ಬ್ರೇಕಿಂಗ್ ನ್ಯೂಸ್
11-12-23 06:58 pm Mangalore Correspondent ಕ್ರೈಂ
ಉಳ್ಳಾಲ, ಡಿ.11: ಕಳೆದ ವಾರವಷ್ಟೆ ಉಳ್ಳಾಲದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದ ಎಸಿಪಿ ನೇತೃತ್ವದ ಆಂಟಿ ಡ್ರಗ್ ತಂಡವು ಮತ್ತೆ ಜಾಲವನ್ನ ಬೆನ್ನಟ್ಟಿದ್ದು ಡ್ರಗ್ ಪೂರೈಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರನ್ನ ಬಂಧಿಸಿ ಮತ್ತೆ ಆರು ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ವಶಪಡಿಸಿದೆ.
ಕಳೆದ ಡಿ.4 ರಂದು ಉಳ್ಳಾಲದ ಸಂತೋಷನಗರ ಎಂಬಲ್ಲಿ ಕಾರಿನಲ್ಲಿ ನಿಷೇಧಿತ ಸುಮಾರು 132 ಗ್ರಾಂ ತೂಕದ Methamphetamine ಮತ್ತು 250 LSD ಸ್ಟ್ಯಾಂಪ್ ಡ್ರಗ್ಗನ್ನ ಅಕ್ರಮವಾಗಿ ಮಾರಾಟ ಮಾಡಲು ಬಂದಿದ್ದ ಶಿಶಿರ್ ದೇವಾಡಿಗ ಮತ್ತು ಸುಶಾನ್ ಎಲ್ ಎಂಬವರನ್ನ ಎಸಿಪಿ ಧನ್ಯ ನಾಯಕ್ ನೇತೃತ್ವದ ಆಂಟಿ ಡ್ರಗ್ಸ್ ತಂಡವು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತು ಮತ್ತು ಮಾರಕಾಯುಧಗಳನ್ನ ವಶಪಡಿಸಿಕೊಂಡಿತ್ತು. ಬಂಧಿತ ಆರೋಪಿಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಆಶಿತ್ ಯಾನೆ ಅಶ್ವಿತ್ ಅಲಿಯಾಸ್ ಆಶು ಎಂಬವರನ್ನು ಬಂಧಿಸಲಾಗಿದೆ. ಕೋಟೆಕಾರು ಗ್ರಾಮದ ಮಾಡೂರು ಸಾಯಿ ಮಂದಿರದ ಸಮೀಪದ ಗ್ರೌಂಡ್ ಬಳಿ ಅವಿತಿದ್ದ ಆಶಿತನ್ನು ಎಸಿಪಿ ನೇತೃತ್ವದ ತಂಡ ಬಂಧಿಸಿದ್ದು, ಆತನಲ್ಲಿದ್ದ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಂ ತೂಕದ ಎಂ.ಡಿ.ಎಂ.ಎ, 30,000 ರೂಪಾಯಿ ಮೌಲ್ಯದ 600 ಗ್ರಾಂ ತೂಕದ ಗಾಂಜಾ ಮತ್ತು ಮೋಟಾರ್ ಬೈಕೊಂದನ್ನ ವಶ ಪಡಿಸಿಕೊಳ್ಳಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ನಿರ್ದೇಶನದಂತೆ ನಡೆದ ಕಾರ್ಯಾಚರಣೆಯಲ್ಲಿ ಎಸಿಪಿ ಧನ್ಯ ನಾಯಕ್, ಉಳ್ಳಾಲ ಠಾಣಾ ಪೊಲೀಸ್ ನಿರೀಕ್ಷಕರಾದ ಬಾಲಕೃಷ್ಣ ಹೆಚ್.ಎನ್, ಪಿಎಸ್‍ಐಗಳಾದ ಶೀತಲ್ ಅಲಗೂರ, ಸಂತೋಷ ಕುಮಾರ್ ಡಿ, ಪಿಎಸ್‍ಐ ಪುನೀತ್ ಗಾಂವ್‍ಕರ್, ಸಿಬ್ಬಂದಿಗಳಾದ ಸಾಜು ನಾಯರ್, ಮಹೇಶ್, ಶಿವಕುಮಾರ್ ಇದ್ದರು.
Ullal drug peddler arrested by ACP team in Mangalore.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm