ಬ್ರೇಕಿಂಗ್ ನ್ಯೂಸ್
26-11-23 04:37 pm Bengaluru Correspondent ಕ್ರೈಂ
ಬೆಂಗಳೂರು, ನ.26: ವಂಚನೆ ಪ್ರಕರಣವೊಂದಕ್ಕೆ ಬಂಧಿಸಿ ‘ಬಿಟಿವಿ’ ಸುದ್ದಿವಾಹಿನಿಯ ವ್ಯವಸ್ಥಾಪಕ ನಿರ್ದೇಶಕ, ಎಂ.ಡಿ. ಜಿ.ಎಂ. ಕುಮಾರ್ ಅವರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಕುಮಾರ್ ರನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕುಮಾರ್ ವಿರುದ್ಧ ಅಶ್ವಿನ್ ಮಹೇಂದ್ರ ಎಂಬವರು 2022ರಲ್ಲಿ ವಿಜಯನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದರು.
ದೂರುದಾರ ಅಶ್ವಿನ್ ಮಹೇಂದ್ರ ಹಾಗೂ ಕುಮಾರ್ ಇಬ್ಬರೂ ಪಾಲುದಾರಿಕೆಯಲ್ಲಿ 'ಈಗಲ್ ಸೈಟ್ ಮೀಡಿಯಾ ಕಂಪೆನಿ' ಎಂಬ ಸಂಸ್ಥೆಯನ್ನು ಆರಂಭಿಸಿದ್ದು, ಇಬ್ಬರೂ ಅದರ ನಿರ್ದೇಶಕರಾಗಿದ್ದರು. ಆದರೆ ಅಶ್ವಿನ್ ಅವರ ದಾಖಲಾತಿಗಳನ್ನು ಆರೋಪಿ ಕುಮಾರ್ ದುರ್ಬಳಕೆ ಮಾಡಿಕೊಂಡು ಬ್ಯಾಂಕ್ಗಳಲ್ಲಿ ಖಾತೆ ತೆರೆದು ಕೋಟಿ ರೂ. ಗೂ ಅಧಿಕ ಹೆಚ್ಚು ವಹಿವಾಟು ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ ಕುಮಾರ್, ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ನ್ಯಾಯಾಲಯ, ಇತ್ತೀಚೆಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು.
ವಿಜಯನಗರ ಪೊಲೀಸ್ ಠಾಣೆಯಲ್ಲಿ 2022ರ ಆಗಸ್ಟ್‌ನಲ್ಲಿ ಜಿಎಂ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಬೆದರಿಕೆ ಸೇರಿದಂತೆ ಬೆದರಿಕೆ ತಂತ್ರಗಳನ್ನು ಅನುಸರಿಸಿ ತನಿಖೆಯನ್ನು ಹಳಿತಪ್ಪಿಸಲು ಮತ್ತು ಪ್ರಕರಣವನ್ನು ಕೈಬಿಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹೇರಿದೆ ಎಂದು ಆರೋಪಿಸಲಾಗಿತ್ತು.
ಈ ನಡುವೆ ನಕಲಿ ಬೋರ್ಡ್ ರೆಸ್ಯೂಲ್ಯೂಶನ್ ಸೃಷ್ಟಿಸಿ ಕೋಟ್ಯಂತರ ರೂಗಳ ವಂಚನೆ ಸಂಬಂಧಿಸಿದಂತೆ ಬಿಟಿವಿಯ ಜಿಎಂ ಕುಮಾರ್ ಸೇರಿ ೧೦ ಮಂದಿಯ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.
BTV news owner GM Kumar has been arrested by Bangalore Police in the Crores fraud case in relation to embezzling money through the falsification of board resolution documents belonging to Eagle site Media Company. GM Kumar was evading capture after complainant Mahindra filed a complaint against him. Kumar was the subject of an arrest warrant issued by the court. The judge has imposed a 14-day judicial detention order.
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm