ಬ್ರೇಕಿಂಗ್ ನ್ಯೂಸ್
30-11-23 07:35 pm Bangalore Correspondent ಕ್ರೈಂ
ಬೆಂಗಳೂರು, ನ 30: ನವಜಾತ ಶಿಶು ಮಾರಾಟ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರಿಂದ ಬಂಧಿತರಾದ 10 ಮಂದಿ ಆರೋಪಿಗಳ ವಿಚಾರಣೆ ವೇಳೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಕಳೆದ ಶುಕ್ರವಾರ ಆರ್.ಆರ್. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಮಸ್ವಾಮಿ ಕಣ್ಣನ್, ಹೇಮಲತಾ, ಶರಣ್ಯ ಹಾಗೂ ಮುರುಗೇಶ್ವರಿ ಎಂಬುವರು 20 ದಿನದ ಗಂಡು ಶಿಶುವನ್ನು ಮಾರಾಟಕ್ಕೆ ಮುಂದಾಗಿದ್ದಾಗ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು. ಬಳಿಕ ಮಹಾಲಕ್ಷ್ಮೀ, ರಾಧಾ, ಕೇವಿನ್ ಸೇರಿ ಐವರನ್ನು ವಿಚಾರಣೆ ಮಾಡಿದ್ದರು.
ಬಂಧಿತರ ವಿಚಾರಣೆಯಿಂದ ದಿನೆ ದಿನೆ ಹೊಸ ವಿಚಾರಗಳು ಬೆಳಕಿಗೆ ಬರ್ತಿವೆ. ಹಲವು ವರ್ಷಗಳಿಂದ ಪುಟ್ಟ ಕಂದಮ್ಮಗಳನ್ನು ಕರ್ನಾಟಕ ಸೇರಿ ಬೇರೆ ರಾಜ್ಯಗಳಲ್ಲಿ ಕಳ್ಳಸಾಗಾಣಿಕೆ ಮಾಡುತ್ತಿದ್ದರು. ಸದ್ಯ ಸಿಸಿಬಿ ಪೊಲೀಸರು ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಈ ವೇಳೆ 6 ವರ್ಷಗಳಲ್ಲಿ ಬರೋಬ್ಬರಿ 250ಕ್ಕೂ ಹೆಚ್ಚು ಮಕ್ಕಳ ಮಾರಾಟ ಮಾಡಿರೋದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೇವಲ 50-60 ಮಕ್ಕಳನ್ನು ಮಾರಾಟ ಮಾಡಿದ್ದು, ಉಳಿದ ಕಂದಮ್ಮಗಳನ್ನು ತಮಿಳುನಾಡಿನಲ್ಲಿ ಮಾರಾಟ ಮಾಡಿರುವುದಾಗಿ ಹೇಳಿದ್ದಾರೆ.
ಸದ್ಯ ಕರ್ನಾಟಕದಲ್ಲಿ ಮಾರಾಟ ಆಗಿರೋ ಮಕ್ಕಳ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ ಸಿಸಿಬಿಗೆ ಕೇವಲ ಹತ್ತು ಮಕ್ಕಳ ಬಗ್ಗೆ ಮಾಹಿತಿ ಸಿಕ್ಕಿದ್ದು, ಉಳಿದ ಮಕ್ಕಳನ್ನು ಯಾರಿಗೆ ಕೊಟ್ಟಿದ್ದಾರೆ ಅನ್ನೋದರ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.
ಕರ್ನಾಟಕದ ಮೇನ್ ಕಿಂಗ್ ಪಿನ್, ಕಮ್ ಗ್ಯಾಂಗ್ ಲೀಡರ್ ಮಹಾಲಕ್ಷ್ಮೀಯ ಕಥೆಯೇ ಒಂದು ರೋಚಕ. ಏನೂ ಇಲ್ಲದೆ ದುಡಿಮೆಗೆಂದು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡಿಕೊಂಡಿದ್ದ ಈಕೆ 2015 ರಿಂದ 2017ರ ವರೆಗೆ ಕೇವಲ 8 ಸಾವಿರ ರೂ. ಸಂಬಳಕ್ಕೆ ಕೆಲಸ ಮಾಡುತ್ತಿದ್ದಳು. ಈ ವೇಳೆ ಈಕೆಗೆ ಪರಿಚಯ ಆದ ಮಹಿಳೆಯೊಬ್ಬಳು ಅಂಡಾಣು ಕೊಟ್ಟರೆ ಹಣ ಕೊಡೋದಾಗಿ ಹೇಳಿದ್ದಳು. ಆಗ ಅಂಡಾಣು ನೀಡಿದ್ದ ಮಹಾಲಕ್ಷ್ಮೀಗೆ ಸುಮಾರು 20 ಸಾವಿರ ಮಹಿಳೆ ನೀಡಿದ್ದಳು. ಹಣದ ರುಚಿ ನೋಡಿದ ಮಹಾಲಕ್ಷ್ಮಿ ನಂತರ ದಿನಗಳಲ್ಲಿ ಅಂಡಾಣು ಕೊಡುವವರನ್ನು ಪತ್ತೆ ಮಾಡಿ ಅದರಿಂದ ಕಮೀಷನ್ ಪಡೆಯುವ ಕೆಲಸ ಮಾಡುತ್ತಿದ್ದಳು. ಇನ್ನು 2017 ರಿಂದಲೂ ಈ ದಂಧೆಯನ್ನ ಶುರುಮಾಡಿದ್ದ ಮಹಾಲಕ್ಷ್ಮೀ ಹಿಂದೆ ತಿರುಗಿ ನೋಡಿರಲಿಲ್ಲ. ಇದೀಗ ಪ್ರಕಣದ ಬಗ್ಗೆ ಸಿಸಿಬಿ ಫುಲ್ ಗ್ರಿಲ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಸೇರಿದಂತೆ ಆರೋಪಿಗಳ ವಿಚಾರಣೆ ಮುಂದುವರೆದಿದೆ.
In a recent crackdown, the Central Crime Branch (CCB) officials apprehended three more individuals in connection with a case involving the sale of newborn babies. This revelation has raised suspicions about reputed hospitals and doctors in Tamil Nadu and Karnataka being part of this illicit network.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm