ಬ್ರೇಕಿಂಗ್ ನ್ಯೂಸ್
11-12-23 11:35 am Bangalore Correspondent ಕ್ರೈಂ
ಬೆಂಗಳೂರು, ಡಿ 11: ಮುಂಬೈ ಸೈಬರ್ ಕ್ರೈಂ ಪೊಲೀಸರ ಸೋಗಿನಲ್ಲಿ ಉದ್ಯಮಿಗೆ ಕರೆ ಮಾಡಿದ ವಂಚಕರು “ನಿಮ್ಮ ಹೆಸರಿನಲ್ಲಿ ವಿದೇಶಕ್ಕೆ ಡ್ರಗ್ಸ್ ಕೊರಿಯರ್ ಮೂಲಕ ಕಳುಹಿಸುತ್ತಿರುವ ಬಗ್ಗೆ ದೂರು ಬಂದಿದೆ.
ಈ ಬಗ್ಗೆ ದೂರು ದಾಖಲಿಸದಿರಲು ಹಣ ನೀಡುವಂತೆ ಬೆದರಿಸಿ ಬರೋಬರಿ 1.98 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಎಚ್‌ಎಸ್ ಆರ್ ಲೇಔಟ್ ನಿವಾಸಿ ತಾರಕ್ ಶಾ(53) ಎಂಬವರು ಆಗ್ನೇಯ ವಿಭಾಗದ ಸೆನ್ ಠಾಣೆಯಲ್ಲಿ ರಾಹುಲ್ ಕುಮಾರ್ ಮತ್ತು ಬಲ್‌ಸಿಂಗ್ ರಜಪೂತ್ ಎಂಬವರ ವಿರುದ್ಧ ದೂರು ನೀಡಿದ್ದಾರೆ.
ಡಿ.2ರಂದು ತಾರಕ್ ಶಾಗೆ ಸ್ಕೈಪ್‌ನಲ್ಲಿ ಅಪರಿಚಿತ ನಂಬರ್‌ನಿಂದ ಕರೆ ಮಾಡಿದ ವಂಚಕರು, ಫೆಡೆಕ್ಸ್ ಕೊರಿಯರ್‌ನಿಂದ ಕರೆ ಮಾಡುತ್ತಿದ್ದು, ನಿಮ್ಮ ಆಧಾರ್ ಸಂಖ್ಯೆ ಬಳಸಿಕೊಂಡು ಅಕ್ರಮವಾಗಿ ಮುಂಬೈ ನಿಂದ ತೈವಾನ್ ದೇಶಕ್ಕೆ ಎಂಡಿಎಂಎ ಮಾದಕ ವಸ್ತುಗಳನ್ನು ಕೊರಿಯರ್ ಮೂಲಕ ಕಳುಹಿಸ ಲಾಗುತ್ತಿದೆ. ಈ ಸಂಬಂಧ ಮುಂಬೈ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೀಗಾಗಿ ನಿಮ್ಮನ್ನು ವಿಚಾರಣೆ ಮಾಡಬೇಕು ಎಂದಿದ್ದಾನೆ. ಅದರಿಂದ ಆತಂಕಗೊಂಡ ತಾರಕ್, ತಮಗೂ ಕೋರಿಯರ್‌ಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಈ ವೇಳೆ ದುಷ್ಕರ್ಮಿಗಳು, ಈ ಸಂಬಂಧ ಪರಿಶೀಲಿಸುವ ಅಗತ್ಯವಿದ್ದು, ನಾವು ನೀಡುವ ಖಾತೆಗೆ ಹಣ ಹಾಕುವಂತೆ ಸೂಚಿಸಿದ್ದಾರೆ. ಪರಿಶೀಲನೆ ಬಳಿಕ ಆ ಹಣವನ್ನು ವಾಪಾಸ್ ನೀಡುವುದಾಗಿ ತಿಳಿಸಿದ್ದಾರೆ.
ಇವರ ಮಾತು ನಂಬಿದ ತಾರಕ್ ಅವರು, ದುಷ್ಕರ್ಮಿಗಳು ನೀಡಿದ ಬ್ಯಾಂಕ್ ಖಾತೆಗಳಿಗೆ ವಿವಿಧ ಹಂತಗಳಲ್ಲಿ 1.98 ಕೋಟಿ ರು. ಹಣ ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ಬಳಿಕ ದುಷ್ಕರ್ಮಿಗಳು, ತಾರಕ್ ಅವರ ಸಂಪರ್ಕಕ್ಕೆ ಸಿಕ್ಕಿಲ್ಲ. ಹತ್ತಾರು ಬಾರಿ ಕರೆ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ. ಬಳಿಕ ತಾನು ಸೈಬರ್ ವಂಚಕರ ಬಲೆ ಬಿದ್ದಿರುವುದು ತಾರಕ್ ಅವರಿಗೆ ಅರಿವಾಗಿದೆ. ಬಳಿಕ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಈ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Fake drug Courier fraud, Bangalore businessman loses Rs 2 crore to scammers posing as Mumbai police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm