಲೆಗೈದು ಬಾವಿಗೆ ತಳ್ಳಿ ಆತ್ಮಹತ್ಯೆ ನಾಟಕವಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆಂಪನೊಟ್ಟು ನಿವಾಸಿ ಶಶಿಕಲಾ(27) ಮೃತ ಮಹಿಳೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಸುಧಾಕರ ನಾಯ್ಕನನ್ನು ಬಂಧಿಸಿದ್ದಾರೆ.
ಇವರು ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು ಆರು ವರ್ಷದ ಮಗಳಿದ್ದಾಳೆ. ಈ ನಡುವೆ, ಸುಧಾಕರನಿಗೆ ಬೇರೊಬ್ಬಳು ಮಹಿಳೆಯ ಜೊತೆ ಅನೈತಿಕ ಸಂಪರ್ಕ ಇದೆಯೆಂದು ಗಂಡ - ಹೆಂಡತಿ ನಡುವೆ ಜಗಳ ಉಂಟಾಗಿತ್ತು. ಇದೇ ವಿಚಾರದಲ್ಲಿ ಪತ್ನಿ ಶಶಿಕಲಾ ಮನೆಯವರು ಬಂದು ಸಮಾಧಾನ, ರಾಜಿ ಪಂಚಾತಿಕೆ ಮಾಡಿ ಹೋಗುತ್ತಿದ್ದರು. ನ.3ರಂದು ಬೆಳಗ್ಗೆ ಸುಧಾಕರ ನಾಯ್ಕ ರಬ್ಬರ್ ಟ್ಯಾಪಿಂಗ್ ಮಾಡಿ ಬೇಗನೇ ಮನೆಗೆ ಬಂದಿದ್ದ. ಏಳು ಗಂಟೆಗೆ ಮನೆಗೆ ಬಂದಾಗ, ಪತ್ನಿ ಶಶಿಕಲಾ ಗಂಡನನ್ನು ಪ್ರಶ್ನೆ ಮಾಡಿದ್ದಳು. ಇವತ್ತು ಯಾಕೆ ಬೇಗ ಬಂದಿದ್ದೀರಾ.. ನಾನು ಕೆಲಸಕ್ಕೆ ಹೋದ ನಂತರ ಯಾರಾದ್ರೂ ಹೆಂಗಸರು ಮನೆಗೆ ಬರುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಳು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಸುಧಾಕರ ಮತ್ತು ಶಶಿಕಲಾ ನಡುವೆ ಜಗಳವಾಗಿದ್ದು ಪತಿಯೇ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದಾನೆ. ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ನೀನು ಬದುಕಿರಬಾರದೆಂದು ಮನೆಯಂಗಳದ ಬಾವಿಗೆ ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಶಶಿಕಲಾ ಅವರ ಸೋದರ ಶಶಿಧರ್ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಆರೋಪಿ ಸುಧಾಕರ, ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿ ನಾಟಕ ಮಾಡಿದ್ದು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Belthangady, Husband murders wife dumps her into well for questioning his illicit affair.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm