ಬ್ರೇಕಿಂಗ್ ನ್ಯೂಸ್
04-11-23 09:30 pm Udupi Correspondent ಕ್ರೈಂ
ಉಡುಪಿ, ನ.4: ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ಬೆಂಗಳೂರು ಮೂಲದ ಭಕ್ತರ ಕುಟುಂಬಕ್ಕೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡುವುದಾಗಿ ಹೇಳಿ 30.73 ಲಕ್ಷ ರೂ. ಹಣ ಪಡೆದು ವಂಚಿಸಿದ ಘಟನೆ ನಡೆದಿದೆ.
ಕೊಲ್ಲೂರು ನಿವಾಸಿ ಸುಧೀರ್ ಕುಮಾರ್ ಎಂಬಾತ ವಂಚನೆ ಎಸಗಿದ ವ್ಯಕ್ತಿ. ಬೆಂಗಳೂರಿನ ದಿಲ್ನಾ ತನ್ನ ಗಂಡ ಮತ್ತು ಕುಟುಂಬ ಸದಸ್ಯರ ಜತೆ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ವೇಳೆ ತನ್ನ ಅಣ್ಣ ದಿಲೀಶ್ ಅವರಿಗೆ ಪರಿಚಯವಿದ್ದ ಸುಧೀರ್ ಕುಮಾರ್ ಎಂಬಾತ ಪರಿಚಯ ಆಗಿದ್ದ. ತಾನು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ನಂಬಿಸಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸುವುದಾಗಿ ಹೇಳಿ ಹಣ ಹಾಕುವಂತೆ ಕೇಳಿಕೊಂಡಿದ್ದ.
ಅಲ್ಲದೆ, ದಿಲ್ನಾ ಅವರ ತಾಯಿಗೆ ಸಂಬಂಧಿಸಿದ ಜಾಗದ ಖಾತೆ ಬದಲಾವಣೆ ಮಾಡಿಸುವುದಾಗಿ ಹೇಳಿ ದಿಲ್ನಾ ಮತ್ತು ಅವರ ಅಣ್ಣ ದಿಲೀಶ್ ಅವರಿಂದ ಒಟ್ಟು 30,73,600 ರೂ.ಗಳನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಖಾತೆ ಬದಲಾವಣೆಗಾಗಿ ತಾಯಿಯ ಸಹಿ ಹಾಕಿಕೊಡುವಂತೆ ಕೇಳಿದ್ದರಿಂದ ಸಂಶಯಗೊಂಡು ದೇವಸ್ಥಾನಕ್ಕೆ ಬಂದು ವಿಚಾರಿಸಿದಾಗ ಸುಧೀರ್ ಎನ್ನುವ ವ್ಯಕ್ತಿ ಆಡಳಿತ ಮಂಡಳಿಯ ಸದಸ್ಯನಲ್ಲವೆಂಬುದು ತಿಳಿದುಬಂದಿತ್ತು. ಇದರಿಂದ ದಿಲ್ನಾ ಅವರು ಸುಧೀರ್ ಕುಮಾರ್ ವಿರುದ್ಧ ಹಣ ವಂಚನೆ ಮಾಡಿರುವ ಕುರಿತು ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A man claiming to be a member of the Kollur temple management has duped a family of devotees from Bengaluru of Rs 30.73 lakh by promising to perform special pujas at the temple. There has been an incident of money being duped.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm