ಬ್ರೇಕಿಂಗ್ ನ್ಯೂಸ್
02-12-23 08:19 pm Bangalore Correspondent ಕ್ರೈಂ
ಬೆಂಗಳೂರು, ಡಿ.02: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದೇಶದ ವಿವಿಧ ಭಾಗಗಳಲ್ಲಿ ನಕಲಿ ಭಾರತೀಯ ಕರೆನ್ಸಿ ನೋಟು ದಂಧೆ ಭೇದಿಸಲು ಬೆಂಗಳೂರು, ಬಳ್ಳಾರಿ ಸೇರಿ ನಾಲ್ಕು ರಾಜ್ಯಗಳಾದ್ಯಂತ ಏಕಕಾಲದಲ್ಲಿ ದಾಳಿ ನಡೆಸಿದ್ದು, ನಕಲಿ ನೋಟುಗಳ ಮುದ್ರಣ ಕಾಗದ, ಪ್ರಿಂಟರ್‌ಗಳು ಮತ್ತು ಡಿಜಿಟಲ್ ಗ್ಯಾಜೆಟ್‌ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಈ ವೇಳೆ ಪ್ರಮುಖ ಆರೋಪಿ ರಾಹುಲ್ ತಾನಾಜಿ ಎಂಬಾತನನ್ನು ಬಂಧಿಸಲಾಗಿದೆ. ಇನ್ನು ಬಳ್ಳಾರಿ ಜಿಲ್ಲೆಯಲ್ಲೂ ದಾಳಿ ನಡೆಸಿ ಓರ್ವನನ್ನು ಅರೆಸ್ಟ್ ಮಾಡಲಾಗಿದೆ. ಬಳ್ಳಾರಿ ಮೂಲದ ಮಹೇಂದರ್ ಬಂಧಿತ ಆರೋಪಿ. ಇತ ಮನೆಯಲ್ಲೇ 500, 200, 100 ರೂಪಾಯಿಯ ಮುಖಬೆಲೆಯ ನಕಲಿ ನೋಟು ತಯಾರಿಸುತ್ತಿದ್ದ. ಇದೀಗ ಪೊಲೀಸರು ನೋಟು ತಯಾರಿಸುವ ಪೇಪರ್, ಪ್ರಿಂಟಿಂಗ್ ಮಶಿನ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಉತ್ತರಪ್ರದೇಶ, ಬಿಹಾರ, ಮಹಾರಾಷ್ಟ್ರ, ಕರ್ನಾಟಕದಲ್ಲಿ ದಾಳಿ ನಡೆಸಲಾಗಿದೆ. ಈ ಪ್ರಕರಣವು ಶಂಕಿತರಿಂದ ರೂಪಿಸಲಾದ ದೊಡ್ಡ ಪಿತೂರಿಗೆ ಸಂಬಂಧಿಸಿದ್ದು, ಕೆಲವರನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ನವೆಂಬರ್ 24 ರಂದು ದಾಖಲಿಸಲಾದ ಪ್ರಕರಣದಲ್ಲಿ ತನಿಖೆಯ ಭಾಗವಾಗಿ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಇನ್ನು ಕರ್ನಾಟಕದಲ್ಲಿ ನಕಲಿ ನೋಟುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಂತೆ ಇತ್ತೀಚೆಗೆ 100 ರೂಪಾಯಿ ಮುಖಬೆಲೆಯ ಒಟ್ಟು 30 ನಕಲಿ ನೋಟುಗಳು ಉಡುಪಿ , ಮಣಿಪಾಲ , ಹುಬ್ಬಳ್ಳಿ ಹಾಗು ಮಲ್ಲೇಶ್ವರ ಬ್ರಾಂಚ್ನ ಬ್ಯಾಂಕ್ ಗಳಲ್ಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 4 ಎಫ್ಐಆರ್ಗಳು ದಾಖಲಾಗಿದ್ದು, ಆರ್ಬಿಐಗೆ ರಿಮೀಟ್ ಮಾಡುವ ಸಂದರ್ಭದಲ್ಲಿ ಈ ನಕಲಿ ನೋಟುಗಳು ಬೆಳಕಿಗೆ ಬಂದಿತ್ತು. ಇದೀಗ ನೋಟು ಪ್ರಿಂಟ್ ಮಾಡುವ ಜಾಲ ಪತ್ತೆಯಾಗಿದೆ.
NIA raid in Bangalore and Bellari including four States, busts fake currency racket. The operation was part of the NIA’s probe into a case pertaining to a conspiracy hatched by suspected individuals for trafficking of fake Indian currency notes across borders.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm