ಬ್ರೇಕಿಂಗ್ ನ್ಯೂಸ್
23-11-23 05:48 pm Udupi Correspondent ಕ್ರೈಂ
ಉಡುಪಿ, ನ.23: ಉಡುಪಿ ಜಿಲ್ಲೆಯನ್ನೇ ಬೆಚ್ಚಿಬಿಳಿಸಿದ್ದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್ಪಿ ಅರುಣ್ ಕುಮಾರ್ ಮತ್ತಷ್ಟು ಸ್ಪಷ್ಟನೆ ನೀಡಿದ್ದಾರೆ. ಕೊಲೆಯಾದ ಗಗನಸಖಿ ಐನಾಝ್ ಮತ್ತು ಹಂತಕ ಪ್ರವೀಣ್ ಮಧ್ಯೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಒಂದು ತಿಂಗಳಿಂದ ಐನಾಝ್ ಸರಿಯಾಗಿ ಮಾತನಾಡದೆ ದೂರ ಮಾಡಿದ್ದ ಕಾರಣ ಕೋಪಗೊಂಡು ಕೊಲೆ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಎಸ್‌ಪಿ ಡಾ.ಅರುಣ್ ಅವರು, ತೃಪ್ತಿ ನಗರದಲ್ಲಿ ನಡೆದ ಕೊಲೆ ಪ್ರಕರಣ ಭೇದಿಸಲು ಒಟ್ಟು 11 ತಂಡಗಳನ್ನು ರಚನೆ ಮಾಡಿದ್ದೆವು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಇದಕ್ಕಾಗಿ ಕೆಲಸ ಮಾಡಿದ್ದಾರೆ. ಎಲ್ಲಾ ಕಡೆಯಿಂದ ಮಾಹಿತಿ ಬಂದ ಕಾರಣ ಎಲ್ಲವನ್ನು ತನಿಖೆ ಮಾಡಿದ್ದೇವೆ. ನಾಲ್ವರ ಕೊಲೆ ಪ್ರಕರಣ ನಮಗೆ ದೊಡ್ಡ ಸವಾಲಾಗಿತ್ತು. ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾದ ಪ್ರಕರಣವೂ ಇದಾಗಿತ್ತು. ನಾವು ತಂಡವಾಗಿ ಕೆಲಸ ಮಾಡಿ ಆರೋಪಿಯನ್ನು ಬಂಧಿಸಿದ್ದೇವೆ ಎಂದರು.
ಆರೋಪಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ಇನ್ನೂ 70-80 ದಿನ ಇದೆ. ಎಲ್ಲಾ ಸಾಕ್ಷಿಗಳ ಸಂಗ್ರಹ ಮಾಡುತ್ತಿದ್ದೇವೆ. ಸುಮಾರು 50 ಪೊಲೀಸರು ಇದರ ಹಿಂದೆ ಕೆಲಸ ಮಾಡುತ್ತಿದ್ದಾರೆ. ಯಾಕಾಗಿ ಕೊಲೆ ಮಾಡಿದ್ದಾನೆ ಎಂಬುದರಿಂದ ಹಿಡಿದು ಆತನ ಸಹವರ್ತಿಗಳು ಎಲ್ಲರನ್ನೂ ವಿಚಾರಣೆ ಮಾಡಿದ್ದೇವೆ. ಆರೋಪಿ ಪ್ರವೀಣ್ ಮತ್ತು ಐನಾಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರ ಮಧ್ಯೆ ಉತ್ತಮ ಗೆಳೆತನವಿತ್ತು. ಈ ನಡುವೆ, ಪ್ರವೀಣ್, ಐನಾಝ್ ಗೆ ಹಲವಾರು ರೀತಿಯ ಸಹಾಯ ಮಾಡಿದ್ದಾರೆ. ಆದರೆ ಒಂದು ತಿಂಗಳಿನಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಮೊಬೈಲ್ ಬ್ಲಾಕ್ ಮಾಡಿದ್ದಳು.
ಹೀಗಾಗಿ ಪ್ರವೀಣ್ ಅತಿಯಾದ ಪೊಸೆಸಿವ್ ನೆಸ್ ನಿಂದ ಆಕೆಯನ್ನು ಕೊಲೆ ಮಾಡಬೇಕೆಂದು ಮನೆಗೆ ಬಂದಿದ್ದಾನೆ. ಮೊದಲು ಪ್ರವೀಣ್, ಐನಾಝ್ ಗೆ ದಾಳಿ ಮಾಡಿದ್ದ. ಈ ವೇಳೆ ಅಡ್ಡ ಬಂದ ತಾಯಿ ಹಸೀನಾ, ಅಫ್ನಾನ್, ಆಸಿಂ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಒಂದೇ ಚಾಕುವಿನಲ್ಲಿ ನಾಲ್ವರ ಕೊಲೆಗೈದಿದ್ದಾನೆ. ಬಳಿಕ ಬೇರೆ ಬೇರೆ ವಾಹನ ಹತ್ತಿಕೊಂಡು ಮಂಗಳೂರಿಗೆ ಪರಾರಿಯಾಗಿದ್ದಾನೆ. ಗಂಭೀರ ಪ್ರಕರಣ ಆಗಿರುವುದರಿಂದ ಎಲ್ಲಾ ಮಾಹಿತಿಗಳನ್ನು ಮಾಧ್ಯಮಕ್ಕೆ ಕೊಡಲು ಸಾಧ್ಯವಿಲ್ಲ ಎಂದು ಎಸ್.ಪಿ ಹೇಳಿದರು. ಹಸೀನಾ ಅವರಿಗೆ ಹಣಕಾಸು ವಿಚಾರದಲ್ಲಿ ಮೋಸವಾದ ಬಗ್ಗೆ ಮಾಹಿತಿ ಸಿಕ್ಕಿದೆ. ಕುಟುಂಬದಿಂದ ದೂರು ಪಡೆದುಕೊಂಡು ತನಿಖೆ ಮಾಡುತ್ತೇವೆ ಎಂದರು.
Udupi Murder case, Accused praveen killed Ainaz for avoiding him for a month. It is gathered that the police subjected the accused to the inquest process without interruptions. The knife, mask, bag and other items used by him for the murder were found in his flat in Bejai. Police have confiscated a scooter registered on Chowgule’s name parked near a rented room at Bejai of the deceased woman Ainaz.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm