ಬ್ರೇಕಿಂಗ್ ನ್ಯೂಸ್
30-11-23 01:12 pm Hassan Correspondent ಕ್ರೈಂ
ಹಾಸನ, ನ 30: ಮದುವೆಗೆ ಒಪ್ಪದ ಶಿಕ್ಷಕಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಲಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಘಟನೆ ನಡೆದಿದ್ದು, ಅಪಹರಣದ ದೃಶ್ಯಗಳು ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅರ್ಪಿತಾ ಅಪರಹರಣಕ್ಕೊಳಗಾದ ಶಿಕ್ಷಕಿ.
ಇಂದು ಬೆಳಗ್ಗೆ ಸುಮಾರು 8 ಗಂಟೆ ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರ್ನಲ್ಲಿ ಬಂದು ಬಲವಂತವಾಗಿ ಎಳೆದೊಯ್ದಿದ್ದಾರೆ. ಅರ್ಪಿತಾ ಅವರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಅರ್ಪಿತಾ ಸಂಬಂಧಿ ರಾಮು ಎಂಬಾತನೇ ಅಪಹರಣ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮದುವೆಗೆ ಅರ್ಪಿತಾ ಮತ್ತು ಕುಟುಂಬಸ್ಥರು ಒಪ್ಪದ ಹಿನ್ನೆಲೆ ಅಪಹರಣ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜಾತಾ ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅರ್ಪಿತಾ ರಕ್ಷಣೆಗೆ ಪೊಲೀಸರು ಮುಂದಾಗಿದ್ದಾರೆ
ರಾಮು ಎಂಬವನೇ ಮಗಳನ್ನು ಕಿಡ್ನ್ಯಾಪ್ ಮಾಡಿದ್ದಾನೆ. ಆತ ನಮ್ಮ ಚಿಕ್ಕಮನ ಮಗನಾಗಿದ್ದು, 15 ದಿನಗಳ ಹಿಂದೆ ಅಪ್ಪ-ಅಮ್ಮನ ಜೊತೆ ಬಂದಿದ್ದನು. ಮದುವೆ ಮಾಡಿಕೊಡಿ ಎಂದು ಹೇಳಿದ್ದರು. ಆದ್ರೆ ಮಗಳು ಒಪ್ಪದ ಹಿನ್ನೆಲೆ ನಾವು ಮದುವೆಗೆ ನಿರಾಕರಿಸಿದ್ದೇವೆ ಎಂದು ಅರ್ಪಿತಾ ತಾಯಿ ಹೇಳಿದ್ದಾರೆ.
ಮದುವೆಗೆ ಒಪ್ಪದ ಹಿನ್ನೆಲೆ ಅಂದಿನಿಂದ ಕಿರುಕುಳ ನೀಡಲು ಆರಂಭಿಸಿದ್ದರು. ಇದೀಗ ಮಗಳನ್ನ ಅಪಹರಿಸಿದ್ದಾರೆ. ಆದಷ್ಟು ಬೇಗ ಮಗಳನ್ನು ರಕ್ಷಿಸಿಕೊಡಿ ಎಂದು ಅರ್ಪಿತಾ ಕಣ್ಣೀರು ಹಾಕಿದರು.
A Hassan teacher was abducted in broad daylight after declining a marriage proposal. The kidnapping was captured on video by CCTV.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm